ಕಬ್ಬು ಬೆಳೆಗಾರರ ಸಮಸ್ಯೆಯನ್ನು ನಿರ್ಲಕ್ಷಿಸುತ್ತಲೇ ಬಂದ ಸಿದ್ದರಾಮಯ್ಯ: ಬಿ ವೈ ವಿಜಯೇಂದ್ರ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯುದ್ಧ ಬಂದಾಗ ಶಸ್ತ್ರಾಭ್ಯಾಸ ಮಾಡುವ ಬದಲಾಗಿ ಕಬ್ಬು ಅರೆಯುವ ಒಂದು ಅಥವಾ ಎರಡು ತಿಂಗಳ ಮೊದಲೇ ಈ ಸಂಧಾನ ಸಭೆ ಕರೆಯಬೇಕಿತ್ತು. ತಡ ಆಗಿದೆ. ಆದರೂ ಪರವಾಗಿಲ್ಲ; ರೈತರ ತಾಳ್ಮೆ ಪರೀಕ್ಷಿಸದಿರಿ. ಪ್ರಧಾನಿಯವರಿಗೆ ಪತ್ರ ಬರೆಯವುದಾಗಿ ಕೈಕಟ್ಟಿ ಸುಮ್ಮನೆ ಕುಳಿತುಕೊಳ್ಳಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

- Advertisement -

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಮುಖ್ಯಮಂತ್ರಿ ಕುರ್ಚಿಗೆ ಎಷ್ಟು ತಲೆ ಕೆಡಿಸಿಕೊಂಡಿದ್ದೀರೋ ಅದರ ಶೇ. 10ರಷ್ಟನ್ನು ಕಬ್ಬು ಬೆಳೆಗಾರರ ಬಗ್ಗೆ ತಲೆ ಕೆಡಿಸಿಕೊಳ್ಳಿ. ಆಗ ರೈತರು ನಿಮ್ಮನ್ನು ಪೂಜೆ ಮಾಡುತ್ತಾರೆ. ನನಗೆ ಇದರಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಖಂಡಿತ ಇಲ್ಲ. ಕಬ್ಬು ಬೆಳೆಗಾರರ ಹಿತಾಸಕ್ತಿ ಕಾಪಾಡುವುದಷ್ಟೇ ನಮ್ಮ ಬದ್ಧತೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಕಬ್ಬು ಬೆಳೆಗಾರರು ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ಬರಬಾರದಿತ್ತು. ಕಬ್ಬು ಬೆಳೆಗಾರರ ವಿಚಾರದಲ್ಲಿ ಮುಖ್ಯಮಂತ್ರಿಗಳು ಅಸಡ್ಡೆ ತೋರಿದ್ದಾರೆ. ಈಗ ಹೋರಾಟ ತೀವ್ರಗೊಂಡಿದೆ. ಬೀದಿಗಿಳಿದು ಪ್ರತಿಭಟನೆ ನಡೆಯುತ್ತಿದೆ. ಈಗ ನೀವು ಪ್ರಧಾನಿಯವರಿಗೆ ಪತ್ರ ಬರೆದು ಕೇಂದ್ರ ಸರಕಾರದ ಮೇಲೆ ದೂರುವ ಪ್ರಯತ್ನ ಮಾಡುತ್ತೀರಾ” ಎಂದು ಪ್ರಶ್ನಿಸಿದರು.

“ಎಫ್‍ಆರ್‌ಪಿಯನ್ನು ಪ್ರಧಾನಿಯವರೊಬ್ಬರೇ ತೀರ್ಮಾನ ಮಾಡುವುದಿಲ್ಲ. ಎಲ್ಲ ರಾಜ್ಯಗಳ ಅಧಿಕಾರಿಗಳು, ತಜ್ಞರ ಅಭಿಪ್ರಾಯ ಪಡೆದು ಇದನ್ನು ತೀರ್ಮಾನ ಮಾಡುತ್ತಾರೆ. ಕೇಂದ್ರ ಎಷ್ಟೇ ಎಫ್‍ಆರ್‌ಪಿ ನಿಗದಿ ಮಾಡಿದರೂ ರಾಜ್ಯ ಸಲಹಾ ಬೆಲೆ (ಎಸ್‍ಎಪಿ) ಹೆಚ್ಚು ದರ ಕೊಡಲು ಅವಕಾಶವಿದೆ. ಮುಖ್ಯಮಂತ್ರಿಗಳು ಮಾನವೀಯತೆ ದೃಷ್ಟಿಯಿಂದ ಯೋಚಿಸಬೇಕು” ಎಂದು ಒತ್ತಾಯಿಸಿದರು.

“ಹಿಂದೆ ವಿಠಲ ಅರಭಾವಿಯವರ ಆತ್ಮಹತ್ಯೆ ಮಾಡಿಕೊಂಡದ್ದು ನಿಮಗೆ ನೆನಪಿದೆಯೇ ಸಿದ್ದರಾಮಯ್ಯನವರೇ? ಆಗ ಕೂಡ ನೀವು ತಾತ್ಸಾರ ಮಾಡಿದ್ದಿರಿ. ಕಬ್ಬು ಅರೆದಾಗ ಮಾತ್ರ ಅಬಕಾರಿ ಇಲಾಖೆಗೆ ಕಂದಾಯ ಹೆಚ್ಚಾಗಲು ಸಾಧ್ಯ. ಆದಾಯ ಬರುವುದರ ಬಗ್ಗೆ ಚಿಂತಿಸುವ ನೀವು ಕಬ್ಬಿಗೆ ವೈಜ್ಞಾನಿಕ ದರ ನಿಗದಿಯ ಜವಾಬ್ದಾರಿ ನಿಭಾಯಿಸುತ್ತಿಲ್ಲ” ಎಂದು ಆಕ್ಷೇಪಿಸಿದರು.

“ಶಾಸಕ ಯಶವಂತರಾಯಗೌಡ ಪಾಟೀಲರು ಕಬ್ಬು ಬೆಳೆಗಾರರ ಹೋರಾಟಗಾರರನ್ನು ಕಬ್ಬು ಬೆಳೆಗಾರರೇ ಅಲ್ಲ ಎಂದಿದ್ದಾರೆ. ಅವರಿಗೆ ನಾಚಿಕೆ ಆಗಬೇಕು. ಇದು ಕಬ್ಬು ಬೆಳೆಗಾರರಿಗೆ ಮಾಡಿದ ಅವಮಾನ. ತಕ್ಷಣ ಅವರು ಕ್ಷಮೆ ಯಾಚಿಸಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...