ಆತ್ಮಹತ್ಯೆ ದರದಲ್ಲಿ ಸಿಲಿಕಾನ್ ಸಿಟಿಗೆ ಪ್ರಥಮ ಸ್ಥಾನ: ಕಳವಳಕಾರಿ ಮಾಹಿತಿ ಬಿಡುಗಡೆ ಮಾಡಿದ NCRB

Date:

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವು ಬೆಂಗಳೂರಿನ ನಾಗರಿಕರಲ್ಲಿ ಹೆಚ್ಚುತ್ತಿರುವ ಮಾನಸಿಕ ಒತ್ತಡ ಮತ್ತು ಆತ್ಮಹತ್ಯೆಯ ಪ್ರವೃತ್ತಿಯ ಬಗ್ಗೆ ಆತಂಕಕಾರಿ ಚಿತ್ರಣ ನೀಡಿದೆ. ದೇಶದ ಪ್ರಮುಖ ಮಹಾನಗರಗಳಿಗೆ ಹೋಲಿಸಿದರೆ, ಆತ್ಮಹತ್ಯೆ ಮಾಡಿಕೊಳ್ಳುವವರು ಬೆಂಗಳೂರಿನಲ್ಲೇ ಹೆಚ್ಚಿದ್ದಾರೆ. ಈ ಕುರಿತು ಮಾನಸಿಕ ಆರೋಗ್ಯ ತಜ್ಞರು ತೀವ್ರ ಕಳವಳ ವ್ಯಕ್ತಪಡಿಸುತ್ತಿದ್ದಾರೆ.

- Advertisement -

ಒಟ್ಟು ಆತ್ಮಹತ್ಯೆಗಳ ಸಂಖ್ಯೆಯಲ್ಲಿ ದೆಹಲಿ ಮೊದಲ ಸ್ಥಾನದಲ್ಲಿದ್ದರೆ, ಜನಸಂಖ್ಯೆಗೆ ಅನುಗುಣವಾಗಿ ಲೆಕ್ಕ ಹಾಕಿದಾಗ ಬೆಂಗಳೂರು ದೇಶದ ಎಲ್ಲಾ ಮಹಾನಗರಗಳಲ್ಲೇ ಮೊದಲ ಸ್ಥಾನದಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

2024ರ ದತ್ತಾಂಶದ ಪ್ರಕಾರ, 84.99 ಲಕ್ಷ ಜನಸಂಖ್ಯೆಯಲ್ಲಿ 2,403 ಆತ್ಮಹತ್ಯೆಗಳು ಸಂಭವಿಸಿದ್ದು, ಆತ್ಮಹತ್ಯೆ ದರ ಶೇ.28.3ರಷ್ಟಿದೆ. ದೆಹಲಿಯಲ್ಲಿ 163.15 ಲಕ್ಷ ಜನಸಂಖ್ಯೆಯಲ್ಲಿ 2,905 ಆತ್ಮಹತ್ಯೆಗಳು ದಾಖಲಾಗಿದ್ದು, ಆತ್ಮಹತ್ಯೆ ದರ ಶೇ.17.8 ರಷ್ಟಿದೆ. ತಜ್ಞರ ಪ್ರಕಾರ, ನಗರದ ಅತಿಯಾದ ವೇಗದ ಜೀವನಶೈಲಿ ಮತ್ತು ಕೆಲಸದ ವಾತಾವರಣವು ಜನರು ತಮ್ಮ ಮಾನಸಿಕ ಆರೋಗ್ಯದ ಕಡೆ ಗಮನ ಹರಿಸಲು ಸಮಯವನ್ನೇ ನೀಡುತ್ತಿಲ್ಲ.

