ಜೀವಮಾನದಲ್ಲಿಯೇ ಮತ್ತೆ ಅಧಿಕಾರ ಕೈಗೆ ಬಾರದು ಎಂಬ ವಾಸ್ತವ ಕುಮಾರಸ್ವಾಮಿ ನಿದ್ದೆಗೆಡಿಸಿದೆ: ಸಿದ್ದರಾಮಯ್ಯ

Date:

Advertisements
  • ‘ಯಾರಾದರೂ ಹಿತೈಷಿಗಳು ಇವರಿಗೆ ಸರಿಯಾದ ಚಿಕಿತ್ಸೆಗೆ ವ್ಯವಸ್ಥೆ ಮಾಡಿ’
  • ‘ಕುಮಾರಸ್ವಾಮಿ ವಿಶ್ವಾಸಾರ್ಹ ದಾಖಲೆ ಇಟ್ಟುಕೊಂಡು ಮಾತನಾಡಲಿ’

ಜೀವಮಾನದಲ್ಲಿಯೇ ಮತ್ತೆ ಅಧಿಕಾರ ಕೈಗೆ ಬಾರದು ಎಂಬ ರಾಜಕೀಯ ವಾಸ್ತವ ಎಚ್ ಡಿ ಕುಮಾರಸ್ವಾಮಿಯವರ ನಿದ್ದೆಗೆಡಿಸಿ, ಮಾನಸಿಕ ಸ್ವಾಸ್ತ್ಯವನ್ನು ಕಲಕಿದ ಹಾಗೆ ಕಾಣುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ.

ಕುಮಾರಸ್ವಾಮಿಯ ಸರಣಿ ಆರೋಪಗಳಿಗೆ ಖಾರವಾಗಿಯೇ ಪ್ರತಿಕ್ರಿಯಿಸಿರುವ ಅವರು, “ಸುಳ್ಳುಕೋರನೆಂಬ ಅಪಖ್ಯಾತಿಯನ್ನು ಸ್ವಯಂ ತಾನೇ ಸಾಬೀತುಪಡಿಸುವ ಪೋಟಿಗೆ ಬಿದ್ದಿರುವ ಈ ಮಾಜಿ ಮುಖ್ಯಮಂತ್ರಿ ಇಂದು ಬೆಳ್ಳಂಬೆಳಗೆ ಎದ್ದು ಮತ್ತೊಂದಷ್ಟು ಸುಳ್ಳುಗಳನ್ನು ಉದುರಿಸಿದ್ದು ನೋಡಿದರೆ ರಾತ್ರಿಯಿಡೀ ನಿದ್ದೆಯಿಲ್ಲದೆ ಹೊರಳಾಡಿದ್ದು ಸ್ಪಷ್ಟವಾಗಿದೆ. ಯಾರಾದರೂ ಹಿತೈಷಿಗಳು ಇವರಿಗೆ ಸರಿಯಾದ ಚಿಕಿತ್ಸೆಗೆ ವ್ಯವಸ್ಥೆ ಮಾಡಬಾರದೇ?” ಎಂದು ಲೇವಡಿ ಮಾಡಿದ್ದಾರೆ.

“ಮಾಜಿ ಶಾಸಕ ಡಾ.ಯತೀಂದ್ರ ಅವರ ಜೊತೆಗಿನ ನನ್ನ ಸಂಭಾಷಣೆ ವರುಣ ಕ್ಷೇತ್ರದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಂಬಂಧಪಟ್ಟಿದ್ದು ಎನ್ನುವುದನ್ನು ದಾಖಲೆ ಸಮೇತ ಸಾಬೀತುಪಡಿಸಿದ್ದರೂ ಎಚ್.ಡಿ.ಕುಮಾರಸ್ವಾಮಿ ಇಂದು ಮತ್ತೊಂದು ಸುಳ್ಳನ್ನು ಸೃಷ್ಟಿಸಿ ಜನತೆಯ ದಾರಿ ತಪ್ಪಿಸಲು ಹೆಣಗಾಡಿದ್ದಾರೆ” ಎಂದಿದ್ದಾರೆ.

