ನೂತನ ನಿಯಮ | ಈ ಅಂಗಡಿ ಮುಂಗಟ್ಟುಗಳು ದಿನದ 24 ಗಂಟೆ ತೆರೆದಿರಬಹುದು

Date:

Advertisements

ಅಂಗಡಿ ಮುಂಗಟ್ಟು ದಿನದ 24 ಗಂಟೆಗಳು ತೆರೆದಿರುವುದಕ್ಕೆ ಸಂಬಂಧಿಸಿ ರಾಜ್ಯ ಕಾರ್ಮಿಕ ಇಲಾಖೆಯು ನೂತನ ನಿಯಮಗಳು ಮತ್ತು ಷರತ್ತುಗಳನ್ನು ಘೋಷಿಸಿದೆ. ಹತ್ತು ಅಥವಾ ಅದಕ್ಕಿಂತ ಹೆಚ್ಚು ಜನರು ಕೆಲಸ ಮಾಡುವ ಎಲ್ಲಾ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳು ವರ್ಷದ ಎಲ್ಲಾ ದಿನಗಳಲ್ಲಿ, ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಕಾರ್ಮಿಕ ಇಲಾಖೆಯು ಶುಕ್ರವಾರ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆ ಕಾಯ್ದೆ 1961ರ ಅಡಿಯಲ್ಲಿ ಈ ಅಧಿಸೂಚನೆಯನ್ನು ಹೊರಡಿಸಿದೆ. ಆರ್ಥಿಕ ಚಟುವಟಿಕೆಯನ್ನು ಉತ್ತೇಜಿಸುವ ಮತ್ತು ಗ್ರಾಹಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ನಿರ್ಧಾರವನ್ನು ಮಾಡಲಾಗಿದೆ ಎಂದು ಸರ್ಕಾರ ತಿಳಿಸಿದೆ. ಇನ್ನು 2021ರ ಜನವರಿ 2ರಂದು ಸರ್ಕಾರ ಇದೇ ಆದೇಶ ಹೊರಡಿಸಿತ್ತು.

ನಿಯಮ ಪ್ರಕಾರ ಗರಿಷ್ಠ ಕೆಲಸದ ಅವಧಿಯು ದಿನಕ್ಕೆ ಎಂಟು ಗಂಟೆಗಳು ಮತ್ತು ವಾರಕ್ಕೆ 48 ಗಂಟೆಗಳು ಆಗಿದೆ. ಹೆಚ್ಚಿನ ಅವಧಿಯ ಕೆಲಸಕ್ಕೆ (ಓವರ್‌ ಟೈಮ್) ಅವಕಾಶ ನೀಡಲಾಗಿದೆ. ಆದರೆ ಅದಕ್ಕೂ ಮಿತಿಯನ್ನು ವಿಧಿಸಲಾಗಿದೆ. ದಿನಕ್ಕೆ 10 ಗಂಟೆಗಳು ಮತ್ತು ವಾರಕ್ಕೆ 50 ಗಂಟೆಗಳವರೆಗೆ ನಿಗದಿಪಡಿಸಲಾಗಿದೆ.

ಇದನ್ನು ಓದಿದ್ದೀರಾ? ಬೆಳಗಾವಿ | ನಿಯಮ ಮೀರಿ ಪ್ಲಾಸ್ಟಿಕ್ ಬಳಸಿದರೆ ಅಂಗಡಿಗಳ ಪರವಾನಗಿ ರದ್ದು: ಸುಭಾಷ್ ಆಡಿ ಎಚ್ಚರಿಕೆ

ಇನ್ನು ಎಲ್ಲಾ ಉದ್ಯೋಗಿಗಳಿಗೆ ವೇತನವು ಕರ್ನಾಟಕ ವೇತನ ಪಾವತಿ ನಿಯಮಗಳು 1963ಕ್ಕೆ ಅನುಗುಣವಾಗಿರಬೇಕು. ಯಾವುದೇ ಉದ್ಯೋಗದಾತರು ರಜಾದಿನಗಳಲ್ಲಿ ಅಥವಾ ಸಾಮಾನ್ಯ ಸಮಯವನ್ನು ಮೀರಿ ಹೆಚ್ಚಿನ ಕೆಲಸವನ್ನು ನೌಕರರಿಗೆ ನೀಡಿದರೆ ದಂಡವನ್ನು ಎದುರಿಸಬೇಕಾಗುತ್ತದೆ ಎಂದು ಸರ್ಕಾರ ಎಚ್ಚರಿಕೆ ನೀಡಿದೆ.

