ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಪ್ರಭಾವಿ ನಾಯಕ, ಅವರ ನಾಯಕತ್ವ ಪಕ್ಷಕ್ಕೆ ಮುಖ್ಯ: ಡಿ ಕೆ ಶಿವಕುಮಾರ್

Date:

ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಪ್ರಭಾವಿ ನಾಯಕರು. ಅವರ ನಾಯಕತ್ವ ಪಕ್ಷಕ್ಕೆ ಮುಖ್ಯವಾಗಿದ್ದು, ಪಕ್ಷ ಬಳಸಿಕೊಳ್ಳುತ್ತಿದೆ. ಇದೇ 15ರಂದು ರಾಷ್ಟ್ರಮಟ್ಟದ ಹಿಂದುಳಿದ ವರ್ಗಗಳ ಸಮಿತಿ ಸಭೆಯು ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ನಡೆಯಲಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

- Advertisement -

ದೆಹಲಿಯಲ್ಲಿ ರಾಜಕೀಯಕ್ಕೆ ಸಂಬಂಧಿಸಿದಂತೆ ಏನಾದರೂ ಸಭೆ ಮಾಡುತ್ತೀರಾ ಎಂದು ಕೇಳಿದಾಗ, “ಇದೇ 10ರಂದು ನಾನು, ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಸಭೆ ಮಾಡಲಿದ್ದು, ಪಕ್ಷದ ವಿಚಾರವಾಗಿ ಚರ್ಚೆ ಮಾಡಲಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಸಭೆ ಸಿದ್ದರಾಮಯ್ಯ ಅವರನ್ನು ಪಕ್ಷದ ಒಬಿಸಿ ಸಮಿತಿ ಅಧ್ಯಕ್ಷರನ್ನಾಗಿ ಮಾಡಿರುವ ಬಗ್ಗೆ ಚರ್ಚೆಯೇ ಎಂದು ಕೇಳಿದಾಗ, “ಇಲ್ಲ, ಪಕ್ಷ ಸಂಘಟನೆ ವಿಚಾರವಾಗಿ ಈ ಸಭೆ ನಡೆಯಲಿದೆ. ಇನ್ನು ರಾಷ್ಟ್ರ ಮಟ್ಟದ ಒಬಿಸಿ ನಾಯಕರ ಸಭೆಯು ಇದೇ ತಿಂಗಳು 15ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಕೆಪಿಸಿಸಿಯು ಈ ಸಭೆಯ ಆತಿಥ್ಯ ವಹಿಸಲಿದೆ. ನಮ್ಮ ರಾಜ್ಯದಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಮುಖ್ಯಮಂತ್ರಿಗಳು ಈ ಸಭೆಯ ನೇತೃತ್ವ ವಹಿಸಲಿದ್ದಾರೆ. ಅವರು ಸಮಿತಿಯ ಮುಖ್ಯಸ್ಥರಲ್ಲದೇ ಇದ್ದರೂ, ದೇಶದ ಪ್ರಭಾವಿ ನಾಯಕರಾಗಿರುವ ಹಿನ್ನೆಲೆಯಲ್ಲಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಹಿಂದುಳಿದ ವರ್ಗಗಳ ಸಂಘಟನೆಯಲ್ಲಿ ಅವರ ಕೊಡುಗೆ ಪಕ್ಷಕ್ಕೆ ಅಪಾರವಾಗಿದೆ. ಹೀಗಾಗಿ ಕಾಂಗ್ರೆಸ್ ಪಕ್ಷ ಅವರ ನಾಯಕತ್ವ ಹಾಗೂ ಸಾಮರ್ಥ್ಯವನ್ನು ಬಳಸಿಕೊಳ್ಳುತ್ತಿದೆ” ಎಂದರು.

ಸಿಎಂ ಸ್ಥಾನ ಖಾಲಿ ಇಲ್ಲ

ಸಿಎಂ ಸ್ಥಾನಕ್ಕೆ ಶಾಸಕರು ನಿಮ್ಮನ್ನು ಬೆಂಬಲಿಸಿ ಮಾತನಾಡಿದ್ದಾರೆ ಎಂದು ಕೇಳಿದಾಗ, “ಸದ್ಯಕ್ಕೆ ಸಿಎಂ ಸ್ಥಾನ ಖಾಲಿ ಇಲ್ಲ. ಹೀಗಾಗಿ ಈ ವಿಚಾರವಾಗಿ ಈಗ ಚರ್ಚೆ ಮಾಡಲು ಇದು ಸಮಯವಲ್ಲ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...