ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಸಂತ್ರಸ್ತೆಯರಿಗೆ ಆರ್ಥಿಕ ನೆರವು ನೀಡಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ಥಿತಿಯಿರುವ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೆರವಿನ ಘೋಷಣೆ ಮಾಡಿದರು.
“ಆರೋಪಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಆಗ್ರಹಿಸಿದ್ದಾರೆ. ಕಳೆದು 75 ವರ್ಷಗಳಲ್ಲಿಯೇ ನಡೆಯದ ಘೋರ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತ್ಯಾಚಾರಕ್ಕೊಳಗಾದ ನೂರಕ್ಕೂ ಹೆಚ್ಚು ಸಂತ್ರಸ್ತೆಯರಿಗೆ ಹಣಕಾಸು ನೆರವು ಘೋಷಿಸಲಿದ್ದಾರೆ” ಎಂದು ಸುರ್ಜೇವಾಲ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿಯನ್ನಾಗಿಸಿದ ಹಾಸನಕ್ಕೆ ಗೌಡರು ಕೊಟ್ಟ ಉಜ್ವಲ ಕೊಡುಗೆ ಈ ಪ್ರಜ್ವಲ
“ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯರು ತಮಗಾದ ಅನ್ಯಾಯದ ಬಗ್ಗೆ ಸರ್ಕಾರಕ್ಕೆ ತಿಳಿಸಬೇಕು. ಜೆಡಿಎಸ್ ಜೊತೆಗೆ ಮೈತ್ರಿ ಹೊಂದಿರುವ ಬಿಜೆಪಿ ಪ್ರಜ್ವಲ್ ಬಗ್ಗೆ ಮಾಹಿತಿಯಿದ್ದರೂ ಏಕೆ ತಿಳಿಸಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಏಕೆ ಪ್ರಜ್ವಲ್ ಅವರ ರಜತಾಂತ್ರಿಕ ಪಾಸ್‌ಪೋರ್ಟ್‌ಅನ್ನು ರದ್ದುಗೊಳಿಸಲಿಲ್ಲ. ಅವರೇಕೆ ಬ್ಲೂಕಾರ್ನರ್ ನೋಟಿಸ್ ಮೂಲಕ ಆರೋಪಿಯನ್ನು ಕರೆತರಲಿಲ್ಲ” ಎಂದು ಸುರ್ಜೇವಾಲ ಪ್ರಶ್ನಿಸಿದರು.
ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ತಂದೆ ಹೆಚ್ ಡಿ ರೇವಣ್ಣನನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ.ಸದ್ಯ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ಸೇರಿದಂತೆ ಮೂರು ಪ್ರಕರಣಗಳು ದಾಖಲಾಗಿವೆ. ಆರೋಪಿಯನ್ನು ಕರೆತರಲು ಬ್ಲೂಕಾರ್ನರ್ ನೀಡಲು ಕೂಡ ಸಿದ್ಧತೆ ನಡೆಸಲಾಗುತ್ತಿದೆ.
