ಶಿವಮೊಗ್ಗ ಜಂಬೂ ಸವಾರಿ ವೇಳೆ ಭಾರೀ ಅನಾಹುತ: ಅಂಬಾರಿ ಹೊತ್ತು ಅಡ್ಡಾದಿಡ್ಡಿ ಓಡಿದ ಆನೆ

Date:

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಅದ್ಧೂರಿ ಚಾಲನೆ ಸಿಕ್ಕು ಅಲ್ಲಿನ ಆನೆಗಳು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದರೆ, ಇತ್ತ ಶಿವಮೊಗ್ಗದಲ್ಲಿ ಆಯೋಜನೆಯಾಗಿದ್ದ ದಸರಾ ಜಂಬೂ ಸವಾರಿ ವೇಳೆ ಭಾರೀ ಆತಂಕದ ಘಟನೆಯೊಂದು ಸಂಭವಿಸಿದೆ. 450 ಕೆಜಿ ತೂಕದ ಬೆಳ್ಳಿ ಅಂಬಾರಿಯನ್ನು ಹೊತ್ತು ಸಾಗುತ್ತಿದ್ದ ‘ಸೋಮಣ್ಣ’ ಆನೆ ದಿಢೀರನೆ ಬೆದರಿ ಓಡಿದ ಪರಿಣಾಮ ಅಂಬಾರಿ ಕೆಳಗೆ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

- Advertisement -

​ನಗರದ ಶಿವಪ್ಪನಾಯಕ ಅರಮನೆ (ಕೋಟೆ ಶ್ರೀ ಭೀಮೇಶ್ವರ ಹಾಗೂ ಚಂದ್ರಮೌಳೇಶ್ವರ ದೇವಾಲಯಗಳ ಆವರಣ) ಯಿಂದ ಈ ಐತಿಹಾಸಿಕ ದಸರಾ ಜಂಬೂ ಸವಾರಿಗೆ ಅದ್ಧೂರಿ ಚಾಲನೆ ನೀಡಲಾಗಿತ್ತು. ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಯನ್ನು ಬೆಳ್ಳಿ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿ, ಸಾಂಪ್ರದಾಯಿಕ ಪೂಜೆ ಸಲ್ಲಿಸಿದ ನಂತರ ಮೆರವಣಿಗೆ ಆರಂಭವಾಯಿತು. ಆದರೆ, ಕೇವಲ 200 ಮೀಟರ್ ದೂರ ಸಾಗುತ್ತಿದ್ದಂತೆ ಅಂಬಾರಿ ಹೊತ್ತಿದ್ದ ಸಕ್ರೆಬೈಲು ಆನೆ ಬಿಡಾರದ ‘ಸೋಮಣ್ಣ’ ಅಪಾರ ಜನಸಂದಣಿ ಮತ್ತು ವಾದ್ಯಗಳ ಶಬ್ದಕ್ಕೆ ಏಕಾಏಕಿ ಬೆದರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಇಂಟರ್ನೆಟ್‌ನಿಂದ AIವರೆಗೆ.. ದಶಕಗಳ ಹಿಂದೆಯೇ ಜಗತ್ತಿನ ಭವಿಷ್ಯ ಕಂಡಿದ್ದ...

ತಂತ್ರಜ್ಞಾನ ನಮ್ಮ ಕೈಸೇರುವ, ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗುವ ದಶಕಗಳ ಹಿಂದೆಯೇ, ಅಂದಿನ ಕಾಲದ ಕಲಾವಿದರು ತಮ್ಮ ಗೀತೆಗಳ ಸಾಲುಗಳ ಮೂಲಕ ಮುಂದಿನ ಜಗತ್ತು ಹೀಗೇ ಇದ್ದೀತೆಂದು ಖಚಿತವಾಗಿ ಹೇಳಿದ್ದರು. ಮಾನವಕುಲವು ಮುಂದೆ...

