ಕೇಂದ್ರ ಸಾಹಿತ್ಯ ಅಕಾಡೆಮಿ: ಯುವ ಪುರಸ್ಕಾರಕ್ಕೆ ಶ್ರುತಿ ಬಿಆರ್, ಬಾಲ ಪುರಸ್ಕಾರಕ್ಕೆ ಕೃಷ್ಣಮೂರ್ತಿ ಬಿಳಿಗೆರೆ ಆಯ್ಕೆ

Date:

Advertisements

2024ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರಕ್ಕೆ ಕವಯತ್ರಿ ಶ್ರುತಿ ಬಿಆರ್‌ ಆಯ್ಕೆಯಾಗಿದ್ದಾರೆ. ಶ್ರುತಿ ಬಿಆರ್‌ ಅವರ ಚೊಚ್ಚಲ ಕವನ ಸಂಕಲನ ‘ಜಿರೋ ಬ್ಯಾಲೆನ್ಸ್‌’ಗೆ ಯುವ ಪುರಸ್ಕಾರ ಲಭಿಸಿದೆ. ಬಾಲ ಪುರಸ್ಕಾರಕ್ಕೆ ಕೃಷ್ಣಮೂರ್ತಿ ಬಿಳಿಗೆರೆ ಆಯ್ಕೆಯಾಗಿದ್ದಾರೆ.

ಮೂಲತಃ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯವರಾದ ಶ್ರುತಿ ಬಿಆರ್ ಪ್ರಸ್ತುತ ಬೆಂಗಳೂರಿನಲ್ಲಿ ಕೆ.ಎ.ಎಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಮಾನಸ ಗಂಗೋತ್ರಿಯ ಮೈಸೂರು ವಿಶ್ವವಿದ್ಯಾನಿಲಯದಿಂದ ಪ್ರಥಮ ರ್‍ಯಾಂಕ್‌ ಮತ್ತು ಐದು ಚಿನ್ನದ ಪದಕಗಳೊಂದಿಗೆ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, 2017 ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಪಿ.ಹೆಚ್.ಡಿ. ಪದವಿ ಪಡೆದಿದ್ದಾರೆ.

Advertisements

ಅವರ ಹಲವಾರು ಲೇಖನಗಳು, ಕವಿತೆಗಳು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. 2008ರಲ್ಲಿ ಪ್ರಜಾವಣಿ ದೀಪಾವಳಿ ವಿಶೇಷಾಂಕದ ಕವನ ಸ್ಪರ್ಧೆಯ ವಿದ್ಯಾರ್ಥಿ ವಿಭಾಗದ ಬಹುಮಾನ ದೊರೆತಿದೆ.

ಇದನ್ನು ಓದಿದ್ದೀರಾ?  ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರಕ್ಕೆ ಮಂಜುನಾಯಕ ಚಳ್ಳೂರು, ಬಾಲ ಪುರಸ್ಕಾರಕ್ಕೆ ವಿಜಯಶ್ರೀ ಹಾಲಾಡಿ ಆಯ್ಕೆ

ಜೀರೋ ಬ್ಯಾಲೆನ್ಸ್ ಶೀರ್ಷಿಕೆ ಕ್ಯಾಚಿಯಾಗಿದ್ದು ಅದರೊಳಗಿರಯವ ಕವಿತೆಗಳು ಕೂಡಾ ಓದುಗರ ಮನಸ್ಸನ್ನು ಹಿಡಿದಿಟ್ಟುಕೊಳ್ಳುವಂತಿದೆ. ದೇಶದಲ್ಲಿ ಕಾಡುತ್ತಿರುವ ಆರ್ಥಿಕ ಮುಗ್ಗಟ್ಟುಗಳ ಪ್ರಸ್ತಾಪಿಸುವ ಈ ಕವಿತೆಗಳು ಹೆಣ್ಣಿನ ಬಗೆಗಿನ ಸಾಮಾಜಿಕ ಗ್ರಹಿಕೆ ನಿರಾಕಿಸುತ್ತದೆ, ಜೊತೆಗೆ ಸ್ತ್ರೀ ಸಂವೇದನೆವನ್ನು ಹೊಂದಿದೆ.

ಬೆಲೆ ಏರಿಕೆಯಿಂದಾಗಿ ಮಧ್ಯಮ ವರ್ಗದ ಜನರ ಉಳಿತಾಯದ ಖಾತೆಯಲ್ಲಿ ಬ್ಯಾಲೆನ್ಸ್ ಜೀರೋ ಎಂಬುವುದರ ಸಂಕೇತವೇ ಈ ಜೀರೋ ಬ್ಯಾಲೆನ್ಸ್ ಕವಿತೆಯಾಗಿದೆ.

ತನ್ನ ಕವಿತೆಗಳಲ್ಲಿ ಕವಯತ್ರಿ ಹೆಣ್ಣಿನ ಅನನ್ಯತೆ ಎತ್ತಿಹಿಡಿಯುವಾಗ ಎಲ್ಲಿಯೂ ಪುರುಷರನ್ನು ಎದುರಾಳಿ ಅಥವಾ ಆರೋಪಿ ಸ್ಥಾನದಲ್ಲಿ ನಿಲ್ಲಿಸಿಲ್ಲ. ಗಂಡು ಹೆಣ್ಣು ಪರಾವಲಂಬಿಗಳಲ್ಲ, ಸಮಾನರು ಎಂಬ ಕವಯತ್ರಿ ಶ್ರುತಿ ಬಿಆರ್ ನಿಲುವನ್ನು ನಾವು ಈ ಕವನ ಸಂಕಲನದಲ್ಲಿ ಕಾಣಬಹುದು.

