ಲೋಹಿಯಾ ಚಿಂತನೆಗಳನ್ನು ಜಾರಿಗೆ ತರಲು ಗ್ಯಾರಂಟಿ ಯೋಜನೆಗಳ ಮೂಲಕ ಪ್ರಯತ್ನಿಸಿದ್ದೇನೆ: ಮಾಜಿ ಸಿಎಂ ಸಿದ್ದರಾಮಯ್ಯ

Date:

ಸಮಾಜದಲ್ಲಿನ ಅಸಮಾನತೆ ಮತ್ತು ಜಾತೀಯತೆಯನ್ನು ತೊಡೆದುಹಾಕದೆ ಸಮಸಮಾಜ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಎಲ್ಲರಿಗೂ ಸಮಾನ ಅವಕಾಶಗಳು ದೊರೆಯಬೇಕು. ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಶಕ್ತಿ ತುಂಬಿದಾಗ ಮಾತ್ರ ಶತಮಾನಗಳಿಂದ ಜಡತ್ವಕ್ಕೆ ಒಳಗಾಗಿರುವ ಜಾತಿ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಸಾಧ್ಯ. ಈ ನಿಟ್ಟಿನಲ್ಲಿ ರಾಮ ಮನೋಹರ ಲೋಹಿಯಾ ಅವರ ಚಿಂತನೆಗಳನ್ನು ಗ್ಯಾರಂಟಿ‌ ಯೋಜನೆಗಳ ಮೂಲಕ ಜಾರಿಗರ ತರಲು ನಮ್ಮ ಆಡಳಿತದಲ್ಲಿ ಪ್ರಯತ್ನಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

- Advertisement -

ನಟರಾಜ್ ಹುಳಿಯಾರ್ ಅವರು ರಚಿಸಿರುವ ‘ಡಾಕ್ಟರ್ ಸಾಹೇಬ್’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ನಾವು ಕಾಂಗ್ರೆಸ್ ಪಕ್ಷದಲ್ಲಿದ್ದರೂ ಲೋಹಿಯಾ ಅವರ ಸಮಾಜವಾದಿ ಚಿಂತನೆಗಳನ್ನು ಆಡಳಿತದಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಿದ್ದೇನೆ. ಅಧಿಕಾರ ವಿಕೇಂದ್ರೀಕರಣ, ಲಿಂಗ ತಾರತಮ್ಯ ನಿವಾರಣೆ, ಸಾಮಾಜಿಕ ಸಮಾನತೆ ಮತ್ತು ಅವಕಾಶ ವಂಚಿತ ಸಮುದಾಯಗಳಿಗೆ ನ್ಯಾಯ ಒದಗಿಸುವುದು ಸಮಾಜವಾದಿ ಚಿಂತನೆಯ ಪ್ರಮುಖ ಆಶಯಗಳಾಗಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

“ಲೋಹಿಯಾ ಅವರು ಕಾಂಗ್ರೆಸ್‌ಯೇತರ ಸರ್ಕಾರಗಳ ರಚನೆಯ ಕುರಿತು ಬಲವಾದ ನಿಲುವು ಹೊಂದಿದ್ದರು. ಅವರಿಗೆ ಕರ್ನಾಟಕದೊಂದಿಗೂ ನಿಕಟ ಸಂಬಂಧವಿತ್ತು. 1951ರಲ್ಲಿ ಅವರು ಕಾಗೋಡಿಗೆ ಭೇಟಿ ನೀಡಿದ್ದರು. ಅವರ ಚಿಂತನೆಗಳಿಂದ ಪ್ರಭಾವಿತರಾದ ಅನೇಕ ಸಮಾಜವಾದಿಗಳು ಕರ್ನಾಟಕದಲ್ಲಿದ್ದಾರೆ. ರಾಜಕೀಯ, ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಹಲವರು ಲೋಹಿಯಾ ಅವರ ವಿಚಾರಗಳಿಂದ ಪ್ರೇರಣೆ ಪಡೆದಿದ್ದಾರೆ” ಎಂದು ಸಿದ್ದರಾಮಯ್ಯ ಸ್ಮರಿಸಿದರು.

