ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

Date:

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೂ ಈ ಸ್ಟಿಂಗ್ ಕಾರ್ಯಾಚರಣೆಗೂ ಸಂಬಂಧವಿದೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಆರೋಪ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ್ದು ಎನ್ನಲಾದ ವಿಡಿಯೋ-ಆಡಿಯೋಗಳು ಹೊರಬಂದಿವೆ. ಆದರೆ, ವಿಡಿಯೋಗಳಿಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ತಮ್ಮ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆಯುತ್ತಿದೆ ಎಂದು ಆರೋಪಿಸಿ ನ್ಯಾಯಾಲಯದ ಮೊರೆಹೋಗಿರುವ ಅವರು, ತಮ್ಮ ವರ್ಚಸ್ಸಿಗೆ ಹಾನಿ ಮಾಡುವಂತಹ ಯಾವುದೇ ವಿಡಿಯೋಗಳನ್ನ ಹಂಚಿಕೊಳ್ಳದಂತೆ ‘ಸ್ಟೇ’ ತಂದಿದ್ದಾರೆ. ಪೊಲೀಸ್ ತನಿಖೆಯನ್ನೂ ಕೋರಿದ್ದಾರೆ. ಅಂತಿಮವಾಗಿ ಸತ್ಯವೇ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

- Advertisement -

ಸ್ಟಿಂಗ್ ಆಪರೇಷನ್ ವಿವಾದ ಆರಂಭವಾಗಿದ್ದು ಹೇಗೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಗಲಕೋಟೆ | ನಿಲ್ದಾಣಗಳಿದ್ದರೂ ರಸ್ತೆಯಲ್ಲೇ ಬಸ್‌ ನಿಲುಗಡೆ; ಟ್ರಾಫಿಕ್...

ಬಾಗಲಕೋಟೆ ನಗರದಲ್ಲಿ ಸುಗಮ ಸಂಚಾರಕ್ಕಾಗಿ ಬಸ್‌ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಪ್ರಯಾಣಿಕರು ಬಿಸಿಲು, ಮಳೆಯಿಂದ ರಕ್ಷಣೆ ಪಡೆಯಲು ಆಸನ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಬಸ್‌ಗಳು ನಿಲುಗಡೆಗೊಳ್ಳಲು ಪ್ರತ್ಯೇಕ ಜಾಗವನ್ನೂ ಗುರುತಿಸಲಾಗಿದೆ. ಆದರೆ, ಬಸ್‌ಗಳು ಮಾತ್ರ ನಿಲ್ದಾಣಕ್ಕೆ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು, ವಿದ್ಯಾರ್ಥಿಗಳು ಹಾಗೂ ವೃತ್ತಿಪರ ಪತ್ರಕರ್ತರ ಮೇಲೆ ಪೊಲೀಸರು ಕನಿಕರವಿಲ್ಲದೆ ಮೃಗಗಳಂತೆ ಎರಗಿಬೀಳುತ್ತಿದ್ದಾರೆ. ಎಸ್‌ಐಆರ್‌ ವಿರುದ್ಧದ ಹೋರಾಟದಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು...

ರ‍್ಯಾಂಕ್ ಸಾಮರ್ಥ್ಯದ ಮಾನದಂಡವಲ್ಲ: ಮಕ್ಕಳ ವಿಕಾಸಕ್ಕೆ ಒತ್ತಡ ರಹಿತ...

ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸುವುದಷ್ಟೇ ಅಲ್ಲ. ಶಿಕ್ಷಣದ ನಿಜವಾದ ಉದ್ದೇಶ ಮಗುವಿನ ಜ್ಞಾನ, ಚಿಂತನಾ ಶಕ್ತಿ, ಸೃಜನಶೀಲತೆ, ಆತ್ಮವಿಶ್ವಾಸ, ಸಾಮಾಜಿಕ ಪ್ರಜ್ಞೆ...

