ಸಿದ್ದರಾಮಯ್ಯ ಅವರಿಗೆ ಹಿಂದಿನಷ್ಟು ಸ್ವಾತಂತ್ರ್ಯ ಈಗ ಇಲ್ಲ- ಎಚ್‌ ಆಂಜನೇಯ

Date:

  • ಬ್ರಾಹ್ಮಣರು ಯಾವುದೇ ಹೋರಾಟ ಮಾಡದೇ 10 % ಮೀಸಲಾತಿ ಪಡೆದಿದ್ದಾರೆ
  • ಯಾವುದೇ ಅಡೆತಡೆಗಳು ಬಂದರೂ ಸಿದ್ದರಾಮಯ್ಯ ಅವರು ಕಾಂತರಾಜ ವರದಿ ಜಾರಿಗೆ ತರಲೇಬೇಕು

“2013ರಿಂದ 2018ರ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿ ಬಡವರ, ಶೋಷಿತರ ಪಾಲಿಗೆ ಸುವರ್ಣ ಯುಗ, ಆ ಯುಗ ಇನ್ನು ಬರಲಾರದು ಎಂದು ಅನ್ನಿಸುತ್ತಿದೆ. ಸಿದ್ದರಾಮಯ್ಯ ಅವರಿಗೆ ಆಗ ಇದ್ದ ಸ್ವಾತಂತ್ರ್ಯ ಈಗ ಇಲ್ಲ” ಎಂದು ಮಾಜಿ ಸಚಿವ ಎಚ್‌ ಆಂಜನೇಯ ಹೇಳಿದರು.

- Advertisement -

ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಹಾಗೂ ಐಎಚ್‌ಎಸ್‌ ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿ ಪಿ ಸಿಂಗ್‌  ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

“ಎಚ್‌.ಎಂ. ರೇವಣ್ಣ ಅಥವಾ ನಾನು ಇಂತಹವರನ್ನು ಅಧ್ಯಕ್ಷ ಮಾಡಿ ಎಂದು ಹೇಳಿದರೆ ಸಾಕು ಮರುದಿನ ಬೆಳಿಗ್ಗೆ ಆದೇಶ ಬರುತ್ತಿತ್ತು. ಬಹಳಷ್ಟು ಕ್ರಾಂತಿಕಾರಕ ಬದಲಾವಣೆಗಳು ಆಗ ಆಗಿತ್ತು. ಈಗ 136 ಶಾಸಕರು ಗೆದ್ದು ಬಂದಿದ್ದಾರೆ. ಬೇರೆ ಬೇರೆ ಒತ್ತಡಗಳಿವೆ. ಈಗ ನಾವು ಹೇಳಿದ ಕೆಲಸಗಳು ಆಗುವ ಬಗ್ಗೆ ಸಂಶಯವಿದೆ. ಸರ್ಕಾರ ಬಂದು ಆರು ತಿಂಗಳಾಯಿತು. ಚುನಾವಣೆಗೆ ಮೊದಲು ಕಾಂತರಾಜ ಆಯೋಗದ ವರದಿ ಪಡೆಯುವುದಾಗಿ ಹೇಳಿದ್ದರು. ಈಗ ಅದಕ್ಕೆ ಹಲವು ಅಡೆತಡೆಗಳು ಬಂದಿವೆ. ಆದರೂ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಪರವೇ ಇದ್ದಾರೆ. ಅವರು ಬಡವರ ಶೋಷಿತರ ಕೈ ಹಿಡಿಯುತ್ತಾರೆ” ಎಂದರು.

“ಮೀಸಲಾತಿ ಪಡೆಯದ ಜಾತಿ ಯಾವುದಿದೆ? ಎಲ್ಲಾ ಜಾತಿಗಳಿಗೂ ಮೀಸಲಾತಿ ಇದೆ. ಬ್ರಾಹ್ಮಣರಿಗೂ ಮೀಸಲಾತಿ ಇದೆ. ಅವರು ಹೋರಾಟ ಮಾಡದೇ 10 % ಮೀಸಲಾತಿ ಪಡೆದಿದ್ದಾರೆ. 80ರ ದಶಕದಲ್ಲಿ ದೇವರಾಜ ಅರಸು ಅವಧಿಯಲ್ಲಿ ಹಾವನೂರು ಆಯೋಗದ ವರದಿಯನ್ನು ಜಾರಿ ಮಾಡಲೂ ಬಿಡಲಿಲ್ಲ. ಆದರೂ ಅವರು ವರದಿಯನ್ನು ಬಿಡುಗಡೆ ಮಾಡಿದರು.

ಈಗ ಕಾಂತರಾಜ ಸಮಿತಿ ವರದಿಯ ಬಗ್ಗೆಯೂ ಅಪಸ್ವರ ಎತ್ತುತ್ತಿದ್ದಾರೆ. ನಾನು ಮಾದಿಗ, ಕಾಂತರಾಜ ಅವರು ಕುರುಬ. ತಮ್ಮ ತಮ್ಮ ಜಾತಿಯ ಸಂಖ್ಯೆಯನ್ನು ಹೆಚ್ಚು ಬರೆದಿದ್ದಾರೆ ಎಂದು ಕೆಲವರು ಸುಳ್ಳು ಹಬ್ಬಿಸುತ್ತಿದ್ದಾರೆ. ಒಂದೂವರೆ ಲಕ್ಷ ಗಣತಿದಾರರು ಮಾಹಿತಿ ಸಂಗ್ರಹಿಸಿದ್ದಾರೆ. ಮನೆ ಮನೆಗೆ ಹೋಗಿ ವಾಸ್ತವಾಂಶ ಮಾಹಿತಿ ಪಡೆದಿದ್ದಾರೆ. ಎಲ್ಲ ಮಾಹಿತಿ ಕಂಪ್ಯೂಟರ್‌ನಲ್ಲಿ ಭದ್ರವಾಗಿದೆ. ಬಹಳ ವೈಜ್ಞಾನಿಕ ವರದಿ, ಪಾರದರ್ಶಕವಾಗಿದೆ. ಪ್ರೊಸೀಡಿಂಗ್ಸ್‌ ಆಗಿದೆ. ಜಾರಿ ಮಾಡಲು ಉಪಸಮಿತಿ ಮಾಡಿ ಅದರಲ್ಲಿ ಏನು ಕೊರತೆ ಇದೆ. ಯಾವುದು ಸೇರಬೇಕು ಎಂಬ ನಿರ್ಧಾರ ಮಾಡುವ ಅಧಿಕಾರ ಮುಖ್ಯಮಂತ್ರಿಗಳಿಗೆ ಇದೆ. ಅಧಿವೇಶನದಲ್ಲಿ ಚರ್ಚೆಗೆ ಇಡಲಿ” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...