ಕೊಪ್ಪಳ | ದಸರಾ ಪುರಾಣ ಪ್ರವಚನಕ್ಕೆ ಮುಸ್ಲಿಂ ಕಲಾವಿದನ...

ಧರ್ಮಗಳು ಬೇರೆ ಬೇರೆಯಾದರೂ ಕಲೆ, ಸಂಸ್ಕೃತಿ ಮತ್ತು ಮಾನವೀಯತೆಯ ಮುಂದೆ ಧರ್ಮದ ಗಡಿಗಳು ಅಡ್ಡಿಯಾಗುವುದಿಲ್ಲ ಎಂಬುದಕ್ಕೆ ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮ ಸಾಕ್ಷಿ. ಇಲ್ಲಿನ ಕಂಪ್ಲಿಯಲ್ಲಿರುವ ಬನಶಂಕರಿ ದೇವಸ್ಥಾನದಲ್ಲಿ ನಡೆಯುವ ದಸರಾ ಪುರಾಣ...

​ಕ್ಷಣಾರ್ಧದಲ್ಲಿಯೇ ಶಾಂತವಾಗಿದ್ದ ಸೋಮಣ್ಣ ಹಿಮ್ಮುಖವಾಗಿ ತಿರುಗಿ ಕೋಟೆ ರಸ್ತೆ ಸೇರಿದಂತೆ ಕಿರಿದಾದ ಗಲ್ಲಿಗಳಲ್ಲಿ ಅಡ್ಡಾದಿಡ್ಡಿಯಾಗಿ ಓಡಲಾರಂಭಿಸಿದೆ. ಆನೆಯ ಈ ದಿಢೀರ್ ವರ್ತನೆಯಿಂದ ಗಾಬರಿಗೊಂಡ ಅದರ ಮೇಲಿದ್ದ ಮಾವುತ ಹಾಗೂ ಕಾವಾಡಿಗರು ನಿಯಂತ್ರಣ ಕಳೆದುಕೊಂಡು ಕೆಳಗೆ ಬಿದ್ದಿದ್ದಾರೆ. ಇದೇ ರಭಸದಲ್ಲಿ ಆನೆಯ ಬೆನ್ನ ಮೇಲಿದ್ದ ತಾಯಿ ಚಾಮುಂಡೇಶ್ವರಿಯ ಬೆಳ್ಳಿ ಅಂಬಾರಿ ಕಳಚಿ, ರಸ್ತೆ ಬದಿ ನಿಲ್ಲಿಸಲಾಗಿದ್ದ ಕಾರಿನ ಮೇಲೆ ಉರುಳಿ ಬಿದ್ದಿದೆ. ಅಂಬಾರಿಯ ಭಾರಕ್ಕೆ ಕಾರಿನ ಮೇಲ್ಭಾಗ ಜಖಂಗೊಂಡು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಆನೆಯ ಆರ್ಭಟಕ್ಕೆ ಕೆಲವು ಬೈಕ್‌ಗಳಿಗೂ ಹಾನಿಯಾಗಿದೆ.

​ಅಂಬಾರಿ ಹೊತ್ತ ಆನೆ ಹೆದರಿ ನಗರದ ಕಿರಿದಾದ ರಸ್ತೆಗಳತ್ತ ನುಗ್ಗುತ್ತಿದ್ದಂತೆ, ಮೆರವಣಿಗೆಯನ್ನು ವೀಕ್ಷಿಸಲು ಜಮಾಯಿಸಿದ್ದ ಸಾವಿರಾರು ಸಾರ್ವಜನಿಕರು ಹಾಗೂ ಭಕ್ತರು ಕಾಲ್ತುಳಿತದ ಭೀತಿಯಿಂದ ದಿಕ್ಕಾಪಾಲಾಗಿ ಓಡಿದ್ದಾರೆ. ಇದರಿಂದಾಗಿ ಕೆಲಕಾಲ ಸ್ಥಳದಲ್ಲಿ ತೀವ್ರ ಗೊಂದಲ‌ ಹಾಗೂ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