“ಸೀತಾರಾಮ್, ಕಿಶನ್ ಪಟ್ನಾಯಕ್, ಬಿ.ಆರ್. ಪಾಟೀಲ್, ಬಿ.ಎಲ್. ಶಂಕರ್ ಸೇರಿದಂತೆ ಅನೇಕ ಸಮಾಜವಾದಿ ಚಿಂತಕರ ಒಡನಾಟವನ್ನು ಉಲ್ಲೇಖಿಸಿದ ಅವರು, ಸಾಹಿತಿಗಳಾದ ತೇಜಸ್ವಿ, ಅನಂತಮೂರ್ತಿ ಮತ್ತು ರಾಮದಾಸ್ ಅವರಂತಹವರ ಮೇಲೆಯೂ ಸಮಾಜವಾದಿ ಚಿಂತನೆಗಳ ಪ್ರಭಾವವಿತ್ತು” ಎಂದರು.

ತಮ್ಮ ರಾಜಕೀಯ ಬದುಕಿನ ಆರಂಭವನ್ನು ನೆನಪಿಸಿಕೊಂಡ ಸಿದ್ದರಾಮಯ್ಯ, “1971ರಲ್ಲಿ ಮೈಸೂರಿನ ಶಾರದಾ ವಿಲಾಸ್ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದಾಗ ಪ್ರೊಫೆಸರ್ ನಂಜುಂಡಸ್ವಾಮಿ ಅವರ ಪರಿಚಯವಾಯಿತು. ಅವರು ವಿದ್ಯಾರ್ಥಿಗಳೊಂದಿಗೆ ದೇಶದ ರಾಜಕೀಯ, ಸಮಾಜ ಮತ್ತು ಸಾಮಾಜಿಕ ಬದಲಾವಣೆಗಳ ಕುರಿತು ಚರ್ಚೆ ನಡೆಸುತ್ತಿದ್ದರು. ಆ ಚರ್ಚೆಗಳು ತಮ್ಮ ಮೇಲೆ ಪ್ರಭಾವ ಬೀರಿದವು” ಎಂದು ಹೇಳಿದರು.

“ನಂಜುಂಡಸ್ವಾಮಿ ಅವರು ರಾಜಕೀಯಕ್ಕೆ ಬರಲು ಪ್ರೇರೇಪಿಸಿದರು. ಅವರಿಂದಲೇ ಸಮಾಜವಾದಿ ಯುವಜನ ಸಭಾದ ಸದಸ್ಯನಾದೆ. ರಾಮ ಮನೋಹರ ಲೋಹಿಯಾ ಅವರ ವಿಚಾರಗಳನ್ನು ನಂಜುಂಡಸ್ವಾಮಿ ಅವರು ಪರಿಚಯಿಸಿದರು. ಲೋಹಿಯಾ ಸಂಪಾದಕರಾಗಿದ್ದ ‘Mankind’ ಪತ್ರಿಕೆಯ ಕನ್ನಡ ಆವೃತ್ತಿ ‘ಮಾನವ’ ಪತ್ರಿಕೆಯನ್ನು ಮೈಸೂರಿನಲ್ಲಿ ಮಾರಾಟ ಮಾಡುತ್ತಿದ್ದೆ. ಈ ಅನುಭವಗಳು ನನ್ನ ರಾಜಕೀಯ ಚಿಂತನೆ ರೂಪುಗೊಳ್ಳಲು ನೆರವಾದವು” ಎಂದು ತಿಳಿಸಿದರು.

“1972ರಲ್ಲಿ ವಕೀಲನಾದ ಬಳಿಕ 1977ರವರೆಗೆ ಸಮಾಜವಾದಿ ಪಕ್ಷದಲ್ಲಿದ್ದೆ. ನಂತರ ಜನತಾ ಪಕ್ಷದ ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ತಾಲೂಕು ಮಟ್ಟದ ಸಂಘಟನೆಯಲ್ಲಿಯೂ ಕೆಲಸ ಮಾಡಿದೆ. 1980ರಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದಾಗ ಎದುರಿಸಿದ ಆರ್ಥಿಕ ಸಂಕಷ್ಟಗಳನ್ನೂ ನೆನಪಿಸಿಕೊಂಡರು. ಸಮಾಜವಾದಿ ನಾಯಕರು ಹಾಗೂ ಸ್ನೇಹಿತರು ನೆರವು ನೀಡಿದ್ದರೂ ಚುನಾವಣೆಯ ಕೊನೆಯ ದಿನಗಳಲ್ಲಿ ಹಣದ ಕೊರತೆ ಎದುರಿಸಬೇಕಾಯಿತು. ಅಂತಿಮವಾಗಿ 1983ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭೆಗೆ ಆಯ್ಕೆಯಾದೆ” ಎಂದು ತಮ್ಮ ರಾಜಕೀಯ ಪಯಣವನ್ನು ವಿವರಿಸಿದರು.