“ನಮ್ಮ ಸಂಭಾಷಣೆಯಲ್ಲಿ ಪ್ರಸ್ತಾಪವಾಗಿರುವ ವಿವೇಕಾನಂದ ಅವರು ಮೈಸೂರು ತಾಲೂಕಿನ ಬಿಇಒ ಎನ್ನುವುದು ಸ್ಪಷ್ಟವಾಗಿದ್ದರೂ ಯಾವುದೋ ವರ್ಗಾವಣೆಯ ಪಟ್ಟಿಯಲ್ಲಿನ ವಿವೇಕಾನಂದ ಎಂಬ ಅಧಿಕಾರಿಯ ಹೆಸರು ಹುಡುಕಿ ತನ್ನ ಸುಳ್ಳಿಗೆ ಸಾಕ್ಷಿ ನೀಡುವ ಹತಾಶ ಪ್ರಯತ್ನ ಮಾಡಿದ್ದಾರೆ. ಇದನ್ನು ಮಾನಸಿಕ ಅಸ್ವಸ್ಥತೆ ಎನ್ನದೆ ಬೇರೆ ಏನು ಹೇಳಲು ಸಾಧ್ಯ” ಎಂದು ಪ್ರಶ್ನಿಸಿದ್ದಾರೆ.

Advertisements
Bose Military School

ಈ ಸುದ್ದಿ ಓದಿದ್ದೀರಾ? ವಿಡಿಯೋ ವಿವೇಕಾನಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್‌ ಪಡೆದಿದ್ದು ಹೇಗೆ: ಕುಮಾರಸ್ವಾಮಿ ಪ್ರಶ್ನೆ

“ರಾಜ್ಯದಲ್ಲಿ ಕುಮಾರಸ್ವಾಮಿ ಎಂಬ ಹೆಸರಿನವರು ಸಾವಿರಾರು ಮಂದಿ ಇದ್ದಾರೆ. ಅವರಲ್ಲಿಯೂ ಒಂದಷ್ಟು ಪಕ್ಕಾ ಕ್ರಿಮಿನಲ್‌ಗಳೂ ಇದ್ದಾರೆ. ಹೆಸರಿನ ಕಾರಣಕ್ಕಾಗಿ ಅವರೆಲ್ಲರ ಪಾಪಕರ್ಮಗಳ ಹೊರೆಯನ್ನು ಎಚ್.ಡಿ.ಕುಮಾರಸ್ವಾಮಿಯವರ ತಲೆ ಮೇಲೆ ಹೊರಿಸಲಿಕ್ಕೆ ಆಗುತ್ತಾ? ‘ಎಲ್ಲಿದಿಯಪ್ಪಾ ನಿಖಿಲ್’ ಎಂದು ಸಾರ್ವಜನಿಕ ಸಭೆಯಲ್ಲಿ ಕುಮಾರಸ್ವಾಮಿ ಕೂಗಿದಾಗ ಅಲ್ಲಿ ಎಷ್ಟು ಮಂದಿ ಆ ಹೆಸರಿನವರಿದ್ದರೋ ಏನೋ? ಓಗೊಟ್ಟಿದ್ದು ಇವರ ಮಗ ಮಾತ್ರ ಅಲ್ವಾ? ಉಳಿದವರು ಓಗೊಟ್ಟಿದ್ದರೂ ಅವರನ್ನು ಮಕ್ಕಳು ಎಂದು ಇವರು ಒಪ್ಪಿಕೊಳ್ಳುತ್ತಿದ್ರಾ?” ಎಂದು ತಿರುಗೇಟು ನೀಡಿದ್ದಾರೆ.

“ಒಬ್ಬ ಜವಾಬ್ದಾರಿಯುತ ರಾಜಕೀಯ ನಾಯಕನಾಗಿ ಕುಮಾರಸ್ವಾಮಿಯವರು ವಿಶ್ವಾಸಾರ್ಹ ದಾಖಲೆಗಳನ್ನು ಇಟ್ಟುಕೊಂಡು ಮಾತನಾಡಬೇಕೇ ಹೊರತು ತಾವೇ ಸೃಷ್ಟಿಸಿರುವ ಸುಳ್ಳಿನ ಕಂತೆಗಳನ್ನಲ್ಲ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜೊತೆಗೆ ರಾಜಕೀಯವಾಗಿ ನನಗೆ ಭಿನ್ನಾಭಿಪ್ರಾಯಗಳಿವೆ. ಆದರೆ ಅವರೆಂದೂ ಈ ರೀತಿಯ ಸಡಿಲ ಮಾತುಗಳನ್ನು ಆಡಿಲ್ಲ. ಕುಮಾರಸ್ವಾಮಿಯವರು ಕನಿಷ್ಠ ಅವರ ಅಣ್ಣ ಎಚ್.ಡಿ.ರೇವಣ್ಣ ಅವರಿಂದಾದರೂ ಒಂದಿಷ್ಟು ರಾಜಕೀಯ ನಡವಳಿಕೆಯನ್ನು ಕಲಿಯಬಾರದಾ?” ಎಂದು ಹರಿಹಾಯ್ದಿದ್ದಾರೆ.