​ಘಟನೆ ಸಂಭವಿಸುತ್ತಿದ್ದಂತೆ ತಕ್ಷಣ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆಯ ತಜ್ಞ ವೈದ್ಯರು, ಸಿಬ್ಬಂದಿ, ಪಾಲಿಕೆ ಅಧಿಕಾರಿಗಳು ಹಾಗೂ ಪೊಲೀಸರು ಚಾಣಾಕ್ಷತನದಿಂದ ಆನೆಯನ್ನು ಹಿಂಬಾಲಿಸಿದರು. ಸುತ್ತುವರಿದು ಆನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಮೂಲಕ ಯಶಸ್ವಿಯಾಗಿ ತಹಬಂದಿಗೆ ತಂದರು. ನಂತರ ಆನೆಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದ್ದು, ಯಾವುದೇ ಪ್ರಾಣಾಪಾಯವಿಲ್ಲದೆ ಭಾರೀ ದುರಂತವೊಂದು ತಪ್ಪಿದಂತಾಗಿದೆ. ಘಟನೆಯ ಹಿನ್ನೆಲೆಯಲ್ಲಿ ಜಂಬೂ ಸವಾರಿಯನ್ನು ಸ್ಥಗಿತಗೊಳಿಸಲಾಯಿತು.

​ಅಂಬಾರಿ ಹೊಣೆ ಬದಲಾಗಿದ್ದೇ ಘಟನೆಗೆ ಕಾರಣ:

ಶಿವಮೊಗ್ಗ ದಸರಾದಲ್ಲಿ ಕಳೆದ ಹಲವು ವರ್ಷಗಳಿಂದ ‘ಸಾಗರ್’ ಎಂಬ ಆನೆಯೇ ಸತತವಾಗಿ ಅಂಬಾರಿ ಹೊರುತ್ತಿತ್ತು. ಈ ಬಾರಿಯೂ ಮೊದಲಿಗೆ ಸಾಗರ್‌ಗೆ ಅಂಬಾರಿ ಹೊರಲು ತರಬೇತಿ ನೀಡಲಾಗಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಸಾಗರ್ ಕಾಲಿನಲ್ಲಿ ನೋವು ಕಾಣಿಸಿಕೊಂಡಿದ್ದರಿಂದ ವೈದ್ಯರ ಸಲಹೆಯಂತೆ ‘ಸೋಮಣ್ಣ’ನಿಗೆ ಮೊದಲ ಬಾರಿಗೆ ಈ ಜವಾಬ್ದಾರಿ ನೀಡಲಾಗಿತ್ತು. ಮೊದಲ ಬಾರಿಗೆ ನಗರದ ಅಪಾರ ಜನಸಂದಣಿ, ವಾದ್ಯಘೋಷಗಳ ನಡುವೆ ಅಂಬಾರಿ ಹೊತ್ತಿದ್ದ ಸೋಮಣ್ಣ ಶಬ್ದಕ್ಕೆ ಬೆದರಿ ಈ ಅವಘಡ ಸಂಭವಿಸಿದೆ ಎಂದು ಅರಣ್ಯ ಇಲಾಖೆಯ ಮೂಲಗಳು ಸ್ಪಷ್ಟಪಡಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಹಿಂಪಡೆದ ಸಿಜೆಪಿ ನಾಯಕರು

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ನಡೆಸಿದ ಪ್ರಕರಣದಲ್ಲಿ...

ಜೆಎನ್‌ಯು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ: ಅಮಾನತು ಆದೇಶ ವಾಪಸ್, 17 ದಿನಗಳ ಪ್ರತಿಭಟನೆ ಅಂತ್ಯ

ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಸಂಘದ (ಜೆಎನ್‌ಯುಎಸ್‌ಯು) ಪದಾಧಿಕಾರಿಗಳ ಮೇಲಿದ್ದ...