ಕುಮಾರಸ್ವಾಮಿ ತರ ಹೋಟೆಲ್‌ನಲ್ಲಿ ಅಧಿಕಾರ ನಡೆಸಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು

Date:

  • ಕುಮಾರಸ್ವಾಮಿ ವೆಸ್ಟ್‌ಎಂಡ್‌ ಹೋಟೆಲ್‌ನಲ್ಲಿ ಯಾಕಿದ್ದರು?: ಸಿಎಂ
  • ‘ನಮಗೂ ಕ್ರೀಡಾ ಪ್ರೇಮ ಇದೆ, ಕ್ರೀಡೆ ಬೆಂಬಲಿಸಲು ಹೋಗಿದ್ದೆವು’

ಎಚ್‌ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ವೆಸ್ಟ್‌ಎಂಡ್‌ ಹೋಟೆಲ್‌ನಲ್ಲಿ ಯಾಕಿದ್ದರು? ಸುಮ್ಮನೇ ಮಾತನಾಡುತ್ತಾರೆ. ನಮಗೂ ಕ್ರೀಡಾ ಪ್ರೇಮ ಇದೆ. ಕ್ರೀಡೆ ಬೆಂಬಲಿಸಲು ಹೋಗಿದ್ದೆವು. ಅವರ ತರ ಹೋಟೆಲ್‌ನಲ್ಲಿ ಅಧಿಕಾರ ನಡೆಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು.

- Advertisement -

ಟೌನ್ ಹಾಲ್ ಬಳಿಯ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆಗೆ ಸೋಮವಾರ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ʼಪಾಕಿಸ್ತಾನ ಬೆಂಬಲಿಸಲು ಕಾಂಗ್ರೆಸ್‌ ನಾಯಕರು ಹೋಗಿದ್ದರುʼ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಕುಮಾರಸ್ವಾಮಿ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಇದ್ದ ಕಾರಣವನ್ನು ಮೊದಲು ತಿಳಿಸಲಿ. ಕುಣಿಯಲಾರದವ ನೆಲ ಡೊಂಕು ಎಂದರಂತೆ, ಹಾಗಾಗಿದೆ ಕುಮಾರಸ್ವಾಮಿ ಪರಿಸ್ಥಿತಿ. ಇದ್ದ ಅಧಿಕಾರ ಉಳಿಸಿಕೊಳ್ಳಲಾಗದೇ ಈಗ ಏನೇನೋ ಸಂಕಟದಿಂದ ಮಾತನಾಡುತ್ತಿದ್ದಾರೆ. ತಮಗೆ ಸರ್ಕಾರವನ್ನು ಉಳಿಸಿಕೊಳ್ಳಲು ಸಾಧ್ಯವಾಗದ ಕಾರಣ, ಬೇರೆಯವರ ಮೇಲೆ ಆರೋಪವನ್ನು ಹೊರಿಸಿರುವುದು ನಿರರ್ಥಕ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೆದ್ದ ಗ್ಯಾರಂಟಿಯನ್ನು ಗೆಲುವನ್ನಾಗಿ ಮಾಡಿಕೊಳ್ಳದ ಮೂರ್ಖರು

ಮುಖ್ಯಮಂತ್ರಿಗಳು ವಸತಿಗೃಹವನ್ನು ಹಿಂದಿರುಗಿಸಿಲ್ಲ ಎಂಬ ಅವರ ಟೀಕೆಗೆ ಉತ್ತರಿಸುತ್ತಾ, ” ಯಡಿಯೂರಪ್ಪನವರೂ ಕಾವೇರಿಯಲ್ಲಿ ಕಡೆಯತನಕ ವಾಸವಿದ್ದರು. ಜಾರ್ಜ್ ಅವರಿಗೆ ಹಂಚಿಕೆಯಾಗಿದ್ದ ವಸತಿಗೃಹದಲ್ಲಿ ನಾನು ವಾಸವಿದ್ದೆ. ನಾನು ವಾಸವಿದ್ದ ವಸತಿಗೃಹ ಮೀಸಲಾದ ವಸತಿಗೃಹವಲ್ಲ. ಅದರಲ್ಲಿ ಯಾರು ಬೇಕಾದರೂ ವಾಸವಿರಬಹುದು” ಎಂದರು.

“ನಾಳೆ ನಡೆಯಲಿರುವ ಚಾಮುಂಡೇಶ್ವರಿ ದೇವಿ ಮೆರವಣಿಗೆ, ನಂದಿಕಂಬದ ಪೂಜೆ, ಪಂಜಿನ ಮೆರವಣಿಗೆ ಸೇರಿದಂತೆ ದಸರಾ ಮಹೋತ್ಸವದಲ್ಲಿ ಸಚಿವರು, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಭಾಗವಹಿಸಲಿದ್ದೇನೆ ಎಂದರು.

ಕಿತ್ತೂರು ಉತ್ಸವಕ್ಕೆ ಅನುದಾನದ ಕೊರತೆ ಇದೆ ಎಂದು ಶಾಸಕರು ಹೇಳಿದ್ದಾರಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, “ಇದೆಲ್ಲ ಮಾಧ್ಯಮದ ಸೃಷ್ಟಿ. ಅನುದಾನ ಇದೆ. ಯಾವ ಶಾಸಕರೂ ಅನುದಾನ ಕೊರತೆ ಬಗ್ಗೆ ಮಾತನಾಡಿಲ್ಲ. ಸುಮ್ಮನೇ ಏನೇನೋ ಸುದ್ದಿ ಮಾಡಬೇಡಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ವಿರುದ್ಧ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಇತರ ಚುನಾವಣಾ...

ದೆಹಲಿ ಪೊಲೀಸ್ ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಪತ್ರಕರ್ತೆ ಸೇರಿ 17 ಮಂದಿ ಬಂಧನ

ದೆಹಲಿಯ ಜಂತರ್ ಮಂತರ್ ಪ್ರದೇಶದಲ್ಲಿ ನಡೆದ ಪ್ರತಿಭಟನೆಯ ವರದಿಗಾರಿಕೆ ವೇಳೆ ತಮ್ಮ...

ದೀಪ್ಕೆ, ಇತರೆ ಸಿಜೆಪಿ ನಾಯಕರ ಬಂಧನಕ್ಕೆ ಸರ್ಕಾರ ಸಂಚು: ಜೈಲಿಗೆ ಹೋಗಲು ಹೆದರಲ್ಲ ಎಂದ ಸೌರವ್ ದಾಸ್

ಅಕ್ಟೋಬರ್ 10 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗೂ...

ರಾಜ್ಯದಲ್ಲಿ ಹೆಚ್ಚುತ್ತಿದೆ ಮಳೆ ಆರ್ಭಟ; 19 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು...