SIR ಕರಡು ಪಟ್ಟಿ ಪ್ರಕಟ; ನಿಮ್ಮ ಹೆಸರಿದೆಯೇ ಚೆಕ್‌ ಮಾಡಿಕೊಳ್ಳಿ…

Date:

ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಕರಡು ಮತದಾರರ ಪಟ್ಟಿ ಇಂದು (ಆ.24) ಪ್ರಕಟವಾಗಿದೆ. ಮತದಾರರು ತಮ್ಮ ಹೆಸರು ಕರಡು ಪಟ್ಟಿಯಲ್ಲಿದೆಯೇ, ತಮ್ಮ ಮತದಾರರ ವಿವರಗಳು ಸರಿಯಾಗಿವೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಬಹುದಾಗಿದೆ. ಕರಡು ಪಟ್ಟಿ ಪ್ರಕಟವಾದ ಬಳಿಕ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಸೆ.23ರವರೆಗೆ ಅವಕಾಶವಿದೆ. ಅಂತಿಮ ಮತದಾರರ ಪಟ್ಟಿಯನ್ನು ಅ.27ರಂದು ಪ್ರಕಟಿಸಲು ವೇಳಾಪಟ್ಟಿ ನಿಗದಿಯಾಗಿದೆ.

- Advertisement -

ರಾಜ್ಯದಲ್ಲಿ SIR ಆರಂಭವಾದ ಸಂದರ್ಭದಲ್ಲಿ ಒಟ್ಟು 5,54,32,314 ಮತದಾರರು ಇದ್ದರು. ಈ ಪೈಕಿ 4,46,35,899 ಮತದಾರರ ಮಾಹಿತಿಯನ್ನು ಡಿಜಿಟೈಸ್‌ ಮಾಡಲಾಗಿದ್ದು, 1,07,96,415 ಮಂದಿಯನ್ನು ASDDO ವರ್ಗದಲ್ಲಿ ಗುರುತಿಸಲಾಗಿದೆ. ಈ ವರ್ಗದ ಮತದಾರರ ಹೆಸರುಗಳನ್ನು ಕರಡು ಪಟ್ಟಿಯಿಂದ ಕೈಬಿಟ್ಟಿರುವ ಸಾಧ್ಯತೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

SIR ವೇಳೆ 2002ರ ಮತದಾರರ ಪಟ್ಟಿಯೊಂದಿಗೆ ವಿವರಗಳನ್ನು ಮ್ಯಾಪ್‌ ಮಾಡಲು ಸಾಧ್ಯವಾಗದ ಹಾಗೂ ಮತದಾರರ ಮಾಹಿತಿಯಲ್ಲಿ ವ್ಯತ್ಯಾಸ ಕಂಡುಬಂದ ಪ್ರಕರಣಗಳನ್ನು ಪ್ರತ್ಯೇಕವಾಗಿ ಗುರುತಿಸಲಾಗಿದೆ. ಒಟ್ಟು 43,80,740 ಮತದಾರರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆದಿದ್ದು, ಈ ಪೈಕಿ 20,35,312 ಮಂದಿ ‘ಅನಮಾಲೀಸ್‌’ ಹಾಗೂ 23,45,428 ಮಂದಿ ‘ನೋ ಮ್ಯಾಪಿಂಗ್‌’ ವರ್ಗದಲ್ಲಿದ್ದಾರೆ. ಬೆಂಗಳೂರಿನ ವ್ಯಾಪ್ತಿಯಲ್ಲೇ ಸುಮಾರು 24,05,990 ಮಂದಿಗೆ ನೋಟಿಸ್‌ ನೀಡಲಾಗುತ್ತದೆ.

‘ನೋ ಮ್ಯಾಪಿಂಗ್‌’ ಎಂದರೆ ಮತದಾರರ ಅಥವಾ ಅವರ ಪೋಷಕರ ವಿವರಗಳನ್ನು ಹಿಂದಿನ ಮತದಾರರ ಪಟ್ಟಿಯೊಂದಿಗೆ ಜೋಡಿಸಲು ಸಾಧ್ಯವಾಗದ ಪ್ರಕರಣಗಳು. ‘ಅನಮಾಲೀಸ್‌’ ಎಂದರೆ ಹೆಸರು, ವಯಸ್ಸು ಅಥವಾ ಇತರ ಮತದಾರರ ವಿವರಗಳಲ್ಲಿ ತಾರ್ಕಿಕ ವ್ಯತ್ಯಾಸ ಕಂಡುಬಂದ ಪ್ರಕರಣಗಳು.