ಇತ್ತೀಚೆಗೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಖಾಸಗಿ ತಂಡವೊಂದು ತಮ್ಮ ಕೆಲವು ಸಚಿವರನ್ನು ಗುರಿಯಾಗಿಸಿಕೊಂಡು ಸ್ಟಿಂಗ್ ಆಪರೇಷನ್ ನಡೆಸಲು ಪ್ರಯತ್ನಿಸಿದೆ ಎಂದು ಆರೋಪಿಸಿದ್ದರು. ಈ ಹೇಳಿಕೆ ಬೆನ್ನಲ್ಲೇ ಸಚಿವರನ್ನು ಬಲೆಗೆ ಬೀಳಿಸುವ ಪ್ರಯತ್ನ ನಡೆದಿದೆಯೇ? ಅದರ ಹಿಂದೆ ಯಾರಿದ್ದಾರೆ ಮತ್ತು ಅಂತಹ ವಿಡಿಯೋಗಳನ್ನು ರಾಜಕೀಯ ಒತ್ತಡಕ್ಕೆ ಬಳಸಲಾಗಿದೆಯೇ ಎಂಬ ಪ್ರಶ್ನೆಗಳು ಮುನ್ನೆಲೆಗೆ ಬಂದವು.

ಈ ನಡುವೆ ಕೇಂದ್ರ ಸಚಿವ, ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಮತ್ತೊಂದು ಹೆಜ್ಜೆ ಮುಂದೆಹೋಗಿ, “ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಸ್ಟಿಂಗ್ ಆಪರೇಷನ್ ಬಳಸಲಾಗಿದೆ. ಆ ಬೆಳವಣಿಗೆಯ ಹಿಂದೆ ಡಿ.ಕೆ. ಶಿವಕುಮಾರ್ ಇದ್ದಾರೆ” ಎಂದು ನೇರವಾಗಿ ಆರೋಪ ಮಾಡಿದರು.

“ಕಾಂಗ್ರೆಸ್ ಹೈಕಮಾಂಡ್ ಜೊತೆ ಸಚಿವ ಸಂಪುಟ ವಿಸ್ತರಣೆಯ ವಿಚಾರವಾಗಿ ಚರ್ಚಿಸಲು ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದರು. ಆದರೆ, ಅಲ್ಲಿ ಸ್ಟಿಂಗ್ ಕಾರ್ಯಾಚರಣೆಗೆ ಸಂಬಂಧಿಸಿದ ವಿಷಯವನ್ನು ಮುಂದಿಟ್ಟು ಅವರಿಂದ ರಾಜೀನಾಮೆ ಪಡೆಯಲಾಯಿತು” ಎಂದು ಕುಮಾರಸ್ವಾಮಿ ಆರೋಪಿಸಿದರು.

ಆದರೆ, ನಿಜಕ್ಕೂ ಸ್ಟಿಂಗ್ ಕಾರ್ಯಾಚರಣೆ ನಡೆದಿತ್ತೇ, ಅಂತಹ ವಿಡಿಯೋ ಕಾಂಗ್ರೆಸ್ ನಾಯಕತ್ವಕ್ಕೆ ದೊರೆತಿದ್ದವೇ ಹಾಗೂ ಸಿದ್ದರಾಮಯ್ಯ ಅವರ ರಾಜೀನಾಮೆಯ ಮೇಲೆ ಅದು ಪರಿಣಾಮ ಬೀರಿತ್ತೇ ಎಂಬುದಕ್ಕೆ ಯಾವುದೇ ಆಧಾರ ದೊರೆತಿಲ್ಲ.

ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ

ತಮ್ಮ ರಾಜೀನಾಮೆಯನ್ನು ಸ್ಟಿಂಗ್ ಆಪರೇಷನ್‌ ಜೊತೆಗೆ ಬೆಸೆದು ವಿಪಕ್ಷಗಳು ಮಾತನಾಡುತ್ತಿದ್ದರೂ, ಸಿದ್ದರಾಮಯ್ಯ ಅವರು ತಕ್ಷಣವೇ ವಿವಾದಕ್ಕೆ ಪ್ರತಿಕ್ರಿಯೆ ನೀಡಲಿಲ್ಲ. ಅವರ ಈ ಮೌನವನ್ನು ರಾಜಕೀಯ ವಲಯದಲ್ಲಿ ವಿಭಿನ್ನ ರೀತಿಯಲ್ಲಿ ವ್ಯಾಖ್ಯಾನಿಸಿ ವದಂತಿಗಳನ್ನು ಇತ್ತಷ್ಟು ವ್ಯಾಪಕವಾಗಿ ಹರಡಲಾಯಿತು.

