SIR | ಬಿಎಲ್‌ಒ ಮನೆ ಭೇಟಿ, ಗಣತಿ ನಮೂನೆ ಸಲ್ಲಿಕೆ ಆಗಸ್ಟ್ 17ರವರೆಗೆ ವಿಸ್ತರಣೆ

Date:

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ‘ವಿಶೇಷ ಸಮಗ್ರ ಪರಿಷ್ಕರಣೆ (SIR)-2026’ ಪ್ರಕ್ರಿಯೆಗೆ ಸಂಬಂಧಿಸಿದಂತೆ, ಮತಗಟ್ಟೆ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಮನೆ-ಮನೆ ಭೇಟಿ ಹಾಗೂ ಗಣತಿ ನಮೂನೆ ಸಲ್ಲಿಕೆ ಕಾರ್ಯದ ಗಡುವನ್ನು ಆಗಸ್ಟ್‌ 17ರವರೆಗೆ ವಿಸ್ತರಿಸಿ ರಾಜ್ಯ ಚುನಾವಣಾ ಆಯೋಗ ಆದೇಶಿಸಿದೆ.

- Advertisement -

ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಈ ಪರಿಷ್ಕರಣಾ ಕಾರ್ಯದ ಪರಿಷ್ಕೃತ ವೇಳಾಪಟ್ಟಿಯನ್ನು ಇದೀಗ ಪ್ರಕಟಿಸಲಾಗಿದೆ. ಜೂನ್ 30ರಂದು ಆರಂಭವಾಗಿದ್ದ ಬಿಎಲ್‌ಒಗಳ ಮನೆ-ಮನೆ ಭೇಟಿ ಮತ್ತು ದಾಖಲೆ ಸಂಗ್ರಹಿಸುವ ಕಾರ್ಯಕ್ಕೆ ಈ ಮೊದಲು ಆಗಸ್ಟ್ 8ರವರೆಗೆ ಅವಕಾಶ ನೀಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಹೊಸ ವೇಳಾಪಟ್ಟಿಯಂತೆ, ಆಗಸ್ಟ್ 17ರಂದು ಮತಗಟ್ಟೆಗಳ ಮರುಜೋಡಣೆ ಮತ್ತು ತಾರ್ಕಿಕ ಮರುಹೊಂದಾಣಿಕೆ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ. ತದನಂತರ, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗುತ್ತದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

ಕರಡು ಪಟ್ಟಿ ಪ್ರಕಟಗೊಂಡ ಬಳಿಕ, ಮತದಾರರು ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ. ಸಲ್ಲಿಕೆಯಾಗುವ ಆಕ್ಷೇಪಣಾ ಅರ್ಜಿಗಳ ಪರಿಶೀಲನೆ ಹಾಗೂ ವಿಲೇವಾರಿ ಪ್ರಕ್ರಿಯೆಯು ಆಗಸ್ಟ್ 24ರಿಂದಲೇ ಆರಂಭವಾಗಿ ಅಕ್ಟೋಬರ್ 22ರವರೆಗೆ ನಡೆಯಲಿದೆ. ಅಂತಿಮವಾಗಿ, ಅಕ್ಟೋಬರ್ 27ರಂದು ಪರಿಷ್ಕೃತ ‘ಅಂತಿಮ ಮತದಾರರ ಪಟ್ಟಿ’ಯನ್ನು ಪ್ರಕಟಿಸಲಾಗುವುದು ಎಂದು ಆಯೋಗ ಸ್ಪಷ್ಟಪಡಿಸಿದೆ.

  1. ಬಿಎಲ್‌ಒಗಳಿಂದ ಮನೆ ಭೇಟಿ ಹಾಗೂ ಗಣತಿ ನಮೂನೆ ಸಲ್ಲಿಕೆ: 30.06.2026 ರಿಂದ 17.08.2026 ರವರೆಗೆ

| 2 | ಮತಗಟ್ಟೆಗಳ ತಾರ್ಕಿಕ ಮರುಹೊಂದಾಣಿಕೆ/ಮರುಜೋಡಣೆ: 17.08.2026

| 3 | ಕರಡು ಮತದಾರರ ಪಟ್ಟಿಯ ಪ್ರಕಟಣೆ: 24.08.2026

| 4 | ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ: 24.08.2026 ರಿಂದ 23.09.2026 ರವರೆಗೆ

| 5 | ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ಪ್ರಕ್ರಿಯೆ: 24.08.2026 ರಿಂದ 22.10.2026 ರವರೆಗೆ

| 6 | ಅಂತಿಮ ಮತದಾರರ ಪಟ್ಟಿಯ ಪ್ರಕಟಣೆ: 27.10.2026

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಸುಪ್ರೀಂ’ ನಲ್ಲಿ ವಂದೇ ಮಾತರಂ ವಿಚಾರಣೆ-  ಟಿ.ಎಂ.ಕೃಷ್ಣ ನಕ್ಸಲೈಟ್ ಎಂದು ಜರೆದ ಸಾಲಿಸಿಟರ್ ಜನರಲ್

ಮಂಗಳವಾರ ಸುಪ್ರೀಮ್ ಕೋರ್ಟಿನಲ್ಲಿ ವಿಚಾರಣೆಯ ಸಂದರ್ಭದಲ್ಲಿ ಸಾಲಿಸಿಟರ್ ಜನರಲ್  ತುಷಾರ್ ಮೆಹ್ತಾ...

‘ವಂದೇ ಮಾತರಂ’ ಹಾಡದಿದ್ದರೆ ಅಪರಾಧವಲ್ಲ, ಶಿಕ್ಷೆಯೂ ಇಲ್ಲ: ಸುಪ್ರೀಂ ಕೋರ್ಟ್

‘ವಂದೇ ಮಾತರಂ’ನ ಹಾಡುವುದು ಕಡ್ಡಾಯವಲ್ಲ. ಹಾಡದಿದ್ದ ಕಾರಣಕ್ಕೆ ಶಿಕ್ಷೆ ನೀಡಲಾಗುವುದಿಲ್ಲ ಎಂದು...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ: ಸೆ.22 ವಿಶ್ವ ಗುಲಾಬಿ ದಿನ

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ...

ಜಗತ್ತಿನಲ್ಲೇ ಮೊದಲು: ಹಂದಿ ಮೂತ್ರಪಿಂಡದಿಂದ 9 ತಿಂಗಳು ಜೀವಿಸಿದ ವ್ಯಕ್ತಿ

ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬೆಳವಣಿಗೆಯೊಂದು ನಡೆದಿದೆ. ತಳಿವಿಜ್ಞಾನದ (ಜೆನೆಟಿಕ್ಸ್‌) ಮೂಲಕ...