ಸಚಿವ ಸಂಪುಟದಲ್ಲಿ ಖಾಲಿ ಇರುವ 2 ಸ್ಥಾನಗಳನ್ನು ಮಹಿಳೆ ಮತ್ತು ಒಬಿಸಿಗೆ ಕೊಡಬೇಕು: ಸಿದ್ದರಾಮಯ್ಯ

Date:

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ 34 ಸದಸ್ಯ ಬಲದ ರಾಜ್ಯ ಸಚಿವ ಸಂಪುಟದಲ್ಲಿ ಪ್ರಸ್ತುತ ಎರಡು ಸ್ಥಾನಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡುವ ಕುರಿತು ಕಾಂಗ್ರೆಸ್‌ನಲ್ಲಿ ಚರ್ಚೆಗಳು ನಡೆಯುತ್ತಿವೆ. ಬೇಡಿಕೆಗಳು ಬರುತ್ತಿವೆ. ಇದೆಲ್ಲದರ ನಡುವೆ, ‘ಆ ಹುದ್ದೆಗಳಲ್ಲಿ ಒಂದನ್ನು ಮಹಿಳೆಗೆ, ಮತ್ತೊಂದು ಒಬಿಸಿ ಸಮುದಾಯಕ್ಕೆ ಕೊಡಬೇಕು’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟದ ಪೂರ್ಣ ವಿಸ್ತರಣೆ ಬಗ್ಗೆ ಮಾತನಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಕಾಡಿನ ಮಕ್ಕಳೇ ವನ್ಯಜೀವಿಗಳ ನಿಜವಾದ ಬಂಧುಗಳು: ಆದಿವಾಸಿಗಳ ಜ್ಞಾನ,...

ಕಾಡು ಎಂದರೆ ಕೇವಲ ಮರಗಳು, ಪ್ರಾಣಿಗಳು ಮತ್ತು ಭೌಗೋಳಿಕ ಪ್ರದೇಶವಲ್ಲ. ಅದು ಸಾವಿರಾರು ವರ್ಷಗಳಿಂದ ಮನುಷ್ಯ ಮತ್ತು ಪ್ರಕೃತಿ ಪರಸ್ಪರ ಅವಲಂಬನೆಯೊಂದಿಗೆ ಬದುಕಿಕೊಂಡು ಬಂದಿರುವ ಜೀವಂತ ಪರಿಸರ ವ್ಯವಸ್ಥೆ. ಈ ವ್ಯವಸ್ಥೆಯೊಂದಿಗೆ ಅತ್ಯಂತ...

ಹೆಬ್ಬೆರಳು ಕತ್ತರಿಸಿದ ಆಕ್ರಮಣಕಾರರು, ಗುಮಾಸ್ತರನ್ನು ಸೃಷ್ಟಿಸಿದ ಮೆಕಾಲೆ- ಇದು...

ಇತಿಹಾಸದ ಹೆಸರಿನಲ್ಲಿ ಆಯ್ದ ನಿರೂಪಣೆ; ಜಾತಿ ಪ್ರಾಬಲ್ಯ, ಶಿಕ್ಷಣದ ಹಕ್ಕು ಮತ್ತು ಆಧುನಿಕ ಅಭಿವೃದ್ಧಿಯ ವಾಸ್ತವಗಳು ಪ್ರಧಾನಿ ನರೇಂದ್ರ ಮೋದಿ ಅವರು ಇತಿಹಾಸದ ಹೆಸರಿನಲ್ಲಿ ಮುಂದಿಟ್ಟಿರುವ ಹೆಬ್ಬೆರಳು ಕತ್ತರಿಸಿದ ಆಕ್ರಮಣಕಾರರು ಮತ್ತು ಗುಮಾಸ್ತರನ್ನು ಸೃಷ್ಟಿಸಿದ...

ಅಂದಹಾಗೆ, ಡಿಸೆಂಬರ್ 2ರಿಂದ ಆರಂಭವಾಗಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೂ ಮುನ್ನ ಸಂಪುಟಕ್ಕೆ ಮಹಿಳೆಯೊಬ್ಬರನ್ನು ಸೇರ್ಪಡೆಗೊಳಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಈ ಹಿಂದೆ ತಿಳಿಸಿದ್ದರು.

