ಸರ್ಕಾರಿ ಗೌರವ & ವೀರಶೈವ ಲಿಂಗಾಯತ ಸಂಪ್ರದಾಯದಂತೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ

Date:

ವಯೋಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾದ ಕಾಂಗ್ರೆಸ್‌ನ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರೆವೇರಿತು.

- Advertisement -

ದಾವಣಗೆರೆ ಹೃದಯ ಭಾಗವಾದ ಹೈಸ್ಕೂಲ್ ಮೈದಾನದಲ್ಲಿ ಸೋಮವಾರ ಸಂಜೆ 4 ಗಂಟೆವರೆಗೂ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಗಣ್ಯರು, ಸಾ‌ರ್ವಜನಿಕರು ಹಾಗೂ ಅಭಿಮಾನಿಗಳು ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಬಳಿಕ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡರು.

ಹೈಸ್ಕೂಲ್ ಮೈದಾನದಿಂದ ಮೆರವಣಿಗೆ ಮೂಲಕ‌ ಪಾರ್ಥಿವ ಶರೀರವನ್ನು ಆನೆಕೊಂಡದ ಶಾಮನೂರ ಮನೆತನದ ಕಲ್ಲೇಶ್ವರ ರೈಸ್ ಮಿಲ್ ಜಾಗಕ್ಕೆ ಕರೆತಂದು ವೀರಶೈವ ಸಂಪ್ರದಾಯದಂತೆ ವಿಧಿವಿಧಾನಗಳ ಮೂಲಕ ಅಂತ್ಯಸಂಸ್ಕಾರ ಮಾಡಲಾಯಿತು.

ಶಾಮನೂರು ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಗೌರವ ವಂದನೆ ಸಲ್ಲಿಸಲಾಯಿತು. ರಾಷ್ಟ್ರಗೀತೆ ಹಾಡುವ ಮೂಲಕ ಗೌರವ ವಂದನೆ ಸಲ್ಲಿಸಲಾಯಿತು. ಪಾರ್ಥಿವ ಶರೀರದ ಮೇಲೆ ರಾಷ್ಟ್ರಧ್ವಜ ಹೊದಿಸಿ ಮುಖ್ಯಮಂತ್ರಿಗಳ ಸಮ್ಮುಖದಲ್ಲೇ
ಗಾಳಿಯಲ್ಲಿ 3 ಸುತ್ತು ಗುಂಡು ಹಾರಿಸಿ ಅಂತಿಮ ನಮನ ಸಲ್ಲಿಸಲಾಯಿತು.

Shamanur Shivashankarappa 1 1

ಎಂಸಿಸಿ ಬಡಾವಣೆಯ ‘ಬಿ’ ಬ್ಲಾಕ್‌ನಿಂದ ಹೊರಟ ಮೆರವಣಿಗೆಯಲ್ಲಿ ಭಜನೆ ತಂಡಗಳು ಭಕ್ತಿ ಗೀತೆ ಹಾಡಿದವು. ಪಾರ್ಥಿವ ಶರೀರದ ಕೈವಲ್ಯಕ್ಕೆ ಪುತ್ರ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೆಗಲು ಕೊಟ್ಟಿದ್ದರು. ರಸ್ತೆಯ ಇಕ್ಕೆಲಗಳಲ್ಲಿ ಸಾಲಾಗಿ ನಿಂತಿರುವ ಜನರು ಹೂಹಾರ ಹಾಕಿ ಗೌರವ ಸಲ್ಲಿಸಿದರು. ಶಾಮನೂರು ರಸ್ತೆ, ಗುಂಡಿ ವೃತ್ತ, ಚರ್ಚ್ ರಸ್ತೆ, ರಾಮ್ ಅಂಡ್ ಕೋ ವೃತ್ತ, ಎವಿಕೆ ಕಾಲೇಜು ರಸ್ತೆಯ ಮೂಲಕ ಸಾಗಿದ ಮೆರವಣಿಗೆ ಹೈಸ್ಕೂಲ್ ಮೈದಾನ ತಲುಪಿತು.

ಗೃಹ ಸಚಿವ ಜಿ.ಪರಮೇಶ್ವರ, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜ ಸಚಿವರಾದ ಎಸ್‌.ಎ.ರವೀಂದ್ರನಾಥ, ಎಂ.ಪಿ.ರೇಣುಕಾಚಾರ್ಯ, ಶಾಸಕ ಕೆ.ಎಸ್. ಬಸವಂತಪ್ಪ, ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅಂತಿಮ ದರ್ಶನ ಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು ಬೆಸೆಯಲಿ

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ...

ನನಸಿನತ್ತ ಕರಾವಳಿ ಕನಸು: ಶೀಘ್ರದಲ್ಲೇ ರಾಜ್ಯದ 2ನೇ ಅಧಿಕೃತ ಭಾಷೆಯಾಗಲಿದೆ ತುಳು!

ಕರಾವಳಿ ಜನರ ಬಹುಕಾಲದ ಕನಸು ಮತ್ತು ಬೇಡಿಕೆಯಾದ ತುಳು ಭಾಷೆಗೆ ರಾಜ್ಯದ...

ಕೆಪಿಎಸ್‌ಸಿ ಮಾಜಿ ಅಧ್ಯಕ್ಷರ ಪುತ್ರಿಗೆ ನಕಲಿ ದಾಖಲೆ ನೀಡಿದ್ದ ಕಂದಾಯ ಅಧಿಕಾರಿಯ ಜಾಮೀನು ಅರ್ಜಿ ವಜಾ

ಅಮಾನತುಗೊಂಡಿರುವ ಕೆಪಿಎಸ್‌ಸಿ ಅಧ್ಯಕ್ಷರ ಪುತ್ರಿಗೆ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ...

ನಕಲಿ ಹಕ್ಕುಪತ್ರ ತಡೆಗೆ ಕ್ರಮ; ಮಾಲೀಕರ ಫೋಟೋವುಳ್ಳ ‘RTC’ ಜಾರಿಗೆ ಸರ್ಕಾರ ನಿರ್ಧಾರ!

ರಾಜ್ಯದ ಭೂ ಮಾಲೀಕರು ಮತ್ತು ರೈತರಿಗೆ ಭೂಮಿಯ ಹಕ್ಕುಸ್ವಾಮ್ಯ ಮತ್ತು ಮಾಲೀಕತ್ವದ...