ಇದೆಲ್ಲದರ ನಡುವೆ, ಮೊದಲ ಬಾರಿಗೆ ಈ ವಿವಾದದ ಬಗ್ಗೆ ಅಕ್ಟೋಬರ್‌ 11ರಂದು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಸ್ಟಿಂಗ್ ಕಾರ್ಯಾಚರಣೆ ನಡೆಯುತ್ತಿರುವ ವಿಚಾರ ತಮಗೆ ತಿಳಿದಿದೆ. ಆದರೆ, ಅದನ್ನು ಯಾರು ನಡೆಸುತ್ತಿದ್ದಾರೆ ಎಂಬ ಸತ್ಯ ಹೊರಬರಬೇಕು” ಎಂದಷ್ಟೇ ಹೇಳಿದರು.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೋಗಳು

ವಿವಾದಕ್ಕೆ ಮತ್ತಷ್ಟು ತೀವ್ರತೆ ತಂದದ್ದು ಸಿದ್ದರಾಮಯ್ಯ ಅವರ ಹೆಸರಿನೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಲು ಆರಂಭಿಸಿದ ವಿಡಿಯೋಗಳು. ಈ ವಿಡಿಯೋಗಳನ್ನು ಕೆಲವರು ಸ್ಟಿಂಗ್ ಆಪರೇಷನ್ ದೃಶ್ಯಗಳೆಂದು, ಮತ್ತೂ ಕೆಲವರು ಹನಿಟ್ರ್ಯಾಪ್ ಎಂದು ಆರೋಪಿಸಿದರು.

ಆದರೆ, ವಿಡಿಯೋಗಳ ಮೂಲ, ಅವು ಯಾವಾಗ ಮತ್ತು ಎಲ್ಲಿ ಚಿತ್ರೀಕರಿಸಲ್ಪಟ್ಟವು, ಅವುಗಳಲ್ಲಿ ಕಂಡುಬರುವ ವ್ಯಕ್ತಿಗಳು ಯಾರು, ದೃಶ್ಯಗಳನ್ನು ತಿರುಚಲಾಗಿದೆಯೇ ಎಂಬ ಬಗ್ಗೆ ಸ್ಪಷ್ಟನೆ ಇಲ್ಲ. ಆದ್ದರಿಂದಲೇ, ಸಿದ್ದರಾಮಯ್ಯ ಅವರು ತನಿಖೆಗೆ ಒತ್ತಾಯಿಸಿದ್ದಾರೆ.

ಸತ್ಯಕ್ಕೇ ಜಯ ಎಂದಿದ್ದೇಕೆ ಸಿದ್ದರಾಮಯ್ಯ?

ಅಕ್ಟೋಬರ್ 13ರಂದು ಸಿದ್ದರಾಮಯ್ಯ ಅವರು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯದ ಮೊರೆಹೋಗಿ ತಮ್ಮ ಹೆಸರನ್ನು ಜೋಡಿಸಿರುವ ವಿವಾದಾತ್ಮಕ ವಿಡಿಯೋಗಳ ಪ್ರಕಟಣೆ ಮತ್ತು ಪ್ರಸಾರಕ್ಕೆ ತಡೆಯಾಜ್ಞೆ ತಂದಿದ್ದಾರೆ.

“ಈ ವಿಡಿಯೋಗಳು ತಮ್ಮ ವಿರುದ್ಧ ರಾಜಕೀಯ ದುರುದ್ದೇಶದಿಂದ ನಡೆಸುತ್ತಿರುವ ಅಪಪ್ರಚಾರದ ಭಾಗವಾಗಿವೆ. ಅವುಗಳನ್ನು ಪ್ರಸಾರ ಮಾಡಿದರೆ ತಮ್ಮ ಗೌರವ ಮತ್ತು ಸಾರ್ವಜನಿಕ ಪ್ರತಿಷ್ಠೆಗೆ ಹಾನಿಯಾಗುತ್ತದೆ. ಆದ್ದರಿಂದೇ ಸ್ಟೇ ತಂದಿದ್ದೇನೆಯೇ ಹೊರತು, ನಾನು ಯಾವುದೇ ಅಪರಾಧ ಮಾಡಿಲ್ಲ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ತಮ್ಮ ಜೀವನದುದ್ದಕ್ಕೂ ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬೆಂಬಲಿಸಿದ್ದೇನೆ ಎಂದಿರುವ ಸಿದ್ದರಾಮಯ್ಯ, “ಕೆಲವು ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣದ ಬಳಕೆದಾರರು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಂಡು ತಮ್ಮ ವಿರುದ್ಧ ಅಪಪ್ರಚಾರ ನಡೆಸುತ್ತಿರುವುದರಿಂದ ನ್ಯಾಯಾಲಯದ ಮೊರೆಹೋಗುವುದು ಅನಿವಾರ್ಯವಾಯಿತು” ಎಂದಿದ್ದಾರೆ.

