SIR | ಬಿಎಲ್ಒಗಳ ಮೇಲಿನ ಒತ್ತಡ ಕಡಿಮೆ ಮಾಡಲು ನಾಗರಿಕ ಮತ ಕಾವಲು ಸಮಿತಿ ಆಗ್ರಹ

Date:

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಸಾರ್ವಜನಿಕರಿಗೆ ಮಾತ್ರವಲ್ಲ, ಬೂತ್‌ ಮಟ್ಟದ ಅಧಿಕಾರಿಗಳ (ಬಿಎಲ್ಒ) ಮೇಲೂ ತೀವ್ರ ಸಂಕಷ್ಟವನ್ನು ಉಂಟುಮಾಡಿದೆ. ಬಿಎಲ್ಒಗಳ ಮೇಲಿನ ಒತ್ತಡ ಕಡಿಮೆ ಮಾಡಬೇಕು ಎಂದು ನಾಗರಿಕ ಮತ ಕಾವಲು ಸಮಿತಿ ಆಗ್ರಹಿಸಿದೆ.

- Advertisement -

ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ಸಮಿತಿ ಹೊರಡಿಸಿದೆ. “ರಾಜ್ಯದ ವಿವಿಧ ಭಾಗಗಳಿಂದ ಅವರ ಸಂಕಷ್ಟದ ಕುರಿತು ನಿರಂತರವಾಗಿ ಮಾಹಿತಿ ಮತ್ತು ಬೂತ್‌ ಮಟ್ಟದ ವರದಿಗಳು ನಾಗರಿಕ ಮತಕಾವಲು ಸಮಿತಿಗೆ ಲಭ್ಯವಾಗುತ್ತಿವೆ. ನಮಗೆ ಈಗಾಗಲೇ ಸಿಕ್ಕಿರುವ ಮಾಹಿತಿಯ ಪ್ರಕಾರ ನಾಲ್ಕಕ್ಕು ಹೆಚ್ಚು ಬಿಎಲ್ಒಗಳು ಪ್ರಾಣ ಕಳೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಬಹುತೇಕ ಬಿಎಲ್ಒಗಳು ತೀವ್ರ ಮಾನಸಿಕ ಒತ್ತಡದ ನಡುವೆಯೇ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಇದನ್ನೂ ಓದಿ: SIR | ಮತದಾರರ ಹಕ್ಕು ರಕ್ಷಣೆಗೆ ‘ನಾಗರಿಕ ಮತ ಕಾವಲು ಸಮಿತಿ’ ಅಸ್ತಿತ್ವಕ್ಕೆ: ಅಭಿಯಾನಕ್ಕೆ ಚಾಲನೆ

“ಎಸ್‌ಐಆರ್‌ ಅತ್ಯಂತ ವ್ಯಾಪಕವಾದ ಪ್ರಕ್ರಿಯೆಯಾಗಿದ್ದು, ಅಗತ್ಯ ಪೂರ್ವಸಿದ್ಧತೆ, ಸಮರ್ಪಕ ತರಬೇತಿ ಹಾಗೂ ಸೂಕ್ತ ಯೋಜನೆಯಿಲ್ಲದೆ ಆರಂಭಿಸಿರುವ ಪರಿಣಾಮ ಬಿಎಲ್ಒಗಳ ಮೇಲೆ ಅತಿಯಾದ ಒತ್ತಡ ಉಂಟಾಗಿದೆ. ಅಲ್ಲದೆ, ಸಾರ್ವಜನಿಕರು ಮತ್ತು ಬಿಎಲ್ಒಗಳ ನಡುವೆ ಅನಗತ್ಯ ವಾದ-ವಿವಾದ ಹಾಗೂ ಸಂಘರ್ಷಗಳಿಗೂ ಕಾರಣವಾಗುತ್ತಿದೆ. ಈ ಎಲ್ಲ ಒತ್ತಡಗಳು ಹಾಗೂ ಸಂಭವಿಸಿರುವ ಸಾವುಗಳಿಗೆ ಅವೈಜ್ಞಾನಿಕ ಪ್ರಕ್ರಿಯೆಯೆ ಕಾರಣ. ಈ ದುರಂತಕ್ಕೆ ಚುನಾವಣಾ ಆಯೋಗ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ನೈತಿಕ ಹೊಣೆಗಾರಿಕೆಯನ್ನು ಹೊತ್ತುಕೊಳ್ಳಬೇಕು” ಎಂದು ತಿಳಿಸಿದ್ದಾರೆ.