“ಜನತಾ ಪಕ್ಷ ವಿಭಜನೆಯಾಗದೆ ಉಳಿದಿದ್ದರೆ ಕರ್ನಾಟಕದಲ್ಲಿ ಅದರ ರಾಜಕೀಯ ನೆಲೆ ಮತ್ತಷ್ಟು ಬಲವಾಗಿ ಮುಂದುವರಿಯಬಹುದಿತ್ತು ಎಂಬುದು ನನ್ನ ಅಭಿಪ್ರಾಯ” ಎಂದು ಹೇಳಿದರು.

“ಲೋಹಿಯಾ ಅವರು ಹಿಂದುಳಿದವರು, ದಲಿತರು, ಮಹಿಳೆಯರು, ಆದಿವಾಸಿಗಳು ಮತ್ತು ಅಲ್ಪಸಂಖ್ಯಾತರಿಗೆ ರಾಜಕೀಯ ಪಕ್ಷಗಳು ಹಾಗೂ ಸರ್ಕಾರಗಳಲ್ಲಿ ಸಮರ್ಪಕ ಪ್ರಾತಿನಿಧ್ಯ ದೊರೆಯಬೇಕು ಎಂಬ ಆಶಯ ಹೊಂದಿದ್ದರು. ಈ ಸಮುದಾಯಗಳಿಗೆ ಅವಕಾಶ ಕಲ್ಪಿಸುವ ಮೂಲಕವೇ ಸಾಮಾಜಿಕ ನ್ಯಾಯದ ಗುರಿ ಸಾಧಿಸಲು ಸಾಧ್ಯ. ಸಮಾನ ಅವಕಾಶಗಳು ದೊರೆಯದ ಸಮಾಜದಲ್ಲಿ ನಿಜವಾದ ಸಮಾನತೆಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ” ಎಂದು ಅವರು ಅಭಿಪ್ರಾಯಪಟ್ಟರು.

ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳನ್ನು ಉಲ್ಲೇಖಿಸಿದ ಅವರು, “ಎಲ್ಲರಿಗೂ ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ದೊರೆಯಬೇಕು. ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಜನರಿಗೆ ಅವಕಾಶಗಳನ್ನು ಕಲ್ಪಿಸದೆ ಜಾತೀಯತೆಯನ್ನು ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಅವಕಾಶ ವಂಚಿತ ಸಮುದಾಯಗಳಿಗೆ ಶಿಕ್ಷಣ, ಆರ್ಥಿಕ ಸಬಲೀಕರಣ ಮತ್ತು ಸಾಮಾಜಿಕ ಪ್ರಾತಿನಿಧ್ಯ ದೊರೆಯಬೇಕು” ಎಂದರು.

“ಲೋಹಿಯಾ ಅವರ ಚಿಂತನೆಯಲ್ಲಿ ಜಾತಿ ಮತ್ತು ವರ್ಗದ ನಡುವಿನ ಸಂಬಂಧಕ್ಕೆ ಮಹತ್ವವಿದೆ. ವರ್ಗದಲ್ಲಿ ಚಲನೆ ಸಾಧ್ಯವಾದರೂ ಜಾತಿ ವ್ಯವಸ್ಥೆ ಸಾಮಾಜಿಕ ಚಲನೆಯನ್ನು ನಿರ್ಬಂಧಿಸುತ್ತದೆ. ಈ ವ್ಯವಸ್ಥೆಯಲ್ಲಿ ಬದಲಾವಣೆ ತರಬೇಕಾದರೆ ಜನರಿಗೆ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಶಕ್ತಿ ತುಂಬಬೇಕು. ಈ ಉದ್ದೇಶದಿಂದಲೇ ತಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಮೂಲಕ ಅಸಮಾನತೆಯನ್ನು ಕಡಿಮೆ ಮಾಡಲು ಪ್ರಯತ್ನಿಸಲಾಗಿದೆ” ಎಂದು ಹೇಳಿದರು.