ಮುಂದುವರೆದು, “ನನ್ನ ಐದು ದಶಕಗಳ ರಾಜಕೀಯ ಜೀವನ ತೆರೆದ ಪುಸ್ತಕದಂತಿದೆ. ಈ ಪ್ರಕರಣದಲ್ಲಿ ನಾನು ನಿರಪರಾಧಿ ಎಂಬುದು ತಮ್ಮ ಆತ್ಮಸಾಕ್ಷಿಗೆ ತಿಳಿದಿದೆ. ಆಧುನಿಕ ತಂತ್ರಜ್ಞಾನ ಬಳಸಿ ಸುಳ್ಳನ್ನೇ ಸತ್ಯವೆಂದು ಬಿಂಬಿಸುವುದು ಸುಲಭ. ಅಂತಿಮವಾಗಿ ಸತ್ಯವೇ ಗೆಲ್ಲುತ್ತದೆ” ಎಂದು ಆಶಾಭಾವ ವ್ಯಕ್ತಪಡಿಸಿದ್ದಾರೆ.

ಅವರ ಈ ಹೇಳಿಕೆಯನ್ನು ಮೂರು ನೆಲೆಗಳಲ್ಲಿ ಅರ್ಥಮಾಡಿಕೊಳ್ಳಬಹುದು: ಮೊದಲನೆಯದಾಗಿ, ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳನ್ನು ಅವರು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಎರಡನೆಯದಾಗಿ, ವಿವಾದಕ್ಕೆ ಸಂಬಂಧಿಸಿದ ತನಿಖೆ ನಡೆದರೆ ತಮ್ಮ ಮೇಲಿನ ಆರೋಪಗಳ ಸತ್ಯಾಸತ್ಯತೆ ಹೊರಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೂರನೆಯದಾಗಿ, ತಮ್ಮ ರಾಜಕೀಯ ಬದುಕು ಮತ್ತು ಸಾರ್ವಜನಿಕ ಪ್ರತಿಷ್ಠೆಯನ್ನು ರಕ್ಷಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ.

ನ್ಯಾಯಾಲಯದ ಮೊರೆಹೋಗುವುದರ ಜೊತೆಗೆ ಸಿದ್ದರಾಮಯ್ಯ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೂ ದೂರು ಸಲ್ಲಿಸಿದ್ದಾರೆ. ತಮ್ಮ ಹೆಸರಿನಲ್ಲಿ ಹರಡಲಾಗುತ್ತಿರುವ ವಿಡಿಯೋಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು, ಅವುಗಳ ಮೂಲವನ್ನು ಪತ್ತೆಹಚ್ಚಬೇಕು ಹಾಗೂ ಅಪಪ್ರಚಾರಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?

ಸಿದ್ದರಾಮಯ್ಯ ಅವರ ಪುತ್ರ, ಸಚಿವ ಯತೀಂದ್ರ ಸಿದ್ದರಾಮಯ್ಯ ಕೂಡ ವಿವಾದಕ್ಕೆ ಪ್ರತಿಕ್ರಿಯಿಸಿದ್ದಾರೆ. ತಮ್ಮ ತಂದೆಯ ವಿರುದ್ಧ ವ್ಯವಸ್ಥಿತವಾಗಿ ಸುಳ್ಳು ಪ್ರಚಾರ ನಡೆಸಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ದೃಶ್ಯಗಳು ವೇಗವಾಗಿ ಹರಡುವುದರಿಂದ ಅವುಗಳನ್ನು ನೋಡುವ ಜನರು ನಿಜವೆಂದು ನಂಬುವ ಅಪಾಯವಿದೆ. ಆದ್ದರಿಂದಲೇ ಸಿದ್ದರಾಮಯ್ಯ ಅವರು ತ್ವರಿತ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ ಎಂದು ವಿವರಿಸಿದ್ದಾರೆ.

ಸಿಬಿಐ ತನಿಖೆಗೆ ಕುಮಾರಸ್ವಾಮಿ ಒತ್ತಾಯಿಸಿದ್ದೇಕೆ?

