SIR ವಿವಾದ | ಕೊಪ್ಪದಲ್ಲಿ 243 ಮತದಾರರ ಹೆಸರು ಡಿಲೀಟ್‌ಗೆ ನೀಡಿದ್ದ ಅರ್ಜಿ ಹಿಂಪಡೆದ ಬಿಜೆಪಿ ಮುಖಂಡ

Date:

ರಾಜ್ಯಾದ್ಯಂತ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಮತ್ತು ‘ಫಾರಂ-7’ ದುರ್ಬಳಕೆ ಕುರಿತು ದೊಡ್ಡ ಮಟ್ಟದ ರಾಜಕೀಯ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿರುವ ಬೆನ್ನಲ್ಲೇ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಮತದಾರರ ಹೆಸರು ಡಿಲೀಟ್‌ಗೆ ಸಲ್ಲಿಸಿದ ಅರ್ಜಿಯನ್ನು ಬಿಜೆಪಿ ಮುಖಂಡರೊಬ್ಬರು ಹಿಂಪಡೆದಿರುವ ಘಟನೆ ವರದಿಯಾಗಿದೆ.

- Advertisement -

ಕೊಪ್ಪ ತಾಲೂಕಿನಲ್ಲಿ ಒಟ್ಟು 243 ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಡಿಲೀಟ್ (ತೆಗೆದುಹಾಕುವಂತೆ) ಮಾಡುವಂತೆ ಕೋರಿ ಬಿಜೆಪಿ ಮುಖಂಡ ದಿನೇಶ್ ಎಂಬುವವರು ಚುನಾವಣಾ ಆಯೋಗಕ್ಕೆ ಫಾರಂ-7 ಮೂಲಕ ಅರ್ಜಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿ: SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಆದರೆ, ಪ್ರಸ್ತುತ ರಾಜ್ಯಾದ್ಯಂತ ಫಾರಂ-7 ದುರ್ಬಳಕೆ ಮಾಡಿಕೊಂಡು ಅರ್ಹ ಮತದಾರರ ಹೆಸರುಗಳನ್ನು ಕೈಬಿಡಲಾಗುತ್ತಿದೆ ಎಂದು ಆಡಳಿತಾರೂಢ ಕಾಂಗ್ರೆಸ್ ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಪೊಲೀಸರು ಪ್ರಕರಣಗಳನ್ನು ದಾಖಲಿಸಲು ಆರಂಭಿಸಿದ್ದಾರೆ. ಈ ಬೆಳವಣಿಗೆಗಳ ಬೆನ್ನಲ್ಲೇ, ಬಿಜೆಪಿ ಮುಖಂಡ ದಿನೇಶ್ ಅವರು ತಾವು 243 ಮತದಾರರ ಹೆಸರು ಡಿಲೀಟ್‌ಗೆ ಸಲ್ಲಿಸಿದ್ದ ಫಾರಂ-7 ಅರ್ಜಿಯನ್ನು ಅಧಿಕೃತವಾಗಿ ಹಿಂಪಡೆದಿದ್ದಾರೆ.

ರಾಜ್ಯದಲ್ಲಿ SIR ಪ್ರಕ್ರಿಯೆಯಡಿ ಸಾಮೂಹಿಕವಾಗಿ ಫಾರಂ-7 ಬಳಸಿ ಮತದಾರರ ಹೆಸರುಗಳನ್ನು ತೆಗೆದುಹಾಕಲು ಯತ್ನಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಾಯಕತ್ವದಲ್ಲಿ ಚುನಾವಣಾ ಆಯೋಗದ ಮುಂದೆ ಧರಣಿ ನಡೆಸಿತ್ತು. ಇದಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ಕೂಡ ದಾಖಲಾಗಿದೆ. ಈ ಕಾನೂನು ಕ್ರಮಗಳು ಹಾಗೂ ತೀವ್ರ ರಾಜಕೀಯ ಒತ್ತಡದ ಪರಿಣಾಮವಾಗಿ ಈ ಅರ್ಜಿ ಹಿಂಪಡೆಯಲಾಗಿದೆ ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಕಿಸ್ತಾನಿ ಜಾಲದ ಹನಿಟ್ರ್ಯಾಪ್‌ಗೆ ಬಿದ್ದ ಭಾರತೀಯ ನೌಕಾಪಡೆ ಸೈನಿಕನಿಂದ ಗೌಪ್ಯ ಮಾಹಿತಿ ಸೋರಿಕೆ; ಬಂಧನ

ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆಯ ಗುಪ್ತ ಮಾಹಿತಿಗಳನ್ನು ಸೋರಿಕೆ ಮಾಡುತ್ತಿದ್ದ ಭಾರತೀಯ ನೌಕಾಪಡೆಯ...

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಶರತ್ತುಗಳು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ತೆರೆಯುವುದಿಲ್ಲ: ಇರಾನ್ ಸ್ಪಷ್ಟನೆ

ತನ್ನ ಎಲ್ಲ ಶರತ್ತುಗಳು ಸಂಪೂರ್ಣವಾಗಿ ಈಡೇರುವವರೆಗೆ ಜಾಗತಿಕ ತೈಲ ಮತ್ತು ಅನಿಲ...