ಸಿಜೆಐ ಮೇಲೆ ಶೂ ಎಸೆತ | ಸಂವಿಧಾನದ ಸಾರ್ವಭೌಮತ್ವಕ್ಕೆ ಅಪಮಾನ: ಬಿ ವೈ ವಿಜಯೇಂದ್ರ

Date:

ಸರ್ವೋಚ್ಛ ನ್ಯಾಯಾಲಯದ ಘನತೆವೆತ್ತ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರನ್ನು ಅಪಮಾನಿಸಲು ಯತ್ನಿಸಿರುವ ಘಟನೆ ಅತ್ಯಂತ ಖಂಡನೀಯ. ಈ ಘಟನೆ ಸಂವಿಧಾನದ ಸಾರ್ವಭೌಮತ್ವವನ್ನು ಅಪಮಾನಿಸಲು ಯತ್ನಿಸಿದ ನೀಚ ಹಾಗೂ ಅನಾಗರೀಕ ವರ್ತನೆಯಾಗಿದ್ದು ಕೃತ್ಯ ಎಸಗಿದ ವಕೀಲನ ವರ್ತನೆ ಯಾರೂ ಕ್ಷಮಿಸಲಾರದ ದುಷ್ಕೃತ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

- Advertisement -

“ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಪಮಾನಿಸುವ ಹಾಗೂ ಅಗೌರವ ತೋರುವ ವರ್ತನೆ ಹಾಗೂ ಕೃತ್ಯಗಳು ವಿದ್ರೋಹಿತನದ ಪರಮಾವಧಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ತಿಹಾಸದಲ್ಲಿ ಹಿಂದೆಂದೂ ಕೇಳರಿಯದ ಘಟನೆ ಸುಪ್ರೀಂ ಕೋರ್ಟ್‌ನ ಸಿಜೆಐ ಪೀಠದಲ್ಲಿಯೇ ನಡೆದಿದೆ. ಹಿರಿಯ ವಕೀಲ ರಾಕೇಶ್‌ ಕಿಶೋರ್‌ ಎಂಬುವರು ದೇಶದ ಮುಖ್ಯ ನ್ಯಾಯಮೂರ್ತಿ ಬಿ ಆರ್‌ ಗವಾಯಿ ಅವರನ್ನು ಗುರಿಯಾಗಿಸಿಕೊಂಡು ಶೂ ಎಸೆದಿದ್ದಾರೆ.

ಸಿಜೆಐ ಮೇಲೆ ಶೂ ಎಸೆಯುಲು ಪ್ರಯತ್ನಿಸಿದ ಹಿರಿಯ ವಕೀಲ ರಾಕೇಶ್‌ ಕಿಶೋರ್‌ನನ್ನು ಕಲಾಪದ ಆವರಣದಿಂದ ಹೊರಗೆಳೆಯಲು ಪ್ರಯತ್ನಿಸುವಾಗ,’ಸನಾತನ ಧರ್ಮಕ್ಕೆ ಅವಮಾನ ಆಗೋದನ್ನ ಭಾರತ ಸಹಿಸೋದಿಲ್ಲ’ ಎಂದು ಕೂಗಿದ್ದಾರೆ.

ಈ ಪ್ರಕರಣ ನ್ಯಾಯಾಂಗದ ಘನತೆ ಮತ್ತು ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ವ್ಯಾಖ್ಯಾನಿಸಲಾಗಿದ್ದು, ರಾಜಕೀಯ ಹಾಗೂ ಸಾಮಾಜಿಕ ವಿಭಜನೆಯ ಅಪಾಯಗಳನ್ನು ಎತ್ತಿ ತೋರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...

‘ಕೊಂದವರು ಯಾರು?’ – ಧರ್ಮಸ್ಥಳದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅ.2ರಂದು ಬೃಹತ್ ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ...

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...