“ಆರ್ಥಿಕ ಅನಿಶ್ಚಿತತೆ, ಕಠಿಣ ಕೆಲಸದ ಸಂಸ್ಕೃತಿ, ಹೆಚ್ಚುತ್ತಿರುವ ಜೀವನ ವೆಚ್ಚ, ಸಂಬಂಧಗಳಲ್ಲಿನ ಅಸ್ಥಿರತೆ ಮತ್ತು ಸಾಮಾಜಿಕ ಒಂಟಿತನಗಳು ಒಟ್ಟಾಗಿ ಜನರ ಮೇಲೆ ತೀವ್ರ ಒತ್ತಡ ಹೇರುತ್ತಿವೆ. ಹೊರನೋಟಕ್ಕೆ ಎಲ್ಲವೂ ಚೆನ್ನಾಗಿರುವಂತೆ ಕಂಡರೂ, ಒಳಗಿನಿಂದ ಜನರು ತೀವ್ರ ನೊಂದಿರುತ್ತಾರೆ” ಎಂದು ಹಿರಿಯ ಮನಶ್ಶಾಸ್ತ್ರಜ್ಞೆ ನೇಹಾ ಕದಬಂ ಹೇಳಿರುವುದಾಗಿ ವರದಿಯಾಗಿದೆ.

ರ್ಘಾವಧಿಯ ನಿರುದ್ಯೋಗ ಮತ್ತು ಉದ್ಯೋಗದ ಅಸುರಕ್ಷತೆ ಕೂಡ ತೀವ್ರ ಖಿನ್ನತೆಗೆ ಕಾರಣವಾಗುತ್ತಿದೆ. ಆರ್ಥಿಕ ಮುಗ್ಗಟ್ಟಿನ ಕಾರಣದಿಂದಾಗಿ ಜನರು ಆರಂಭದಲ್ಲೇ ವೃತ್ತಿಪರ ಮಾನಸಿಕ ಚಿಕಿತ್ಸೆ ಪಡೆಯಲು ಹಿಂಜರಿಯುತ್ತಿದ್ದು, ಪರಿಸ್ಥಿತಿ ಕೈಮೀರಿದಾಗ ಮಾತ್ರ ಆಸ್ಪತ್ರೆಗೆ ಬರುತ್ತಿದ್ದಾರೆ ಎಂದು ಕ್ಲಿನಿಕಲ್ ಸೈಕಾಲಜಿಸ್ಟ್ ಮೇಘಾ ಶಂಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 42 ರೂಪಾಯಿ ಏರಿಕೆ: ಬೆಂಗಳೂರಿನಲ್ಲಿ ದರವೆಷ್ಟು?

ಕೈಗಾರಿಕೆಗಳನ್ನು ಬೇರೆಡೆಗೆ ಸ್ಥಳಾಂತರಿಸುವುದರಿಂದ ಪರಿಸರದ ಮೇಲಿನ ಒತ್ತಡ ಕಡಿಮೆಯಾಗಬಹುದೇ ವಿನಃ, ಜನರ ಮಾನಸಿಕ ಆರೋಗ್ಯ ಸುಧಾರಿಸುವುದಿಲ್ಲ. ಆರ್ಥಿಕ ಅಭಿವೃದ್ಧಿಯ ಜೊತೆಗೆ ಮಾನಸಿಕ ಆರೋಗ್ಯ ಬೆಂಬಲ ವ್ಯವಸ್ಥೆಯನ್ನು ಬಲಪಡಿಸುವುದು ಅತ್ಯಗತ್ಯವಾಗಿದೆ.

ವಿ.ಸೂ.: ನಿಮಗೆ ಅಥವಾ ನಿಮ್ಮ ಆಪ್ತರಿಗೆ ಮಾನಸಿಕ ಬೆಂಬಲದ ಅಗತ್ಯವಿದ್ದರೆ ಅಥವಾ ಆತ್ಮಹತ್ಯೆಯ ಆಲೋಚನೆಗಳು ಬರುತ್ತಿದ್ದರೆ, ಸಹಾಯ ಪಡೆಯಲು ಹಿಂಜರಿಯಬೇಡಿ. ಸ್ನೇಹಾ ಫೌಂಡೇಶನ್ (Sneha Foundation): 044-24640050 ಅಥವಾ  ಟೆಲಿ ಮನಸ್ (Tele Manas – ಸರ್ಕಾರಿ ಉಚಿತ ಸಹಾಯವಾಣಿ): 14416ನ್ನು ಸಂಪರ್ಕಿಸಿ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...