ಸಿದ್ದರಾಮಯ್ಯ ಅವರೇ, 42 ಕೋಟಿ ರೂ. ಬಗ್ಗೆ ಯಾವ ತನಿಖೆ ಮಾಡಿಸುತ್ತೀರಿ: ಕುಮಾರಸ್ವಾಮಿ ಪ್ರಶ್ನೆ

Date:

  • ಕೋಟಿ ಕೋಟಿ ಹಣದ ಹಿಂದೆ ಅಡಗಿ ಕೂತಿರುವ ಆದಿಪುರುಷರು ಯಾರು?
  • ಪಂಚರಾಜ್ಯಗಳ ಪಾಲಿಗೆ ಕರ್ನಾಟಕ ಸಮೃದ್ಧ ಎಟಿಎಮ್: ಎಚ್‌ಡಿಕೆ

ಪಂಚರಾಜ್ಯ ಚುನಾವಣೆ ಘೋಷಣೆ ಆಗಿದ್ದೇ ತಡ, ರಾಜ್ಯದಲ್ಲಿ ಕುರುಡು ಕಾಂಚಾಣ ಕಂತೆ ಕಂತೆಯಾಗಿ ಕಾಟನ್ ಬಾಕ್ಸ್ ಗಳಲ್ಲಿ ಕುಣಿಯುತ್ತಿದೆ! ಅದೂ ಮಂಚದ ಕೆಳಗೆ!! ಐಟಿ ದಾಳಿ ವೇಳೆ ಗುತ್ತಿಗೆದಾರನ ಮನೆಯಲ್ಲಿ ಪತ್ತೆಯಾದ ಹಣ ಯಾರದ್ದು? ಯಾರ ಹೆಣದ ಮೇಲೆ ಸಂಗ್ರಹಿಸಿದ ಪಾಪದ ಹಣವಿದು? ಈ ಪ್ರಶ್ನೆಗಳಿಗೆ ಉತ್ತರ ಬೇಕಿದೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಆಯ್ದ ಗುತ್ತಿಗೆದಾರರಿಗೆ ಬಿಬಿಎಂಪಿಯಿಂದ 650 ಕೋಟಿ ರೂ. ಬಿಡುಗಡೆಯಾದ ಬೆನ್ನಲ್ಲೇ ಈ 42 ಕೋಟಿ ರೂ. ಐಟಿ ಅಧಿಕಾರಿಗಳಿಗೆ ಸಿಕ್ಕಿಬೀಳುತ್ತದೆ. ಅಲ್ಲಿಗೆ ಕಲೆಕ್ಷನ್ ನಿಜ ಎಂದಾಯಿತು. ಅದು ಎಷ್ಟು ಪರ್ಸಂಟೇಜ್? ಅದರ ಹಿಂದೆ ಅಡಗಿ ಕೂತಿರುವ ಆದಿಪುರುಷರು ಯಾರು” ಎಂದು ಪ್ರಶ್ನಿಸಿದ್ದಾರೆ.

“23 ಬಾಕ್ಸ್ ಗಳಲ್ಲಿ ತುಂಬಿಡಲಾಗಿದ್ದ ಈ ಇಡಗಂಟು ಪಕ್ಕದ ತೆಲಂಗಾಣಕ್ಕೆ ಹೊರಟು ನಿಂತಿತ್ತು ಎನ್ನುವುದು ಮಾಹಿತಿ. ಅಲ್ಲಿಗೆ ಚುನಾವಣೆಗಾಗಿ ಈ ಹಣವನ್ನು ಸಂಗ್ರಹ ಮಾಡಲಾಗಿತ್ತು ಎನ್ನುವುದು ಸತ್ಯ. ಈ ಕನಕ ಮಹಾಲಕ್ಷ್ಮಿಯ ಕಲೆಕ್ಷನ್ ಗೆ ‘ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ’ಯ ಕೈ ಕರಾಮತ್ತು ಅಂತ ಇನ್ನೊಂದು ಮಾಹಿತಿ. ಅಷ್ಟರಲ್ಲಿ ಐಟಿ ಇಲಾಖೆ ಮುಗಿಬಿದ್ದ ಪರಿಣಾಮ, ಗುಟ್ಟು ರಟ್ಟಾಗಿದೆ. ಅಲ್ಲಿಗೆ ಕಾಂಗ್ರೆಸ್‌ ಸರಕಾರದಲ್ಲಿ ಪರ್ಸಂಟೇಜ್ ಪಾರಮ್ಯ ಅವ್ಯಾಹತ ಎಂದಾಯಿತು” ಎಂದು ವಾಗ್ದಾಳಿ ನಡೆಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಹೇಳಿದ್ದ ಹಸಿ ಸುಳ್ಳು-‘ನಾನೂ ತಿನ್ನುವುದಿಲ್ಲ, ತಿನ್ನಲೂ ಬಿಡುವುದಿಲ್ಲ’

“ಈಗ ಹೇಳಿ ಸಿದ್ದರಾಮಯ್ಯ ಅವರೇ.. 42 ಕೋಟಿ ರೂ. ಬಗ್ಗೆ ಯಾವ ತನಿಖೆ ಮಾಡಿಸುತ್ತೀರಿ? ಸಿಬಿಐ, ಈಡಿ, ಹಾಲಿ ನ್ಯಾಯಾಧೀಶರು, ನಿವೃತ್ತ ನ್ಯಾಯಾಧೀಶರು? ದಯಮಾಡಿ ಹೇಳಿ, ರೈತರು ಬರ, ವಿದ್ಯುತ್ ಬಿಕ್ಕಟ್ಟಿನಿಂದ ಕಂಗೆಟ್ಟಿದ್ದಾರೆ. ಗುತ್ತಿಗೆದಾರರು ಅಯೋಮಯ ಸ್ಥಿತಿಯಲ್ಲಿದ್ದಾರೆ. ಆದರೂ ಕಲೆಕ್ಷನ್ ‘ ಕೈ’ಚಳಕ ಜೋರಾಗಿದೆ” ಎಂದು ಕುಟುಕಿದ್ದಾರೆ.

“ಪಂಚರಾಜ್ಯಗಳ ಪಾಲಿಕೆ ಕರ್ನಾಟಕ ಸಮೃದ್ಧ ಎಟಿಎಮ್!! ಕಾವೇರಿ ನೀರು ತಮಿಳುನಾಡಿಗೆ ನಿರಂತರ ಹರಿಯುತ್ತಿದ್ದರೆ, ಕನ್ನಡಿಗರ ತೆರಿಗೆಲಕ್ಷ್ಮೀ ಎಲೆಕ್ಷನ್ ರಾಜ್ಯಗಳ ಪಾಲಾಗುತ್ತಿದ್ದಾಳೆ!! ಆದಿಯಿಂದಲೂ ಇದೇ ಕಥೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೈಕಮಾಂಡ್ ಗೆ ಹಬ್ಬ. ಈಗಲೂ ಅದೇ ಆಗುತ್ತಿದೆ. ಪಂಚರಾಜ್ಯಗಳ ಚುನಾವಣೆಗಾಗಿ ಕರ್ನಾಟಕಕ್ಕೆ ಕನ್ನ ಹೊಡೆಯಲಾಗಿದೆ. ವೋಟು ಕೊಟ್ಟ ತಪ್ಪಿಗೆ ಕಾಂಗ್ರೆಸ್ ಉಂಡು ಹೋಗುತ್ತಿದೆ, ಕೊಂಡು ಹೋಗುತ್ತಿದೆ. ಇದು ಕನ್ನಡಿಗರ ಕರ್ಮ” ಎಂದು ಟೀಕಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿ, ಯೋಗಿಗಿಂತ ದೊಡ್ಡವರಿದ್ದಾರೆ ಎನ್ನುವವರು ದೇಶದ್ರೋಹಿ; ಬಿಜೆಪಿ ಅಭ್ಯರ್ಥಿ ಮಹೇಶ್‌ ಶರ್ಮಾ ವಿವಾದಾತ್ಮಕ ಹೇಳಿಕೆ

"ಪ್ರಧಾನಿ ಮೋದಿ-ಸಿಎಂ ಯೋಗಿಯನ್ನು ತಮ್ಮವರು ಎಂದು ಯಾರು ಪರಿಗಣಿಸುವುದಿಲ್ಲವೋ ಅವರು ತಮ್ಮ...

ಲೋಕಸಭಾ ಚುನಾವಣೆ | ಪ್ರಕಾಶ್ ಅಂಬೇಡ್ಕರ್‌ಗೆ ಎಐಎಂಐಎಂ ಬೆಂಬಲ: ಓವೈಸಿ

ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದ ಅಕೋಲಾ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ವಂಚಿತ್ ಬಹುಜನ ಅಘಾಡಿ...

ಕೇಂದ್ರ ಸರ್ಕಾರ ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ: ರಾಹುಲ್‌ ಗಾಂಧಿ ವಾಗ್ದಾಳಿ

"ಕೇಂದ್ರ ಸರ್ಕಾರ 20-25 ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ. ಉದ್ಯಮಿಗಳ...

ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ...