ಕೆಸಿಆರ್ ಅವರೇ ಗ್ಯಾರಂಟಿ ಯೋಜನೆ ನೋಡಲು ಕರ್ನಾಟಕಕ್ಕೆ ಬನ್ನಿ: ಸಿದ್ದರಾಮಯ್ಯ ಪಂಥಾಹ್ವಾನ

Date:

  • ರೇವಂತ್ ರೆಡ್ಡಿ ಎರಡೂ ಕ್ಷೇತ್ರದಲ್ಲಿ ವಿಜಯ ಸಾಧಿಸಿ ಕೆ.ಸಿ.ಆರ್ ಅವರನ್ನು ಸೋಲಿಸುವುದು ಖಚಿತ
  • ತೆಲಂಗಾಣದ ಜನತೆ ಮೋದಿಯವರ ಮಕ್ಮಲ್ ಟೋಪಿಗೆ ತಲೆ ಕೊಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ನಾವು ಐದು ಗ್ಯಾರಂಟಿಗಳನ್ನು 100 ದಿನಗಳಲ್ಲಿ ಜಾರಿ ಮಾಡಿದ್ದೇವೆ. ತೆಲಂಗಾಣದಲ್ಲೂ ಒಂದು ಬೋನಸ್ ಸೇರಿ ಆರು ಗ್ಯಾರಂಟಿಗಳು 100 ದಿನಗಳಲ್ಲಿ ಜಾರಿ ಆಗುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

- Advertisement -

ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಕಾಮರೆಡ್ಡಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ “ಹಿಂದುಳಿದ ವರ್ಗಗಳ ನಿರ್ಣಯ” ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯೇ ಆಗಿಲ್ಲ ಎಂಬ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರ ಸರಣಿ ಸುಳ್ಳುಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, “ಕೆ.ಸಿ.ಆರ್ ಅವರೇ ಕರ್ನಾಟಕ ರಾಜ್ಯಕ್ಕೆ ಬನ್ನಿ. 5 ಗ್ಯಾರಂಟಿ ಯೋಜನೆಗಳ ಸಕ್ಸಸ್ ನೋಡಿ ಬಳಿಕ ಚರ್ಚೆಗೆ ಬನ್ನಿ” ಎಂದು ಪಂಥಾಹ್ವಾನ ನೀಡಿದರು.

“ಬಿಜೆಪಿ, ಬಿಆರ್‌ಎಸ್‌ ಎರಡೂ ಒಂದೇ. ಬಿಆರ್‌ಎಸ್‌ ತೆಲಂಗಾಣದಲ್ಲಿ ಬಿಜೆಪಿಯ ಬಿ ಟೀಮ್ ಆಗಿ ಕೆಲಸ ಮಾಡುತ್ತಿದೆ. ತೆಲಂಗಾಣದ ಜನತೆ ಕೆ.ಸಿ.ಆರ್ ಮತ್ತು ಮೋದಿಯವರ ಮಕ್ಮಲ್ ಟೋಪಿಗೆ ಈ ಬಾರಿ ತಲೆ ಕೊಡುವುದಿಲ್ಲ” ಎಂದರು.

“ಪ್ರಧಾನಿ ಮೋದಿಯವರು ಹಿಂದುಳಿದವರ ಉದ್ದಾರಕ್ಕೆ ಅವತಾರ ಎತ್ತಿದವರಂತೆ ಭಾಷಣ ಮಾಡುತ್ತಾರೆ. ಆದರೆ ಅವರು ಪ್ರಧಾನಿ ಆದ 9 ವರ್ಷಗಳಲ್ಲಿ ಹಿಂದುಳಿದವರಿಗೆ, ದಲಿತರ ಉದ್ದಾರಕ್ಕೆ ಯಾವ ಕಾರ್ಯಕ್ರಮಗಳನ್ನೂ ಜಾರಿ ಮಾಡಲಿಲ್ಲ. ಬದಲಿಗೆ ಹಿಂದುಳಿದವರು ಇನ್ನಷ್ಟು ಹಿಂದುಳಿಯುವಂತೆ ಮಾಡಿದ್ದಾರೆ” ಎಂದು ಟೀಕಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿತೀಶ್ ಕುಮಾರ್ ಅಭದ್ರ ಭಾಷೆ ನಿಂದನೀಯ

ಮೇಲ್ವರ್ಗದ ಮೋದಿ

“ಮೋದಿಯವರು ದೇಶದ ಶೇ. 4 ರಷ್ಟು ಮೇಲ್ವರ್ಗದ ಜನರ ಉದ್ದಾರಕ್ಕೆ ಮಾತ್ರ ಕೆಲಸ ಮಾಡುತ್ತಾರೆ. ನಾಗಪುರ ಈ ಶೇ. 4 ಜನರ ಪರವಾಗಿ ಹೇಳಿಕೊಟ್ಟ ಕಾರ್ಯಕ್ರಮವನ್ನು ಜಾರಿ ಮಾಡುವುದಷ್ಟೆ ಮೋದಿಯವರ ಕೆಲಸ” ಎಂದು ವ್ಯಂಗ್ಯವಾಡಿದರು.

“ಕೆ.ಸಿ.ಆರ್ ಹತ್ತು ವರ್ಷ ಅಧಿಕಾರದಲ್ಲಿದ್ದೂ ತೆಲಂಗಾಣವನ್ನು ಅಭಿವೃದ್ಧಿ ಮಾರ್ಗದಲ್ಲಿ ಕೊಂಡೊಯ್ಯದೆ ಭ್ರಷ್ಟಾಚಾರದಲ್ಲಿ ಮುಳುಗಿದರು. ಪ್ರಧಾನಿ ಮೋದಿಯವರು ಈ ಹತ್ತು ವರ್ಷಗಳಲ್ಲಿ ದೇಶದ ಆರ್ಥಿಕತೆಯನ್ನು ಹಳ್ಳ ಹಿಡಿಸಿದರು. ಇದನ್ನು ಕರ್ನಾಟಕದ ಜನತೆ ಅರ್ಥ ಮಾಡಿಕೊಂಡರು. ಜಾಗೃತರಾದರು. ತೆಲಂಗಾಣದ ಜನತೆಯೂ ಅರ್ಥ ಮಾಡಿಕೊಳ್ಳಬೇಕು” ಎಂದು ಕಿವಿಮಾತು ಹೇಳಿದರು.

“ಮೋದಿಯವರು ಜಾರಿಗೆ ತಂದಿರುವ ಎಲ್ಲಾ ಜನದ್ರೋಹಿ, ಜನ ವಿರೋಧಿ ಯೋಜನೆಗಳಿಗೆ ಕೆ.ಸಿ.ಆರ್ ಮತ್ತು ಬಿ.ಆರ್.ಎಸ್ ಬೆಂಬಲ ನೀಡಿ ತಾವೂ ಜನವಿರೋಧಿ ಆಗಿದ್ದಾರೆ. ಕೆ.ಸಿ.ಆರ್ ಚುನಾವಣೆಯಲ್ಲಿ ಖರ್ಚು ಮಾಡುವ ಹಣ ಪಾಪದ ಹಣ. ಆದರೆ ತೆಲಂಗಾಣ ಜನತೆ ಬಿಆರ್‌ಎಸ್‌ ಅನ್ನು ಸೋಲಿಸಲು ಸ್ಪಷ್ಟ ತೀರ್ಮಾನ ಮಾಡಿದ್ದಾರೆ” ಎಂದರು.

“ನರೇಂದ್ರ ಮೋದಿ ನೂರು ಬಾರಿ ತೆಲಂಗಾಣಕ್ಕೆ ಪ್ರಚಾರಕ್ಕೆ ಬಂದರೂ ಇಲ್ಲಿ ಬಿಜೆಪಿ ಗೆಲ್ಲಲ್ಲ. ಬಿಜೆಪಿ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳುತ್ತಾರೆ. ಮೋದಿ ಅವರು ಕರ್ನಾಟಕಕ್ಕೂ 48 ಬಾರಿ ಚುನಾವಣಾ ಪ್ರಚಾರಕ್ಕೆ ಬಂದಿದ್ದರು. ಅವರು ಪ್ರಚಾರ ಮಾಡಿದ ಜಾಗಗಳಲ್ಲೆಲ್ಲಾ ಬಿಜೆಪಿ ಹೀನಾಯವಾಗಿ ಸೋತಿದೆ. ಕಾರಣ ನರೇಂದ್ರ ಮೋದಿ ಅಷ್ಟು ಸುಳ್ಳು ಹೇಳುತ್ತಾರೆ. ಈ ತರ ಸುಳ್ಳು ಹೇಳುವ ಪ್ರಧಾನಿಯನ್ನು ನಾನು ಹಿಂದೆಂದೂ ಕಂಡಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ SIR ಭೌತಿಕ ವಿಚಾರಣೆ ಸ್ಥಗಿತ: ಬಿಎಲ್ಒಗಳಿಂದ ಮನೆ ಬಾಗಿಲಿಗೆ ತೆರಳಿ ದಾಖಲೆ ಸಂಗ್ರಹ

ಹಿಂದಿನ ದತ್ತಾಂಶ ಲಭ್ಯವಿಲ್ಲದ ಹಾಗೂ ಮಾಹಿತಿಯಲ್ಲಿ ಹೊಂದಾಣಿಕೆಯಾಗದ ಕಾರಣಕ್ಕೆ ನೋಟಿಸ್ ಸ್ವೀಕರಿಸಿರುವ...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ ರಾಹುಲ್ ಗಾಂಧಿ ಸಮರ!

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು...