SIR | ಕಾಗುಣಿತ ದೋಷಕ್ಕೆ ಭಾರತ ರತ್ನ ಪ್ರೊ. ಸಿ.ಎನ್.ಆರ್. ರಾವ್‌ಗೆ ಚುನಾವಣಾ ಆಯೋಗದ ನೋಟಿಸ್

Date:

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಕಾರ್ಯಕ್ರಮದಡಿ, ಕಾಗುಣಿತ ದೋಷದ ಹಿನ್ನೆಲೆಯಲ್ಲಿ ಭಾರತ ರತ್ನ ಪುರಸ್ಕೃತ, ಹಿರಿಯ ವಿಜ್ಞಾನಿ ಸಿ.ಎನ್.ಆರ್. ರಾವ್ (92) ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸುವಂತೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ.

- Advertisement -

ಹಳೆಯ ಮತದಾರರ ಪಟ್ಟಿಯಲ್ಲಿ ಅವರ ಹೆಸರನ್ನು “Prof CNR Rao” (ಪ್ರೊ. ಸಿ.ಎನ್.ಆರ್ ರಾವ್) ಎಂದು ನಮೂದಿಸಲಾಗಿತ್ತು. ಆದರೆ ಹೊಸ ಪಟ್ಟಿಯಲ್ಲಿ ಅವರ ವೃತ್ತಿಪರ ಬಿರುದಾದ ಪ್ರೊಫೆಸರ್ (Prof) ಪದಕ್ಕೆ ಹೆಚ್ಚುವರಿಯಾಗಿ ‘f’ ಅಕ್ಷರ ಸೇರ್ಪಡೆಯಾಗಿ “Proff CNR Rao” ಎಂದು ದಾಖಲಾಗಿದೆ. ಇದನ್ನು ಆಯೋಗವು “ಸ್ವಯಂ-ಹೊಂದಾಣಿಕೆಯಾಗದ ದೋಷ” (self-mismatch) ಎಂದು ವರ್ಗೀಕರಿಸಿದೆ. ಈ ತಾಂತ್ರಿಕ ದೋಷವನ್ನು ಸರಿಪಡಿಸಿ, ಗುರುತನ್ನು ದೃಢೀಕರಿಸುವಂತೆ ಆಯೋಗ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

2002ರ ಮತದಾರರ ಪಟ್ಟಿಯಲ್ಲಿರುವ ವ್ಯಕ್ತಿಯೊಬ್ಬರು ಪರಿಷ್ಕರಣೆ ವೇಳೆ ತಮ್ಮದೇ ವಿವರಗಳನ್ನು ಬಳಸಿದಾಗ ಅವು ತಾಳೆಯಾಗದಿದ್ದರೆ ಅದನ್ನು ‘ತಾರ್ಕಿಕ ದೋಷ’ (logical discrepancies) ಎಂದು ಪರಿಗಣಿಸಲಾಗುತ್ತದೆ. ಪೋಷಕರ ಹೆಸರಿನಲ್ಲಿ ವ್ಯತ್ಯಾಸ, ಪೋಷಕರು ಹಾಗೂ ಮಕ್ಕಳ ನಡುವಿನ ವಯಸ್ಸಿನ ಅಂತರ ತೀರಾ ಕಡಿಮೆಯಿರುವುದು ಮತ್ತು ಪೋಷಕರಿಗೆ ಆರಕ್ಕೂ ಹೆಚ್ಚು ಮಕ್ಕಳಿದ್ದರೆ, ಅಂತಹ ಪ್ರಕರಣಗಳನ್ನೂ ತಾರ್ಕಿಕ ದೋಷಗಳೆಂದೇ ಪರಿಗಣಿಸಲಾಗುತ್ತದೆ.

ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ರಾವ್ ಅವರಿಗೆ ಸೂಚಿಸಲಾಗಿದೆ. ಆದರೆ, ಮಾಧ್ಯಮಗಳು ಸಂಪರ್ಕಿಸುವವರೆಗೂ ಈ ನೋಟಿಸ್ ಬಗ್ಗೆ ರಾವ್ ಅವರ ಆಪ್ತರಿಗೂ ಯಾವುದೇ ಮಾಹಿತಿ ಇರಲಿಲ್ಲ ಎಂದು ವರದಿ ತಿಳಿಸಿದೆ. ಘನ-ಸ್ಥಿತಿ (ಸಾಲಿಡ್ ಸ್ಟೇಟ್) ಮತ್ತು ವಸ್ತು ರಸಾಯನಶಾಸ್ತ್ರ ಕ್ಷೇತ್ರಕ್ಕೆ ನೀಡಿದ ಅಪಾರ ಕೊಡುಗೆಗಾಗಿ ಸಿ.ಎನ್.ಆರ್. ರಾವ್ ಅವರಿಗೆ 2014ರಲ್ಲಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ ಒಲಿದಿತ್ತು.