“ಡಾ.ಯತೀಂದ್ರ ವಿರುದ್ದ ತಾನು ಮಾಡಿರುವ ಆರೋಪ ಸುಳ್ಳು ಎನ್ನುವುದು ಎಚ್.ಡಿ.ಕುಮಾರಸ್ವಾಮಿಯವರಿಗೆ ಖಂಡಿತ ಮನವರಿಕೆ ಆಗಿದೆ. ಈಗಲೂ ಕಾಲ ಮಿಂಚಿಲ್ಲ. ತಪ್ಪನ್ನು ಒಪ್ಪಿಕೊಂಡರೆ ಯಾರೂ ಸಣ್ಣವರಾಗುವುದಿಲ್ಲ. ಒಂದು ಸುಳ್ಳನ್ನು ಸಮರ್ಥಿಸಲು ನೂರು ಸುಳ್ಳುಗಳನ್ನು ಹೇಳುವುದರ ಬದಲಿಗೆ ಮಾಡಿದ ತಪ್ಪನ್ನು ಒಪ್ಪಿಕೊಂಡು ಸಾರ್ವಜನಿಕವಾಗಿ ಕ್ಷಮೆ ಕೇಳುವುದು ಉತ್ತಮ ನಡೆ. ಆ ಸದ್ಬುದ್ದಿ ಅವರಿಗೆ ಬರಲಿ ಎಂದು ಹಾರೈಸುತ್ತೇನೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಸಚಿವ ಮಹದೇವಪ್ಪ ಸುತ್ತ ಜಾತೀಯತೆ ಆರೋಪ; ಕಾಂಗ್ರೆಸ್ಸಿಗರು ಹೇಳಿದ್ದೇನು?

ಮೈಸೂರು ಜಿಲ್ಲೆಯ ತಿ. ನರಸೀಪುರ ಪುರಸಭೆ ವ್ಯಾಪ್ತಿಗೆ ಒಳಪಡುವ ಗೋಪಾಲಪುರ ವಿಷಯದಲ್ಲಿ...

ಚಿತ್ರದುರ್ಗ, ದಾವಣಗೆರೆ | ಭದ್ರಾ ಬಲದಂಡೆಯಿಂದ ಕುಡಿಯುವ ನೀರು ಹರಿಸಲು ಐಐಎಸ್‌ಸಿ ವರದಿ, ನಾಲೆ ಜಲಾಶಯಕ್ಕೆ ತೊಂದರೆ ಇಲ್ಲ

ಭದ್ರಾ ಜಲಾಶಯದ ಬಲದಂಡೆ ನಾಲೆಯಿಂದ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕು ಹಾಗೂ ಚಿಕ್ಕಮಗಳೂರು...

ನವದೆಹಲಿಯಲ್ಲಿ ದೇವನಹಳ್ಳಿ ರೈತ ಹೋರಾಟದ ಸದ್ದು: ಜೆಪಿಸಿ ಸಭೆಯಿಂದ ಬಿಜೆಪಿ ಸದಸ್ಯರ ಪಲಾಯನ

ದೇವನಹಳ್ಳಿ ರೈತರ ಭೂ ಸ್ವಾಧೀನ ಕುರಿತ ಭೂ ಒತ್ತುವರಿ ಪರಿಶೀಲನೆಯ ಜಂಟಿ...

ಹೆಚ್ಚುತ್ತಿರುವ ಹೃದಯಾಘಾತ | ಡಾ. ರವೀಂದ್ರನಾಥ್ ನೇತೃತ್ವದಲ್ಲಿ ತಜ್ಞರ ಸಮಿತಿ ರಚನೆ

ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ...

Download Eedina App Android / iOS

X