ಪ್ರತಿ ಉದ್ಯೋಗಿಗೆ ವಾರಕ್ಕೆ ಒಂದು ದಿನ ರಜೆ ನೀಡಬೇಕು. ಅದಕ್ಕೆ ಅನುಗುಣವಾಗಿ ಉದ್ಯೋಗಿಗಳನ್ನು ನೇಮಿಸಿಕೊಂಡಿರಬೇಕು. ಪಾರದರ್ಶಕತೆಯನ್ನು ಹೆಚ್ಚಿಸಲು, ಪ್ರತಿ ಉದ್ಯೋಗಿಯ ವಿವರಗಳನ್ನು ಹೊಂದಿರಬೇಕು, ಜೊತೆಗೆ ಅವರು ತೆಗೆದುಕೊಂಡ ರಜೆಯ ದಾಖಲೆ ಹೊಂದಿರಬೇಕು. ಯಾವುದೇ ನಿಯಮ ಉಲ್ಲಂಘನೆಯಾಗಿದ್ದರೆ ಉದ್ಯೋಗದಾತ/ ಮ್ಯಾನೇಜರ್ ಮೇಲೆ ದಂಡವನ್ನು ವಿಧಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

ಇನ್ನು ಪಬ್‌ಗಳು, ಕ್ಲಬ್‌ಗಳು ಮತ್ತು ಬಾರ್‌ಗಳಿಗೆ ಈ ನಿಯಮವು ಅನ್ವಯಿಸುವುದಿಲ್ಲ. ಅವುಗಳಿಗೆ ಪ್ರತ್ಯೇಕ ನಿಯಮಗಳಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಇದನ್ನು ಓದಿದ್ದೀರಾ? ಬೆಂಗಳೂರು | 625 ಅಂಗಡಿಗಳಲ್ಲಿ ಇನ್ನು ಕನ್ನಡ ನಾಮಫಲಕ ಅಳವಡಿಕೆ ಬಾಕಿ

ಮಹಿಳೆಯರ ಸುರಕ್ಷತೆಗಾಗಿ ನಿಯಮಗಳು

ಯಾವುದೇ ದಿನವಾಗಲಿ ಅಥವಾ ಯಾವುದೇ ಸಂದರ್ಭಗಳಲ್ಲಿ ರಾತ್ರಿ 8 ಗಂಟೆಯ ನಂತರ ಯಾವುದೇ ಮಹಿಳೆಯರನ್ನು ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಕೆಲಸ ಮಾಡಿಸಬಾರದು ಎಂದು ಸರ್ಕಾರ ಶುಕ್ರವಾರ ಘೋಷಿಸಿದೆ. ಹಾಗೆಯೇ ಮಹಿಳಾ ಉದ್ಯೋಗಿ ತಾವಾಗಿಯೇ ರಾತ್ರಿ 8ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಕೆಲಸ ಮಾಡಲು ಬಯಸಿದರೆ ಲಿಖಿತ ಒಪ್ಪಿಗೆಯನ್ನು ತೆಗೆದುಕೊಳ್ಳಬೇಕು ಎಂದು ಹೇಳಿದೆ.

ಶಿಫ್ಟ್‌ಗಳಲ್ಲಿ ಕೆಲಸ ಮಾಡುವ ಮಹಿಳಾ ಉದ್ಯೋಗಿಗಳಿಗೆ ಸಾರಿಗೆ ಸೌಲಭ್ಯಗಳನ್ನು ಒದಗಿಸುವುದು ಕಡ್ಡಾಯವಾಗಿದೆ. ಮಹಿಳೆಯನ್ನು ನೇಮಿಸುವ ಪ್ರತಿಯೊಂದು ಅಂಗಡಿ ಮುಗ್ಗಟ್ಟುಗಳಲ್ಲಿ ಲೈಂಗಿಕ ಕಿರುಕುಳದ ವಿರುದ್ಧ ಆಂತರಿಕ ದೂರುಗಳ ಸಮಿತಿಯನ್ನು ರಚಿಸಬೇಕು ಎಂದು ಸರ್ಕಾರ ಸೂಚಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

Download Eedina App Android / iOS

X