2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರಕ್ಕೆ ಶ್ರುತಿ ಬಿಆರ್‌ ಅವರ ಜೀರೋ ಬ್ಯಾಲೆನ್ಸ್ ಕೊನೆಯ ಹಂತಕ್ಕೆ ಆಯ್ಕೆಗೊಂಡಿದ್ದವು. ಆದರೆ 2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರಕ್ಕೆ ಕತೆಗಾರ ಮಂಜುನಾಯಕ ಚಳ್ಳೂರು ಆಯ್ಕೆಯಾಗಿದ್ದರು.

ಬಾಲ ಪುರಸ್ಕಾರಕ್ಕೆ ಕೃಷ್ಣಮೂರ್ತಿ ಬಿಳಿಗೆರೆ ಆಯ್ಕೆ

ಕೃಷ್ಣಮೂರ್ತಿ ಬಿಳಿಗೆರೆ ಅವರು ಬಾಲ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು, ಅವರು ಕಣ್ಮುಚ್ಚಾಲೆ ಮಕ್ಕಳ ಗುಂಪು, ನಮ್ಮ ಪ್ರಕಾಶನ ಮತ್ತು ಸಿರಿಸಮೃದ್ಧಿ ಬಳಗ ಮುಂತಾದ ಸಂಘಟನೆಗಳಲ್ಲಿ ಅವರು ಸಕ್ರಿಯರಾಗಿದ್ದಾರೆ.

ಕೃಷ್ಣಮೂರ್ತಿ ಬಿಳಿಗೆರೆ ಅವರು ಹುಳಿಯಾರಿನ ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಕೆಲಸ ಮಾಡುತ್ತಿದ್ದು, ಸಾವಯವ ಕೃಷಿ ಮತ್ತು ಮಳೆನೀರಿನ ಚಳುವಳಿಯಲ್ಲಿ ಸಕ್ರಿಯರಾಗಿದ್ದಾರೆ.

ಇದನ್ನು ಓದಿದ್ದೀರಾ?  ತುಮಕೂರು | ಕೆ ಬಿ ಸಿದ್ದಯ್ಯ ಅವರ ಕಾವ್ಯ ಸೆಕ್ಯುಲರ್ ಕಾವ್ಯ: ಅಗ್ರಹಾರ ಕೃಷ್ಣಮೂರ್ತಿ

ಮಕ್ಕಳಿಗಾಗಿ ಜೀರಿಂಬೆ ಹಾಡು, ಗುಡು ಗುಡು ಗುಡ್ಡ, ಪದ್ಯದ ಮರ, ಡ್ರೂ ಡ್ರೂ ಡ್ರೂಟೆ, ಹಾಡೆ ಸುವ್ವಿ ಹಾಡಿನ ಪುಸ್ತಕಗಳನ್ನು ಬರೆದಿದ್ದಾರೆ. ಹಾಗೆಯೇ ಮಳೆ ಹುಚ್ಚ, ಅಗಲ ಕಿವಿಯ ಅರಿವುಗಾರ, ನವಿಲೂರಿನ ಕತೆ, ಅಂಗಭಂಗದ ರಾಜ್ಯದಲ್ಲಿ, ಕೇಡಾಳ ಕೆಪ್ಪರ್ಕ, ಕತ್ತೆ ಹಾಡು ಎಂಬ ಮಕ್ಕಳ ನಾಟಕಗಳನ್ನು ರಚಿಸಿದ್ದಾರೆ. ಚಗಚೆ ಹೂವಿನ ಹುಡುಗಿ, ಭೂಮಂತ್ರಯ್ಯನ ಕತೆಗಳು ಇವರ ಮಕ್ಕಳ ಕಥಾ ಪುಸ್ತಕಗಳಾಗಿದೆ.

ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ ಇವರ ಕಾವ್ಯ ಕೃತಿಗಳಾಗಿದ್ದು, ಮಳೆ ನೀರ ಕೊಯ್ಲು ಕುರಿತ ಪುಸ್ತಕಗಳು ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ, ಬಿಸ್ಲುಬಾಳೆ ಹಣ್ಣು ಮತ್ತು ಇತರ ಪ್ರಬಂಧಗಳು ರಚಿಸಿದ್ದಾರೆ.

ಎರಡು ಬಾರಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಆರ್ಯಭಟ ಸಾಹಿತ್ಯ ಪ್ರಶಸ್ತಿ, ಜಿ.ಎಸ್.ಎಸ್. ಕಾವ್ಯ ಪ್ರಶಸ್ತಿ, ಶಿಕ್ಷಣ ಸಿರಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ, ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕ ಸೊಗಸು ಪ್ರಶಸ್ತಿಗಳಿಗೆ ಕೃಷ್ಣಮೂರ್ತಿ ಬಿಳಿಗೆರೆ ಭಾಜನರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X