ಬಿಟ್‌ಕಾಯಿನ್ ಹಗರಣ: ಶ್ರೀಕಿ ಸೇರಿ ಮೂವರ ಬಂಧನ

Date:

ಬಿಟ್‌ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಅವರನ್ನು ಜಾರಿ ನಿರ್ದೇಶನಾಲಯ (ED) ಬಂಧಿಸಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿಯನ್ನು ಬಂಧಿಸಲಾಗಿದೆ.

- Advertisement -

ಶ್ರೀಕಿಯೊಂದಿಗೆ ಹಗರಣದಲ್ಲಿ ಭಾಗಿಯಾಗಿದ್ದ ಎನ್ನಲಾದ ರಾಬಿನ್ ಖಂಡೇಲ್ವಾಲ್ ಅವರನ್ನೂ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜತೆಯಾಗಿ ಮೂವರನ್ನು ಬಂಧಿಸಲಾಗಿದೆ. ಈ ಹಿಂದೆ 2021ರಲ್ಲಿಯೂ ಹ್ಯಾಕಿಂಗ್ ಮತ್ತು ಹಲ್ಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಶ್ರೀಕಿ ಬಂಧಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? ಬಿಟ್ ಕಾಯಿನ್ ಹಗರಣ | ಆರೋಪಿ ಶ್ರೀಕಿ ಸ್ನೇಹಿತೆ ಪೂಜಾ ಭಟ್​​ಗೆ ನೋಟಿಸ್ ನೀಡಿದ ಎಸ್‌ಐಟಿ

ಶ್ರೀಕಿ ಹ್ಯಾಕ್ ಮಾಡಿದ ಬಿಟ್‌ಕಾಯಿನ್‌ಗಳಿಂದ ಬಂದ ಹಣದ ಪ್ರಾಥಮಿಕ ಫಲಾನುಭವಿಗಳು ನಲಪಾಡ್ ಸಹೋದರರು ಎಂದು ಇಡಿ ಆರೋಪಿಸಿದೆ. ಶ್ರೀಕಿ ನಲಪಾಡ್ ಖಾತೆಗೆ ಸುಮಾರು 10 ಲಕ್ಷ ರೂ. ವರ್ಗಾಯಿಸಿರುವ ಶಂಕೆ ವ್ಯಕ್ತವಾಗಿದೆ.

ಈ ಹಗರಣವು ಬೊಮ್ಮಾಯಿ ಅವರು ಗೃಹ ಸಚಿವರಾಗಿದ್ದ ಕಾಲದಲ್ಲಿ ನಡೆದಿದ್ದು, ಹ್ಯಾಕರ್ ಶ್ರೀಕೃಷ್ಣ (ಶ್ರೀಕಿ) ವಶದಲ್ಲಿದ್ದಾಗ ಬಿಟ್‌ಕಾಯಿನ್‌ಗಳನ್ನು ಲೂಟಿ ಮಾಡಲಾಗಿದೆ ಮತ್ತು ಈ ವಿಷಯವನ್ನು ಮುಚ್ಚಿಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದರು.

ಈ ಆರೋಪಗಳನ್ನು ಬೊಮ್ಮಾಯಿ ಅವರು ತಿರಸ್ಕರಿಸಿದ್ದು, ತಮ್ಮ ಸರ್ಕಾರವೇ ಈ ಹಗರಣವನ್ನು ಪತ್ತೆಹಚ್ಚಿ ತನಿಖೆಗೆ ಆದೇಶಿಸಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಈ ಹಗರಣದ ಮರುತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (SIT) ರಚಿಸಿದೆ.

ಈಗ ಇಡಿ ಶ್ರೀಕಿಯನ್ನು ಬಂಧಿಸಿದ್ದು, ತನಿಖೆಯು ಈಗ ತೀವ್ರಗೊಂಡಿದೆ. ಇದು ರಾಜಕೀಯ ವಲಯದಲ್ಲಿ ಮತ್ತೆ ಸಂಚಲನ ಮೂಡಿಸಿದ್ದು, ಹಳೆಯ ಪ್ರಕರಣಗಳ ಮರುಪರಿಶೀಲನೆ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...