“ದೇಶಾದ್ಯಂತ ಎಸ್‌ಐಆರ್ ಪ್ರಕ್ರಿಯೆಯನ್ನು ಈ ರೀತಿಯಲ್ಲಿ ಜಾರಿಗೊಳಿಸಬಾರದು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದರೂ, ಚುನಾವಣಾ ಆಯೋಗ ಅದನ್ನು ಏಕಪಕ್ಷೀಯವಾಗಿ ಮುಂದುವರಿಸುತ್ತಿರುವುದು ವಿಷಾದನೀಯ. ಆದ್ದರಿಂದ, ಈಗಲಾದರೂ ಬಿಎಲ್ಒಗಳ ಸಂಕಷ್ಟವನ್ನು ನಿವಾರಿಸುವ ಉದ್ದೇಶದಿಂದ ಎಸ್‌ಐಆರ್‌ ಪ್ರಕ್ರಿಯೆಯ ಅವಧಿಯನ್ನು ಕನಿಷ್ಠ ಆರು ತಿಂಗಳವರೆಗೆ ವಿಸ್ತರಿಸಬೇಕು” ಎಂದು ಆಗ್ರಹಿಸಿದೆ.

“ಪ್ರಸ್ತುತ ನೀಡಲಾಗುತ್ತಿರುವ ವಾರ್ಷಿಕ 12,000 ರೂ. ಸಾಮಾನ್ಯ ಭತ್ಯೆಯು, ಈ ಹೆಚ್ಚುವರಿ ಜವಾಬ್ದಾರಿಗೆ ಯಾವುದೇ ರೀತಿಯಲ್ಲೂ ಸಮರ್ಪಕವಾಗಿಲ್ಲ. ಎಸ್‌ಐಆರ್‌ ವಿಶೇಷ ಕಾರ್ಯದಲ್ಲಿ ತೊಡಗಿರುವ ಎಲ್ಲ ಬಿಎಲ್ಒಗಳಿಗೆ ವಿಶೇಷ ಭತ್ಯೆಯನ್ನು ಮಂಜೂರು ಮಾಡಬೇಕು” ಎಂದು ಒತ್ತಾಯಿಸಿದೆ.

“ಅದೇ ಸಂದರ್ಭದಲ್ಲಿ, ಸಾರ್ವಜನಿಕರು ಬಿಎಲ್ಒಗಳೊಂದಿಗೆ ಸಂಯಮದಿಂದ ವರ್ತಿಸಿ, ಅವರು ಎದುರಿಸುತ್ತಿರುವ ಸಂಕಷ್ಟಗಳನ್ನು ಅರ್ಥಮಾಡಿಕೊಂಡು ಅಗತ್ಯ ಸಹಕಾರ ನೀಡಬೇಕು” ಎಂದೂ ನಾಗರಿಕ ಮತಕಾವಲು ಸಮಿತಿ ಮನವಿ ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಉದ್ಯೋಗಾರ್ಹತೆ ಹೆಚ್ಚಿಸಲು ಐಸಿಟಿ ಅಕಾಡೆಮಿ ತರಬೇತಿ ಸಹಕಾರಿ

ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ವೃತ್ತಿಪರ ಬೆಳವಣಿಗೆಗೆ ಇಂತಹ ಉದ್ಯೋಗ ಕೌಶಲ್ಯ ತರಬೇತಿ...

ಪಂಜಾಬ್ ಸಿಎಂ ಕಚೇರಿಗೆ ಭ್ರಷ್ಟಾಚಾರದ ನಂಟು: ಸಿಬಿಐ ಎಫ್‌ಐಆರ್ ತಡೆಗೆ ಸುಪ್ರೀಂ ಕೋರ್ಟ್ ನಕಾರ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ (ಒಎಸ್‌ಡಿ) ಬೆಸೆದುಕೊಂಡಿರುವ ಭ್ರಷ್ಟಾಚಾರ...

ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಎಸ್‌ಸಿ ಮೀಸಲಾತಿ ಕೈಬಿಟ್ಟಿದ್ದಕ್ಕೆ ಆಕ್ರೋಶ: ಅ.16ರಂದು ಹೋರಾಟದ ಎಚ್ಚರ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ...