ಸಿಇಸಿ ಗ್ಯಾನೇಶ್ ಕುಮಾರ್ ವಜಾಗೆ ಪಟ್ಟು; ಸೆ.26ರಿಂದ ದೇಶಾದ್ಯಂತ ಪ್ರತಿಭಟನೆಗೆ ಎಡಪಕ್ಷಗಳು, SIR ವಿರೋಧಿ ಒಕ್ಕೂಟ ಕರೆ

Date:

ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ತ್ರೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ವಜಾ ಹಾಗೂ SIR ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕೆಂದು ಒತ್ತಾಯಿಸಿ ಸಿಪಿಐ(ಎಂ), ಸಿಪಿಐ, ಸಿಪಿಐ(ಎಂಎಲ್) ಸೇರಿದಂತೆ ಪ್ರಮುಖ ಎಡಪಕ್ಷಗಳು ಮತ್ತು ‘SIR ವಿರೋಧಿ ಒಕ್ಕೂಟ’ ಜಂಟಿಯಾಗಿ ಸೆಪ್ಟೆಂಬರ್ 26ರಿಂದ ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿವೆ.

- Advertisement -

ಸೆಪ್ಟೆಂಬರ್ 26ರಿಂದ ಆರಂಭವಾಗಲಿರುವ ಈ ದೇಶವ್ಯಾಪಿ ಸಪ್ತಾಹ ಪ್ರತಿಭಟನಾ ಆಂದೋಲನವು ಅಕ್ಟೋಬರ್ 2ರವರೆಗೆ ನಡೆಯಲಿದ್ದು, ಇದಕ್ಕೆ ಬಿಜೆಪಿ ಹೊರತಾದ ಎಲ್ಲಾ ಜಾತ್ಯತೀತ ಹಾಗೂ ಪ್ರಜಾಸತ್ತಾತ್ಮಕ ವಿರೋಧ ಪಕ್ಷಗಳು, ನಾಗರಿಕ ಸಮಾಜ ಸಂಘಟನೆಗಳು ಮತ್ತು ಸಾರ್ವಜನಿಕರು ಬೆಂಬಲ ನೀಡಬೇಕೆಂದು ನಾಯಕರು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್‌; ಸ್ವಾಗತಕ್ಕೆ ಖುದ್ದು...

ಬರೋಬ್ಬರಿ 11 ವರ್ಷಗಳ ಬಳಿಕ ಅಮೆರಿಕಕ್ಕೆ ಕಾಲಿಟ್ಟಿರುವ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರನ್ನು ಖುದ್ದು ತೆರಳಿ ಸ್ವಾಗತಿಸಿದ ಟ್ರಂಪ್‌, ಶ್ವೇತಭವನದಲ್ಲಿ ಅದ್ದೂರಿ ಸರ್ಕಾರಿ ಔತಣ ಆಯೋಜಿಸಿದ್ದಾರೆ. AI, ಅತ್ಯಾಧುನಿಕ ಚಿಪ್‌ಗಳು, ರೇರ್‌...

ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರ ಕೈಬಿಟ್ಟ...

ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುತ್ತಿರುವ ಅತ್ಯಂತ ಆಘಾತಕಾರಿ ಸತ್ಯವೊಂದು ಇದೀಗ ಬಯಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಈ ಗಂಭೀರವಾದ ವಿಷಯವನ್ನು...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಇದನ್ನೂ ಓದಿ: ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ 24 ಗಂಟೆಗಳ ಗಡುವು; ಇಲ್ಲದಿದ್ದರೆ ಗಾಂಧಿ ಜಯಂತಿಯಂದು ರಾಷ್ಟ್ರವ್ಯಾಪಿ ಪ್ರತಿಭಟನೆ

ಮತದಾರರ ಪಟ್ಟಿಯ ಕೇಂದ್ರೀಕರಣ, ಮತದಾರರ ಹೆಸರುಗಳನ್ನು ಅನಗತ್ಯವಾಗಿ ಕೈಬಿಟ್ಟಿರುವುದು ಹಾಗೂ ಆಯೋಗದ ಆಂತರಿಕ ನಿರ್ಧಾರಗಳಲ್ಲಿ ಪಾರದರ್ಶಕತೆಯ ಕೊರತೆ ಎದುರಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಪ್ರತಿಭಟನಾ ಸಭೆಗಳನ್ನು ಹಮ್ಮಿಕೊಳ್ಳಲಾಗಿದೆ.

“ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು. ಪ್ರಸ್ತುತ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣವೇ ತಡೆಹಿಡಿಯಬೇಕು ಹಾಗೂ ರದ್ದುಗೊಳಿಸಬೇಕು. ಪಟ್ಟಿಯಿಂದ ಅಕ್ರಮವಾಗಿ ಹೆಸರು ಬಿಟ್ಟುಹೋಗಿರುವ ಎಲ್ಲ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಮರುಸ್ಥಾಪಿಸಬೇಕು. ಚುನಾವಣಾ ಆಯುಕ್ತರ ನೇಮಕಾತಿಯಲ್ಲಿ ನ್ಯಾಯಸಮ್ಮತ ಮತ್ತು ಸ್ವಾಯತ್ತ ವ್ಯವಸ್ಥೆಯನ್ನು ತರಲು ಕ್ರಮ ಕೈಗೊಳ್ಳಬೇಕು” ಎಂದು ಎಡಪಕ್ಷಗಳು ಆಗ್ರಹಿಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾಂದಲೆ ನಡೆಯುವ ಚುನಾವಣೆಗಳನ್ನು ಬಹಿಷ್ಕರಿಸಿ: ವಿಪಕ್ಷಗಳಿಗೆ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಕರೆ

ದೇಶದ ವಿರೋಧ ಪಕ್ಷಗಳಿಗೆ 'ಅಕ್ರಮ/ಧಾಂದಲೆ ನಡೆಯುತ್ತಿರುವ' ಚುನಾವಣೆಗಳಲ್ಲಿ ಭಾಗವಹಿಸುವುದನ್ನು ತಕ್ಷಣವೇ ನಿಲ್ಲಿಸುವಂತೆ...

OBC ಕೆನೆಪದರ ನೀತಿ ರೂಪಿಸಲು ಕಾಲಾವಕಾಶ ಕೇಳಿದ ಕೇಂದ್ರ; ತೀರ್ಪು ಕಾಯ್ದಿರಿಸಿ ಸುಪ್ರೀಂ

OBC ಕ್ರೀಮಿ ಲೇಯರ್‌ ನಿರ್ಧಾರಕ್ಕೆ ಸಂಬಂಧಿಸಿದಂತೆ ಮಾರ್ಚ್‌ 11ರಂದು ನೀಡಿದ್ದ ತೀರ್ಪನ್ನು...

ಮೀಸಲಾತಿ ದೇಶಕ್ಕೆ ಅತ್ಯಗತ್ಯ, ಅದು ಮುಂದುವರಿಯಲೇಬೇಕು: ಎಬಿವಿಪಿ ಪ್ರಧಾನ ಕಾರ್ಯದರ್ಶಿ ಡಾ. ವೀರೇಂದ್ರ ಸಿಂಗ್ ಸೋಲಂಕಿ

ಸಂವಿಧಾನ ಒದಗಿಸಿರುವ ಮೀಸಲಾತಿ ವ್ಯವಸ್ಥೆಯು ಭಾರತದಂತಹ ದೇಶಕ್ಕೆ ಅತ್ಯಗತ್ಯವಾಗಿದ್ದು, ಅದು ಖಂಡಿತವಾಗಿಯೂ...

ಗುಳೇದಗುಡ್ಡ | ಎರಡು ತಿಂಗಳಿಂದ 108 ಆಂಬುಲೆನ್ಸ್ ಸೇವೆ ಸ್ಥಗಿತ

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕು ಕೇಂದ್ರವಾಗಿರುವ ಗುಳೇದಗುಡ್ಡದಲ್ಲಿ ತುರ್ತು ಚಿಕಿತ್ಸೆಗೆ ಪ್ರಮುಖ...