ಸ್ಟಿಂಗ್ ಪ್ರಕರಣದಲ್ಲಿ ಟ್ವಿಸ್ಟ್: ‘ಒತ್ತಡಕ್ಕೆ ಮಣಿದು ಸುಳ್ಳು ಹೇಳಿದ್ದೆ, ಸಿದ್ದರಾಮಯ್ಯರನ್ನ ಭೇಟಿಯೇ ಮಾಡಿಲ್ಲ’; ಮುಸುಕುಧಾರಿ ಮಹಿಳೆ ಹೇಳಿಕೆ

Date:

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್ ಆಪರೇಷನ್’ ಪ್ರಕರಣಕ್ಕೆ ಇದೀಗ ಬಹುದೊಡ್ಡ ಟ್ವಿಸ್ಟ್ ಸಿಕ್ಕಿದೆ. ವಿವಾದಿತ ವಿಡಿಯೋದಲ್ಲಿದ್ದ ಮುಸುಕುಧಾರಿ ಮಹಿಳೆಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ‘ನಾನು ಒತ್ತಡಕ್ಕೆ ಮಣಿದು ಸುಳ್ಳು ಹೇಳಿದ್ದೆ, ಸಿದ್ದರಾಮಯ್ಯರನ್ನ ಭೇಟಿಯೇ ಮಾಡಿಲ್ಲ’ ಎಂದು‌ ಆ ಮಹಿಳೆ ಹೇಳಿರುವುದಾಗಿ ವರದಿಯಾಗಿದೆ.

- Advertisement -

ವಿಡಿಯೋದಲ್ಲಿ ಕಂಡುಬಂದಿದ್ದ ಕೇರಳ ಮೂಲದ ಈ ಮಹಿಳೆಯ ಸ್ಥಳಕ್ಕೆ ಸಿಸಿಬಿ ಅಧಿಕಾರಿಗಳ ತಂಡವು ತೆರಳಿದ್ದು, ಆಕೆಯಿಂದ ವಿಡಿಯೋ ಹೇಳಿಕೆಯನ್ನು ದಾಖಲಿಸಿಕೊಂಡಿದೆ. ವೇಳೆ ಮಹಿಳೆಯು, “ನಾನು ಸಿದ್ದರಾಮಯ್ಯ ಅವರನ್ನು ಎಂದಿಗೂ ಭೇಟಿಯಾಗಿಯೇ ಇಲ್ಲ. ಸಿದ್ದರಾಮಯ್ಯ ನನಗಾಗಲಿ ಅಥವಾ ಪ್ರಕರಣಕ್ಕಾಗಲಿ ಯಾವುದೇ ರೀತಿಯ ತೊಂದರೆ ನೀಡಿಲ್ಲ. ಷಡ್ಯಂತ್ರದ ಹಿಂದಿದ್ದ ಸಂಚುಕೋರರ ತೀವ್ರ ಒತ್ತಡಕ್ಕೆ ಮಣಿದು ನಾನು ಸುಳ್ಳು ಹೇಳಿಕೆ ನೀಡಿದ್ದೆ. ಸಂಚುಕೋರರು ನನಗೆ ಹೇಗೆ ಹೇಳಿಕೊಟ್ಟಿದ್ದರೋ ಹಾಗೆಯೇ ನಾನು ಕ್ಯಾಮೆರಾ ಮುಂದೆ ಹೇಳಿದ್ದೇನೆ” ಎಂದು ತಪ್ಪೊಪ್ಪಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮುಂದುವರಿದು ಮಾತನಾಡಿದ ಆಕೆ, “2023ರಲ್ಲೇ ಸಿದ್ದರಾಮಯ್ಯ ಅವರ ರಾಜಕೀಯ ವರ್ಚಸ್ಸಿಗೆ ಕಳಂಕ ತರುವ ದುರುದ್ದೇಶದಿಂದಲೇ ಈ ಷಡ್ಯಂತ್ರ ಹೆಣೆಯಲಾಗಿತ್ತು. ಉದ್ದೇಶಪೂರ್ವಕವಾಗಿ ನನ್ನಿಂದ ಸುಳ್ಳು ಹೇಳಿಕೆಗಳನ್ನು ಕೊಡಿಸಲಾಗಿತ್ತು” ಎಂದು ವಿವರಿಸಿದ್ದಾರೆ.

Advertisements

ಸದ್ಯ ಮುಸುಕುಧಾರಿ ಮಹಿಳೆಯ ಈ ಮಹತ್ವದ ಹೇಳಿಕೆಯನ್ನು ಆಧರಿಸಿ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು, ಮುಂದಿನ ಒಂದೆರಡು ವಾರಗಳಲ್ಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಈ ಸ್ಟಿಂಗ್ ವಿವಾದವು ಕಾವು ಪಡೆದುಕೊಂಡಿರುವ ಬೆನ್ನಲ್ಲೇ, ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ. ನವೆಂಬರ್ 2 ರಂದು ಭೇಟಿಗೆ ಸಮಯ ಕೋರಿದ್ದು, ಈ ವೇಳೆ ರಾಜ್ಯ ರಾಜಕೀಯ ವಿದ್ಯಮಾನಗಳು ಮತ್ತು ತಮ್ಮ ವಿರುದ್ಧ ನಡೆದಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಷಡ್ಯಂತ್ರದ ಕುರಿತು ವಿಸ್ತೃತವಾಗಿ ಚರ್ಚಿಸಲಿದ್ದಾರೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ 11 ಜಿಲ್ಲೆಗಳಲ್ಲಿ ಇನ್ನೂ 7 ದಿನ ಭಾರೀ ಮಳೆ

ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದೆ. ಪರಿಣಾಮ ರಾಜ್ಯದ ಹವಾಮಾನದಲ್ಲಿ ದಿಢೀರ್...

ರಾಮಮಂದಿರ ಲೂಟಿ: ಕಳ್ಳರು, ಅಪರಾಧಿಗಳನ್ನು ಮೋದಿ, ಶಾ, ಯೋಗಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್ ಆರೋಪ

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭಕ್ತರು ನೀಡಿದ ಕಾಣಿಕೆ ಹಣ ಮತ್ತು ದಾನದ...

ಫ್ರಾನ್ಸ್‌ನಲ್ಲಿ ಭಾರೀ ಜನಾಕ್ರೋಶ: 4 ಲಕ್ಷಕ್ಕೂ ಹೆಚ್ಚು ಜನರ ಪ್ರತಿಭಟನೆ

ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರ ಆಡಳಿತಾವಧಿಯ ಕೊನೆಯ ಹಂತದಲ್ಲಿ ದೇಶಾದ್ಯಂತ...