ರಾಜ್ಯದಲ್ಲಿ 1 ಕೋಟಿಗೂ ಹೆಚ್ಚು ಮತದಾರರ ಕಡಿತ

ಮೂರನೇ ಹಂತದ ಎಸ್‌ಐಆರ್ (SIR) ಅಡಿಯಲ್ಲಿ ಆಗಸ್ಟ್ 24ರಂದು ಪ್ರಕಟವಾದ ಕರಡು ಮತದಾರರ ಪಟ್ಟಿಯಿಂದ ಕರ್ನಾಟಕದ ಒಂದು ಕೋಟಿಗೂ ಹೆಚ್ಚು ಮತದಾರರ ಹೆಸರನ್ನು ತೆಗೆದುಹಾಕಲಾಗಿದೆ. ಇದು ರಾಜ್ಯದ ಒಟ್ಟು ಮತದಾರರ ಶೇಕಡಾ 19.4ರಷ್ಟಾಗಿದೆ. ನಮೂನೆಗಳಲ್ಲಿ ದೋಷವಿರುವ ಅಥವಾ ಮ್ಯಾಪಿಂಗ್ ಆಗದ 43 ಲಕ್ಷ ಜನರಿಗೆ ನೋಟಿಸ್ ಕಳುಹಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿತ್ತು. ಕರಡು ಪಟ್ಟಿಯಿಂದ ಕೈಬಿಟ್ಟಿರುವ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ಅವಕಾಶ ಕಲ್ಪಿಸಲಾಗಿದೆ. ಅಕ್ಟೋಬರ್ 22ರೊಳಗೆ ಮೇಲ್ಮನವಿಗಳ ವಿಚಾರಣೆ ನಡೆಯಲಿದ್ದು, ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ.

ಮೂರನೇ ಹಂತದ ಎಸ್‌ಐಆರ್ (SIR) ಪ್ರಕ್ರಿಯೆ ನಡೆಯುತ್ತಿರುವ 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕರ್ನಾಟಕವೂ ಸೇರಿದೆ. 2025ರಲ್ಲಿ ಬಿಹಾರದಲ್ಲಿ ಮೊದಲ ಹಂತದ ಪರಿಷ್ಕರಣೆ ನಡೆದಿತ್ತು. ಬಳಿಕ 2025ರ ಅಂತ್ಯ ಹಾಗೂ 2026ರ ಮೊದಲಾರ್ಧದಲ್ಲಿ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎರಡನೇ ಹಂತದ ಪ್ರಕ್ರಿಯೆ ನಡೆಸಲಾಗಿತ್ತು. ಈ ಪರಿಷ್ಕರಣಾ ಪ್ರಕ್ರಿಯೆಯಿಂದ ನೈಜ ಮತದಾರರನ್ನು ಕೈಬಿಡುವ ಹಾಗೂ ಚುನಾವಣಾ ಫಲಿತಾಂಶದ ಮೇಲೆಯೇ ಪರಿಣಾಮ ಬೀರುವ ಆತಂಕವಿದೆ. ಈ ವರ್ಷದ ಮೇ ತಿಂಗಳಲ್ಲಿ ಈ ಪರಿಷ್ಕರಣೆ ಪ್ರಕ್ರಿಯೆಯ ಕಾನೂನುಬದ್ಧತೆಯನ್ನು ಎತ್ತಿಹಿಡಿದಿದ್ದ ಸುಪ್ರೀಂ ಕೋರ್ಟ್, “ಈ ಪ್ರಕ್ರಿಯೆಯ ಮೂಲಕ ಒಬ್ಬ ವ್ಯಕ್ತಿ ಭಾರತೀಯ ಪ್ರಜೆಯೇ ಅಥವಾ ಅಲ್ಲವೇ ಎಂಬುದನ್ನು ಚುನಾವಣಾ ಆಯೋಗ ನಿರ್ಧರಿಸುವಂತಿಲ್ಲ” ಎಂದು ಸ್ಪಷ್ಟಪಡಿಸಿತ್ತು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ಬೀದರ್‌ | 125 ಎಕರೆಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ : ಸಚಿವ ಈಶ್ವರ ಖಂಡ್ರೆ

ಬೀದರ್ ನಗರದ ಸಮೀಪ 125 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ...