ಧರ್ಮಸ್ಥಳ ಪ್ರಕರಣ | ವಿಶೇಷ ತನಿಖಾ ತಂಡ ರಚನೆ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ

Date:

ಧರ್ಮಸ್ಥಳ ವ್ಯಾಪ್ತಿಯಲ್ಲಿನ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದಾರೆ.

- Advertisement -

ಧರ್ಮಸ್ಥಳ ಸರಣಿ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ಎಸ್‌ಐಟಿ ರಚಿಸುವಂತೆ ಒತ್ತಾಯಿಸಿ ಹಿರಿಯ ವಕೀಲರಾದ ಸಿಎಸ್‌ ದ್ವಾರಕನಾಥ್ ಮತ್ತು ಎಸ್‌ ಬಾಲನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ. ಈ ವೇಳೆ ಸಿಎಂ ಎಸ್‌ಐಟಿ ರಚನೆ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಧರ್ಮಸ್ಥಳ ಸಾವು ಪ್ರಕರಣ: ವಿಶೇಷ ತನಿಖಾ ತಂಡ ರಚಿಸುವಂತೆ ಕೋರಿ ಸಿಎಂಗೆ ಮಹಿಳಾ ಆಯೋಗ ಪತ್ರ

ಎಸ್‌ಐಟಿ ರಚಿಸುವಾಗ ಬಹಳ ದಕ್ಷ ಐಪಿಎಸ್‌ ಅಧಿಕಾರಿಯನ್ನು ನೇಮಿಸಬೇಕು. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ಸುಪರ್ದಿಯಲ್ಲಿ ಈ ತನಿಖೆ ನಡೆಯಬೇಕು. ಕ್ರಿಮಿನಲ್ ಕೃತ್ಯಗಳ ಬಗ್ಗೆ ಹೆಚ್ಚಿನ ಮಾಹಿತಿ ಇರುವ ಪ್ರಾಸಿಕ್ಯೂಟರ್ ಅನ್ನು ನೇಮಿಸಬೇಕು ಎಂದು ದ್ವಾರಕನಾಥ್ ತಂಡವು ಸಿಎಂಗೆ ಮನವಿ ಮಾಡಿದ್ದಾರೆ.

ಇನ್ನು ಧರ್ಮಸ್ಥಳದಲ್ಲಿ ಹೂತಿಟ್ಟಿರುವ ಮೃತದೇಹಗಳನ್ನು ಹೊರತೆಗೆಯುವ ವೇಳೆ ಎಲ್ಲವನ್ನೂ ವಿಡಿಯೋ ಚಿತ್ರೀಕರಣ ಮಾಡಬೇಕು. ವಿಧಿವಿಜ್ಞಾನ ತಂಡ(ಎಫ್‌ಎಸ್‌ಎಲ್‌) ಕಡ್ಡಾಯವಾಗಿ ಇರಲೇಬೇಕು ಎಂದು ವಕೀಲರು ಮುಖ್ಯಮಂತ್ರಿಗೆ ಒತ್ತಾಯಿಸಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸಿಎಂ 38

ಇನ್ನು ಈ ವಿಚಾರದಲ್ಲಿಯೇ ನಾಳೆ(ಜುಲೈ 17) ಬೆಳಿಗ್ಗೆ 10:30 ಗಂಟೆಗೆ ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಮತ್ತು ದ್ವಾರಕನಾಥ್ ಅವರು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ಧರ್ಮಸ್ಥಳ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚಿಸುವಂತೆ ಮಹಿಳಾ ಆಯೋಗ ಒತ್ತಾಯಿಸಿದೆ. ಇನ್ನು ಹಿರಿಯ ಐಪಿಎಸ್ ಅಧಿಕಾರಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ಎಸ್ಐಟಿ ರಚನೆಯಾಗಲಿ ಎಂದು ದೂರುದಾರರ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ದೇಶಪಾಂಡೆ ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...