“ಗ್ಯಾರಂಟಿ ಯೋಜನೆಗಳು ಸಮಾಜದಲ್ಲಿನ ಆರ್ಥಿಕ ಅಂತರವನ್ನು ಕಡಿಮೆ ಮಾಡುವ ಪ್ರಯತ್ನದ ಭಾಗವಾಗಿವೆ ಎಂಬುದು ತಮ್ಮ ನಂಬಿಕೆ. ಅಸಮಾನತೆ ಕಡಿಮೆಯಾದಾಗ ಮಾತ್ರ ಸಮಾನತೆಯ ಸಮಾಜ ನಿರ್ಮಾಣಕ್ಕೆ ಅಗತ್ಯವಾದ ಪರಿಸ್ಥಿತಿ ಸೃಷ್ಟಿಯಾಗುತ್ತದೆ” ಎಂದು ಸಿದ್ದರಾಮಯ್ಯ ತಿಳಿಸಿದರು.

ಬಸವಣ್ಣನವರ ವಚನವನ್ನು ಉಲ್ಲೇಖಿಸಿದ ಅವರು, “ಇವನಾರವ ಇವನಾರವ ಇವನಾರವ ಎಂದೆನಿಸದಿರಯ್ಯ, ಇವ ನಮ್ಮವ ಇವ ನಮ್ಮವ ಇವ ನಮ್ಮವನೆಂದೆನಿಸಯ್ಯ ಎಂಬ ಸಮಾನತೆಯ ಸಂದೇಶಕ್ಕೆ ಸುಮಾರು 850 ವರ್ಷಗಳ ಇತಿಹಾಸವಿದ್ದರೂ ಜಾತಿ ವ್ಯವಸ್ಥೆ ಇನ್ನೂ ಸಂಪೂರ್ಣವಾಗಿ ನಿರ್ಮೂಲನೆಯಾಗಿಲ್ಲ” ಎಂದು ವಿಷಾದಿಸಿದರು.

“ಸಮಾಜದಲ್ಲಿ ಜಾತಿ ವ್ಯವಸ್ಥೆ ಮುಂದುವರಿಯಲು ಅದರಲ್ಲಿರುವ ಜಡತ್ವವೇ ಪ್ರಮುಖ ಕಾರಣವಾಗಿದೆ. ಅಸ್ಪೃಶ್ಯರು, ದಲಿತರು, ಆದಿವಾಸಿಗಳು ಮತ್ತು ಬಡವರಿಗೆ ಸಮಾನ ಅವಕಾಶಗಳು ದೊರೆಯದಿರುವುದರಿಂದ ಅಸಮಾನತೆ ಮುಂದುವರಿದಿದೆ. ಅವಕಾಶಗಳಿಂದ ವಂಚಿತರಾದವರನ್ನು ಅವರ ಸಾಮರ್ಥ್ಯದ ಆಧಾರದಲ್ಲಿ ಅಳೆಯಲು ಸಾಧ್ಯವಿಲ್ಲ. ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಿದಾಗ ಮಾತ್ರ ಸಾಮಾಜಿಕ ಬದಲಾವಣೆ ಸಾಧ್ಯ” ಎಂದು ಹೇಳಿದರು.

“ಸಮಾಜವಾದಿ ಚಿಂತನೆಯ ಜೊತೆಗೆ ಅಂಬೇಡ್ಕರ್, ಜಯಪ್ರಕಾಶ್ ನಾರಾಯಣ್ ಮತ್ತು ವಿನೋಬಾ ಭಾವೆ ಅವರ ವಿಚಾರಗಳನ್ನೂ ಅರ್ಥಮಾಡಿಕೊಳ್ಳಬೇಕು. ಸಮಾಜದ ಒಳನೋಟವನ್ನು ಅರಿಯದೆ ಸಾಮಾಜಿಕ ಬದಲಾವಣೆಯ ಆಶಯವನ್ನು ಸಾಕಾರಗೊಳಿಸಲು ಸಾಧ್ಯವಿಲ್ಲ. ಇಂತಹ ಚಿಂತನೆಗಳು ಜನರಲ್ಲಿ, ವಿಶೇಷವಾಗಿ ಯುವಜನರಲ್ಲಿ ಜಾಗೃತಿ ಮೂಡಿಸಬೇಕು” ಎಂದು ಅಭಿಪ್ರಾಯಪಟ್ಟರು.

