ರೈತರಿಗೆ ದ್ರೋಹ ಎಸಗಿದ ಸಿದ್ದರಾಮಯ್ಯ, ಜು.15ರ ಸಮಯ ಕೇಳಿದ್ದೇ ನಾಟಕ: ನಟ ಪ್ರಕಾಶ ರಾಜ್ ಕಿಡಿ

Date:

Advertisements

ದೇವನಹಳ್ಳಿ ರೈತ ಹೋರಾಟದ ವಿಚಾರದಲ್ಲಿ ಜುಲೈ 15ರವರೆಗೆ ಸಮಯ ಕೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಅವಧಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡುವ ಮೂಲಕ ರೈತರಿಗೆ ನಂಬಿಕೆ ದ್ರೋಹ ಎಸಗಿದ್ದಾರೆ ಎಂದು ನಟ ಪ್ರಕಾಶ ರಾಜ್ ಕಿಡಿಕಾರಿದ್ದಾರೆ.

‘ದೇವನಹಳ್ಳಿ ಚಲೋ’ ಬೆಂಬಲಿಸಿ ನಟ ಪ್ರಕಾಶ ರಾಜ್ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದವರಲ್ಲಿ ಪ್ರಮಖರು. ದೇವನಹಳ್ಳಿ ಚಲೋ ವೇಳೆ ಪೊಲೀಸರಿಂದಲೂ ಬಂಧನಕ್ಕೊಳಗಾಗಿದ್ದರು. ಸಿಎಂ ಜೊತೆಗೆ ನಡೆದ ರೈತರ ಸಭೆಯಲ್ಲಿ ಪ್ರಮುಖರಾಗಿ ಭಾಗಿಯಾಗಿದ್ದರು.

ಮೈಸೂರಿನಲ್ಲಿ ಶುಕ್ರವಾರ ಈ ವಿಚಾರವಾಗಿ ಮಾತನಾಡಿ, “‘ಸರ್ಕಾರ ಯಾರೋ ಕೆಲವು ರೈತರನ್ನು ಮಧ್ಯ ಕರೆ ತಂದು ಚಳವಳಿ ಒಡೆಯುವ ಪ್ರಯತ್ನ ಮಾಡುತ್ತಿದೆ. ಹಳ್ಳಿಗಳಿಗೆ ಪುಡಾರಿಗಳನ್ನು ಕಳುಹಿಸಿ ಹೆದರಿಸುತ್ತಿದೆ” ಎಂದರು.

Advertisements

ಭೂಮಿ ಕೊಡಲು ಸಿದ್ಧ ಎಂದು ಕೆಲವು ರೈತರು ಸುದ್ದಿಗೋಷ್ಠಿ ಮಾಡಿರುವ ವಿಚಾರವಾಗಿ ಮಾತನಾಡಿ, “ಹಸಿರು ವಲಯ ಮಾಡುತ್ತೇವೆ ಎಂಬ ತಮ್ಮ ಪುಢಾರಿಗಳ ಮೂಲಕ ನಾಟಕ ಆಡಿ ಜನರನ್ನು ಹೆದರಿಸುತ್ತಿದೆ. ನಿಮ್ಮ ನಾಟಕ ನಮ್ಮೆಲ್ಲರ ಕಣ್ಣಿಗೆ ಕಾಣಿಸುತ್ತಿದೆ. 15 ರಂದು ರೈತ ಪರ ನಿರ್ಧಾರ ಪ್ರಕಟಿಸದೇ ಇದ್ದರೆ ಹೋರಾಟ ಕ್ರಾಂತಿಯಿಂದ ಕೂಡಿರಲಿದೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಾಖಲೆ ಬರೆದ ಶಕ್ತಿ ಯೋಜನೆ: ಆಡಿದ್ದನ್ನು ಮಾಡಿ ತೋರಿಸಿದ ಸರ್ಕಾರ

“ದೇವನಹಳ್ಳಿಯಲ್ಲಿ ರೈತರ ಜಮೀನು ಕಿತ್ತುಕೊಂಡು ಅಲ್ಲಿ 1700 ಎಕರೆಯಲ್ಲಿ ಡಿಫೆನ್ಸ್ ಕಾರಿಡಾರ್ ಸ್ಥಾಪನೆಗೆ ರಾಜ್ಯ ಸರ್ಕಾರ ಈಗ ಕೇಂದ್ರದ ಅನುಮತಿ ಕೇಳಿದೆ. ಕಾರಿಡಾರ್‌ಗೆ ಏಕೆ ಇಷ್ಟು ಜಾಗ ಬೇಕು ಎಂಬುದನ್ನು ಅವರು ನಕ್ಷೆ ಸಮೇತ ವಿವರಿಸಲಿ” ಎಂದು ಆಗ್ರಹಿಸಿದರು.

“ಕೇವಲ 100 ಎಕರೆ ಬಳಸಿ ಕಾರಿಡಾರ್‌ ನಿರ್ಮಿಸುತ್ತಾರೆ. ಉಳಿದ ಜಮೀನಿನಲ್ಲಿ ಐಷಾರಾಮಿ ಹೋಟೆಲ್ ಕಟ್ಟುತ್ತಾರೆ. ಆಗ ಅಲ್ಲಿ ನಮ್ಮ ರೈತರು ಕೂಲಿಯಾಳು ಗಳಾಗಬೇಕಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತ ಹೋರಾಟಗಾರರಾದ ಬಡಗಲಪುರ ನಾಗೇಂದ್ರ, ಚುಕ್ಕಿ ನಂಜುಂಡಸ್ವಾಮಿ, ಗುರುಪ್ರಸಾದ್ ಕೆರಗೋಡು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X