ಈ ಬೆನ್ನಲ್ಲೇ ಸಂಪುಟ ಸೇರ್ಪಡೆ ಚರ್ಚೆ ಭುಗಿಲೆದ್ದಿದೆ. ಸಿದ್ದರಾಮಯ್ಯ ಅವರು ಕುರುಬ ಸಮುದಾಯದವರಾದ, ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ.
ಮತ್ತೊಂದೆಡೆ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಖಾಲಿ ಇರುವ ಎರಡು ಸ್ಥಾನಗಳನ್ನು ಪರಿಶಿಷ್ಟ ಪಂಗಡ (ST) ಮತ್ತು ಕುರುಬ ಸಮುದಾಯದ ಶಾಸಕರಿಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ವಾಲ್ಮೀಕಿ (ಎಸ್‌ಟಿ) ಸಮುದಾಯಕ್ಕೆ ಸೇರಿದವರಾಗಿದ್ದ ಬಿ ನಾಗೇಂದ್ರ ಅವರ ರಾಜೀನಾಮೆಯಿಂದ ಒಂದು ಸ್ಥಾನ ತೆರವಾಗಿರುವುದರಿಂದ, ಆ ಸ್ಥಾನವನ್ನು‌ ಎಸ್‌ಟಿ ಸಮುದಾಯಕ್ಕೇ ನೀಡಬೇಕು ಎಂದು ಜಾರಕಿಹೊಳಿ ಹೇಳಿದ್ದಾರೆ.

ಇದೆಲ್ಲದರ ನಡುವೆ,‌ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಪೊಲೀಸರಿಂದ ಕ್ಲೀನ್ ಚಿಟ್ ಪಡೆದಿರುವ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಒಂದು ಬಣ ಬಯಸುತ್ತಿದೆ.

ನಾಗೇಂದ್ರ ಅವರು ಸಿದ್ದರಾಮಯ್ಯ ಸರ್ಕಾರದಲ್ಲೂ ಸಚಿವರಾಗಿದ್ದರು. ಆದರೆ, ಆಪಾದಿತ ವಾಲ್ಮೀಕಿ‌ ಹಗರಣದಿಂದಾಗಿ ಅವರು ಮೊದಲ ಬಾರಿಗೆ 2024ರ ಜೂನ್‌ನಲ್ಲಿ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು. ನಂತರ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದ ಬಳಿಕ ಸಂಪುಟ ಸೇರಿದ್ದ ಅವರು ಈ ವರ್ಷದ ಆಗಸ್ಟ್‌ನಲ್ಲಿ ಮತ್ತೊಮ್ಮೆ ರಾಜೀನಾಮೆ ನೀಡಿದ್ದರು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಆನೆಗಳ ಸಂತಾನೋತ್ಪತ್ತಿ ನಿಯಂತ್ರಣಕ್ಕೆ ಕ್ರಮಕೈಗೊಳ್ಳಬೇಕು; ಅನಿಲ್ ಹೊಸಕೊಪ್ಪ ಆಗ್ರಹ

ಕಾಡಿನಲ್ಲಿ ಆಹಾರ ಮತ್ತು ನೀರಿನ ವ್ಯವಸ್ಥೆ ಕಲ್ಪಿಸದ ಪರಿಣಾಮ ರೈತರ ತೋಟಗಳೇ...

ಇರಾನ್ ಮೇಲೆ ಮತ್ತೆ ಟ್ರಂಪ್ ಕಣ್ಣು: ಆರ್ಥಿಕ ನಷ್ಟದ ನಡುವೆಯೂ ಮರುದಾಳಿಗೆ ಸಜ್ಜಾದ ಅಮೆರಿಕ!

ಇರಾನ್ ವಿರುದ್ಧದ ದಾಳಿಯಿಂದಾಗಿ ಅಮೆರಿಕದ ರಕ್ಷಣಾ ಇಲಾಖೆ ಈಗಾಗಲೇ ಬರೋಬ್ಬರಿ 48.3...

ಶಿವಮೊಗ್ಗ| ದಿನಪತ್ರಿಕೆ ಸಾಗಿಸುತ್ತಿದ್ದ ಕಾರು ಪಲ್ಟಿ ; ಓರ್ವ ಸಾವು

ಶಿವಮೊಗ್ಗದಿಂದ ದಿನಪತ್ರಿಕೆಗಳನ್ನು ಸಾಗಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ...

ತೀರ್ಥಹಳ್ಳಿ | ಅಕ್ರಮವಾಗಿ ಸಾಗಿಸುತ್ತಿದ್ದ ಮೊಬೈಲ್‌ಗಳನ್ನು ವಶಕ್ಕೆ ಪಡೆದ ಪೊಲೀಸರು

ಭದ್ರಾವತಿಯಿಂದ ಅಕ್ರಮವಾಗಿ ಕೇರಳಕ್ಕೆ ಸಾಗಿಸುತ್ತಿದ್ದ ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ತೀರ್ಥಹಳ್ಳಿಯಲ್ಲಿ...