“ನಟರಾಜ್ ಹುಳಿಯಾರ್ ಅವರು ಕೇವಲ ಕಥೆ, ಕಾದಂಬರಿ ಮತ್ತು ಕವಿತೆಗಳನ್ನು ಬರೆಯುವ ಸಾಹಿತಿಯಲ್ಲ. ಸಮಾಜವನ್ನು ಆಳವಾಗಿ ಅರ್ಥಮಾಡಿಕೊಳ್ಳುವ ಚಿಂತಕರೂ ಹೌದು. ಸಮಾಜದ ಒಳನೋಟವನ್ನು ಗ್ರಹಿಸಿ ಲೋಹಿಯಾ ಅವರ ಚಿಂತನೆಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಅವರು ಈ ಪುಸ್ತಕವನ್ನು ರಚಿಸಿದ್ದಾರೆ” ಎಂದು ಸಿದ್ದರಾಮಯ್ಯ ಹೇಳಿದರು.

ಈ ಪುಸ್ತಕದ ರಚನೆಗೆ ಮೂರು ವರ್ಷಗಳ ಕಾಲ ಶ್ರಮಿಸಿರುವ ನಟರಾಜ್ ಹುಳಿಯಾರ್ ಅವರನ್ನು ಅಭಿನಂದಿಸಿದ ಅವರು,” ಪುಸ್ತಕವು ಜನರಲ್ಲಿ, ವಿಶೇಷವಾಗಿ ವಿದ್ಯಾರ್ಥಿಗಳು, ಯುವಕರು ಮತ್ತು ಮಹಿಳೆಯರಲ್ಲಿ ಸಾಮಾಜಿಕ ಬದಲಾವಣೆಯ ಕುರಿತು ಚಿಂತನೆ ಮೂಡಿಸಲಿ” ಎಂದು ಆಶಿಸಿದರು.

“ಸಮಾಜದಲ್ಲಿ ಅವಕಾಶ ವಂಚಿತರಾಗಿರುವವರಿಗೆ ಸಮಾನ ಅವಕಾಶಗಳನ್ನು ಕಲ್ಪಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಲೋಹಿಯಾ ಅವರ ಕನಸಿನ ಸಮಸಮಾಜವನ್ನು ನಿರ್ಮಿಸಲು ಯುವಜನರು, ವಿದ್ಯಾರ್ಥಿಗಳು ಮತ್ತು ಮಹಿಳೆಯರು ಈ ಚಿಂತನೆಗಳನ್ನು ಅರ್ಥಮಾಡಿಕೊಂಡು ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಪ್ರಯತ್ನಿಸಬೇಕು” ಎಂದು ಕರೆ ನೀಡಿದರು.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಂಜಾಬ್ ಸಿಎಂ ಕಚೇರಿಗೆ ಭ್ರಷ್ಟಾಚಾರದ ನಂಟು: ಸಿಬಿಐ ಎಫ್‌ಐಆರ್ ತಡೆಗೆ ಸುಪ್ರೀಂ ಕೋರ್ಟ್ ನಕಾರ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ (ಒಎಸ್‌ಡಿ) ಬೆಸೆದುಕೊಂಡಿರುವ ಭ್ರಷ್ಟಾಚಾರ...

ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಎಸ್‌ಸಿ ಮೀಸಲಾತಿ ಕೈಬಿಟ್ಟಿದ್ದಕ್ಕೆ ಆಕ್ರೋಶ: ಅ.16ರಂದು ಹೋರಾಟದ ಎಚ್ಚರ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ...

‘ನಮ್ಮನ್ನು ದಮನಿಸುವ ಪೊಲೀಸ್ ಆದೇಶ ಕೂಡಲೇ ರದ್ದಾಗಲಿ’: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಲಿಂಗತ್ವ ಅಲ್ಪಸಂಖ್ಯಾತರು

ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಇತ್ತೀಚೆಗೆ ಹೊರಡಿಸಿರುವ...