ಆಶ್ಚರ್ಯಕರ ಸಂಗತಿ ಎಂದರೆ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆಯನ್ನು ತೊರೆಯುವವರೆಗೂ, ಅವರನ್ನು ಬದ್ಧವೈರಿಯಂತೆ ಕಾಣುತ್ತಿದ್ದ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ಈಗ ಸಿದ್ದರಾಮಯ್ಯ ಪರವಾಗಿ ಮಾತನಾಡಲಾರಂಭಿಸಿದ್ದಾರೆ.

“ಸಿದ್ದರಾಮಯ್ಯ ಅವರಂತಹ ಹಿರಿಯ ನಾಯಕ ನ್ಯಾಯಾಲಯದಿಂದ ರಕ್ಷಣೆ ಪಡೆಯಬೇಕಾದ ಪರಿಸ್ಥಿತಿ ಏಕೆ ನಿರ್ಮಾಣವಾಗಿದೆ. ರಾಜಕೀಯ ನಾಯಕರನ್ನು ಗುರಿಯಾಗಿಸಿಕೊಂಡು ಸ್ಟಿಂಗ್ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. ಇಂತಹ ಆರೋಪಗಳ ಕುರಿತು ಸಿಬಿಐ ತನಿಖೆ ನಡೆಯಬೇಕು” ಎಂದು ಆಗ್ರಹಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ ಬದಲಾದದ್ದು ಹೇಗೆ?

“ಕೆಲವು ರಾಜಕೀಯ ನಾಯಕರ ಚಟುವಟಿಕೆಗಳು ಮತ್ತು ಸಂಭಾಷಣೆಗಳನ್ನು ಗಮನಿಸಲು ವ್ಯವಸ್ಥೆಯೊಂದನ್ನು ಸ್ಥಾಪಿಸಲಾಗಿದೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆದ ನಂತರ ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳನ್ನು ಇಂತಹ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗಿದೆ” ಎಂದು ಆರೋಪಿಸಿರುವ ಕುಮಾರಸ್ವಾಮಿ, “ಡಿ.ಕೆ ಶಿವಕುಮಾರ್‌ ಅವರೇ ನೇರವಾಗಿ ದೂರವಾಣಿ ಕದ್ದಾಲಿಕೆಗೆ ಆದೇಶಿಸಿದ್ದಾರೆ ಎಂಬುದು ತಮ್ಮ ಆರೋಪವಲ್ಲ” ಎಂದೂ ಸ್ಪಷ್ಟನೆ ನೀಡಿದ್ದಾರೆ.

ತಮ್ಮ ಬಳಿ ಇರುವ ಮಾಹಿತಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಲ್ಲಿಸಿ ತನಿಖೆಗೆ ಒತ್ತಾಯಿಸುವುದಾಗಿಯೂ ಅವರು ಹೇಳಿದ್ದಾರೆ.

ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ಏನು?

ಕುಮಾರಸ್ವಾಮಿ ಅವರ ಆರೋಪಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಪ್ರತಿಕ್ರಿಯಿಸಿದ್ದಾರೆ. “ಆರೋಪಗಳಿಗೆ ಕಾಲವೇ ಉತ್ತರ ನೀಡಲಿದೆ. ಕುಮಾರಸ್ವಾಮಿ ತಮ್ಮ ಬಳಿ ದಾಖಲೆಗಳಿವೆ ಎನ್ನುತ್ತಿದ್ದಾರೆ. ಅವರ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಸಂಬಂಧಪಟ್ಟ ತನಿಖಾ ಸಂಸ್ಥೆಗಳಿಗೆ ಒದಗಿಸಲಿ” ಎಂದು ಸವಾಲು ಹಾಕಿದ್ದಾರೆ.

ಕಾಂಗ್ರೆಸ್‌ನ ಆಂತರಿಕ ರಾಜಕೀಯ ಮತ್ತು ಸ್ಟಿಂಗ್ ವಿವಾದದ ಸಂಬಂಧವೇನು?

ಈ ಸ್ಟಿಂಗ್‌ ಆಪರೇಷನ್ ವಿವಾದವನ್ನು ಕುಮಾರಸ್ವಾಮಿ ಅವರು ಸಿದ್ದರಾಮಯ್ಯರ ರಾಜೀನಾಮೆ ಮತ್ತು ಡಿ.ಕೆ. ಶಿವಕುಮಾರ್ ಅವರ ಅಧಿಕಾರ ಸ್ವೀಕಾರದೊಂದಿಗೆ ತಳುಕು ಹಾಕಿದ್ದಾರೆ. ಸಿದ್ದರಾಮಯ್ಯ ಅವರ ರಾಜೀನಾಮೆಯ ಹಿಂದೆ ಸ್ಟಿಂಗ್ ಕಾರ್ಯಾಚರಣೆ ಇತ್ತು ಎಂದು ಅವರು ಆರೋಪಿಸಿದ್ದಾರೆ.

ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಈ ವಿವಾದಕ್ಕೆ ಸಂಬಂಧಿಸಿದಂತೆ ಹಿಂದಿನ ಕೆಲವು ಸ್ಟಿಂಗ್ ಪ್ರಕರಣಗಳನ್ನು ಉಲ್ಲೇಖಿಸಿ, ಅವುಗಳ ಹಿಂದೆ ಒಂದೇ ರೀತಿಯ ವ್ಯವಸ್ಥೆ ಕೆಲಸ ಮಾಡಿರಬಹುದು ಎಂಬ ಆರೋಪ ಮಾಡಿದ್ದಾರೆ.

ಈ ಆರೋಪಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಒಳಗಿನ ನಾಯಕತ್ವ ಸಂಘರ್ಷ, ರಾಜಕೀಯ ಒತ್ತಡ ಹಾಗೂ ಸಾರ್ವಜನಿಕ ಪ್ರತಿಷ್ಠೆಯನ್ನು ಹಾಳುಮಾಡಲು ರಹಸ್ಯ ದೃಶ್ಯಗಳನ್ನು ಬಳಸುವ ಸಾಧ್ಯತೆಗಳ ಕುರಿತು ಚರ್ಚೆ ನಡೆಯುತ್ತಿದೆ.

ಸದ್ಯಕ್ಕೆ, ನಿಜವಾಗಿಯೂ ರಹಸ್ಯ ಕಾರ್ಯಾಚರಣೆ ನಡೆದಿತ್ತೇ? ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳ ಮೂಲವೇನು? ಅವುಗಳಲ್ಲಿ ತಾಂತ್ರಿಕ ತಿರುಚುವಿಕೆ ಇದೆಯೇ? ಸಿದ್ದರಾಮಯ್ಯ ಅವರ ರಾಜೀನಾಮೆಗೂ ವಿಡಿಯೋಗೂ ಸಂಬಂಧವಿದೆಯೇ? ರಾಜಕೀಯ ನಾಯಕರನ್ನು ಗುರಿಯಾಗಿಸಿಕೊಂಡು ಕಾನೂನುಬಾಹಿರ ಕಣ್ಗಾವಲು ನಡೆಸಲಾಗಿದೆಯೇ? – ಈ ಪ್ರಶ್ನೆಗಳಿಗೆ ತನಿಖೆಗಳಿಂದಲೇ ಉತ್ತರ ದೊರೆಯಬೇಕಿದೆ.

ಆದರೆ, ಸ್ಟಿಂಗ್‌ ಕಾರ್ಯಾಚರಣೆಯ ತನಿಖೆಗೆ ಎಸ್‌ಐಟಿ ರಚಿಸುವ ಪ್ರಸ್ತಾಪ ಸದ್ಯಕ್ಕಿಲ್ಲವೆಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಆದ್ದರಿಂದ, ಮುಂದಿನ ದಿನಗಳಲ್ಲಿ ಈ ಪ್ರಕರಣ ಯಾವ ರೀತಿ ತಿರುವು ಪಡೆದುಕೊಳ್ಳಲಿದೆ. ತನಿಖೆಗಳು ಹೇಗೆ ನಡೆಯಲಿವೆ ಎಂಬುದನ್ನು ಕಾದು ನೋಡಬೇಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಬಿ.ಎಲ್.ಡಿ.ಇ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ನೇಮಕಾತಿ

ತಾಂತ್ರಿಕ ಶಿಕ್ಷಣದೊಂದಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪ್ರಜಾತಾಂತ್ರಿಕ ಹಕ್ಕುಗಳ ಹರಣ: ಕೇಂದ್ರ ಬಿಜೆಪಿ ನಡೆಗೆ ಎಐಡಿಎಸ್‌ಒ ಆಕ್ಷೇಪ

ದೆಹಲಿ ಪೊಲೀಸರು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವುದನ್ನು ನಿರ್ಬಂಧ ಹೇರಿದ್ದಕ್ಕೆ ವಿಜಯನಗರ...