ಸಿಜೆಐ ಮೇಲೆ ಶೂ ಎಸೆತ | ಮನುವಾದಿಗಳ ಮನಸ್ಸಲ್ಲಿ ಭದ್ರವಾಗಿ ಉಳಿದಿರುವ ಜಾತಿಯತೆಗೆ ಸಾಕ್ಷಿ: ಸಿದ್ದರಾಮಯ್ಯ

Date:

Advertisements

ಸುಪ್ರೀಂ ಕೋ‌ರ್ಟ್‌ನ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

“ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಸ್ಥಾನಕ್ಕೇರಿದವರು. ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಂತರವೂ ಮನುವಾದಿಗಳ ಮನಸ್ಸಲ್ಲಿ ಭದ್ರವಾಗಿ ಉಳಿದುಕೊಂಡಿದೆ ಎನ್ನುವುದಕ್ಕೆ ಇಂದಿನ ಘಟನೆ ಸಾಕ್ಷಿಯಾಗಿದೆ” ಎಂದು ಎಕ್ಸ್‌ ತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಗೌರವಾನ್ವಿತ ಮುಖ್ಯನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರು ಒಬ್ಬಂಟಿಯಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಕೋಟ್ಯಂತರ ಜಾತ್ಯತೀತ ಮನಸ್ಸುಗಳು ಅವರ ಬೆಂಬಲಕ್ಕೆ ಇವೆ ಎನ್ನುವುದನ್ನು ಅವರ ಗಮನಕ್ಕೆ ತರಬಯಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಯಾವುದೇ ಪಕ್ಷ ಇಲ್ಲವೇ ಧರ್ಮಕ್ಕೆ ಸೇರಿದವರಲ್ಲ. ಈ ದೃಷ್ಟಿಯಿಂದ ದೇಶದ ಎಲ್ಲ ಜಾತಿ, ಧರ್ಮ ಮತ್ತು ಪಕ್ಷಗಳ ಜನರು ಸುಪ್ರೀಂ ಕೋರ್ಟ್ ನಲ್ಲಿ ಇಂದು ನಡೆದಿರುವ ಘಟನೆಯನ್ನು ಒಕ್ಕೊರಲಿನಿಂದ ಖಂಡಿಸಬೇಕು” ಎಂದು ಮನವಿ ಮಾಡಿದ್ದಾರೆ.

Advertisements

“ಜಾತಿ ಮತ್ತು ಧರ್ಮದ ಹೆಸರಲ್ಲಿ ಸಮಾಜವನ್ನು ಒಡೆದುಹಾಕಿ, ಪರಸ್ಪರ ದ್ವೇಷ ಮತ್ತು ಅಸಹನೆಯನ್ನು ಹುಟ್ಟುಹಾಕಿರುವ ಕಾರಣಕ್ಕಾಗಿಯೇ ರಾಕೇಶ್ ಕಿಶೋರ್ ನಂತಹ ಮನುವಾದಿ ಮನಸ್ಸುಗಳು ಸಮಾಜದಲ್ಲಿ ಹುಟ್ಟಿಕೊಂಡಿವೆ ಎನ್ನುವುದನ್ನು ನಾವು ಮರೆಯಬಾರದು. ನಾಥೂರಾಮ್ ಗೋಡ್ಸೆಯಂತಹ ಒಬ್ಬ ಕೊಲೆಗಡುಕನನ್ನು ದೇಶಪ್ರೇಮಿ ಎಂದು ಮೆರೆಸಲು ಹೊರಟಿರುವ ರೀತಿಯಲ್ಲಿಯೇ ಕೆಲವು ಪುಂಡರು ವಕೀಲನ ಕುಕೃತ್ಯವನ್ನು ಸಂಭ್ರಮಿಸುತ್ತಿರುವುದನ್ನು ಕಾಣುತ್ತಿದ್ದೇವೆ. ಇಂತಹವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕಾದ ಅಗತ್ಯ ಇದೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಮಸಮಾಜವನ್ನು ಬಯಸದವರು ಸಮೀಕ್ಷೆ ವಿರೋಧಿಸುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ...

ವೀರಶೈವ-ಲಿಂಗಾಯತರು ಕೆಟ್ಟರೆ ರಾಜ್ಯವೇ ಕೆಡುತ್ತದೆ: ಸಚಿವ ಈಶ್ವರ ಖಂಡ್ರೆ

ವೀರಶೈವ -ಲಿಂಗಾಯತರನ್ನು ಬೇರೆ ಮಾಡಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ. ಇಬ್ಬರೂ ಒಂದೇ...

ಕಾಫ್‌ ಸಿರಪ್ ದುರಂತ | ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ: ದಿನೇಶ್‌ ಗುಂಡೂರಾವ್‌

ದೇಶದ ಬೇರೆ ರಾಜ್ಯಗಳಲ್ಲಿ ಕಾಫ್‌ ಸಿರಪ್ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ...

ಸಾಮಾಜಿಕ – ಶೈಕ್ಷಣಿಕ ಸಮೀಕ್ಷೆ | 1.09 ಕೋಟಿ ಮನೆಗಳ ಸಮೀಕ್ಷೆ ಪೂರ್ಣ: ಕೊಪ್ಪಳ ಪ್ರಥಮ

ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ...

Download Eedina App Android / iOS

X