SIRನ ಪ್ರಸ್ತುತ ಲೆಕ್ಕಾಚಾರದ ಪ್ರಕಾರ ಸುಮಾರು 1.07 ಕೋಟಿ ಮತದಾರರ ಹೆಸರುಗಳು ಕರಡು ಪಟ್ಟಿಯಲ್ಲಿ ಕಾಣಿಸದಿರುವ ಸಾಧ್ಯತೆ ಇದೆ. ಆದರೆ ಕರಡು ಪಟ್ಟಿಯಲ್ಲಿ ಹೆಸರು ಇಲ್ಲದಿರುವುದರಿಂದ ಅವರ ಮತದಾನದ ಹಕ್ಕು ಅಂತಿಮವಾಗಿ ರದ್ದಾಗಿದೆ ಎಂದರ್ಥವಲ್ಲ. ಅರ್ಹ ಮತದಾರರು ನಿಗದಿತ ಪ್ರಕ್ರಿಯೆಯ ಮೂಲಕ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ಉಡುಪಿ | SIR ಕರಡು ಮತದಾರರ ಪಟ್ಟಿ ಆಗಸ್ಟ್ 24 ರಂದು ಪ್ರಕಟ : ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಕರಡು ಪಟ್ಟಿಯನ್ನು ಇಲ್ಲಿ ಪರಿಶೀಲಿಸಿ

ಚುನಾವಣಾ ಆಯೋಗದ ಅಧಿಕೃತ Voters’ Services Portalನಲ್ಲಿ ಕರ್ನಾಟಕದ SIR ಕರಡು ಮತದಾರರ ಪಟ್ಟಿಯನ್ನು ಡೌನ್‌ಲೋಡ್‌ ಮಾಡಬಹುದು. SIR ಕರಡು ಮತದಾರರ ಪಟ್ಟಿ

ವೆಬ್‌ಸೈಟ್‌ಗೆ ತೆರಳಿ ಕರ್ನಾಟಕ ರಾಜ್ಯವನ್ನು ಆಯ್ಕೆ ಮಾಡಿ, ಬಳಿಕ ಜಿಲ್ಲೆ, ವಿಧಾನಸಭಾ ಕ್ಷೇತ್ರ ಹಾಗೂ ಬೂತ್‌ ಸಂಖ್ಯೆಯನ್ನು ಆಯ್ಕೆ ಮಾಡಬೇಕು. ಕ್ಯಾಪ್ಚಾ ಕೋಡ್‌ ನಮೂದಿಸಿದ ಬಳಿಕ ಸಂಬಂಧಪಟ್ಟ ಬೂತ್‌ನ ಮತದಾರರ ಪಟ್ಟಿಯ PDF ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಮತದಾರರು PDFನಲ್ಲಿ ತಮ್ಮ ಹೆಸರು, ವಿಳಾಸ ಸೇರಿದಂತೆ ವಿವರಗಳನ್ನು ಪರಿಶೀಲಿಸಿಕೊಳ್ಳುವುದು ಮುಖ್ಯವಾಗಿದೆ. ಹೆಸರು ಇಲ್ಲದಿದ್ದರೆ ಅಥವಾ ವಿವರಗಳಲ್ಲಿ ತಪ್ಪು ಕಂಡುಬಂದರೆ, ನಿಗದಿತ ಅವಧಿಯಲ್ಲಿ ಹಕ್ಕು ಅಥವಾ ಆಕ್ಷೇಪಣೆ ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು

  • ಆಗಸ್ಟ್‌ 24: SIR ಕರಡು ಮತದಾರರ ಪಟ್ಟಿ ಪ್ರಕಟ
  • ಆಗಸ್ಟ್‌ 24–ಸೆಪ್ಟೆಂಬರ್‌ 23: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆ
  • ಅಕ್ಟೋಬರ್‌ 22: ನೋಟಿಸ್‌ ಪ್ರಕ್ರಿಯೆ ಹಾಗೂ ಹಕ್ಕು-ಆಕ್ಷೇಪಣೆಗಳ ವಿಲೇವಾರಿ ಅಂತ್ಯ
  • ಅಕ್ಟೋಬರ್‌ 27: ಅಂತಿಮ ಮತದಾರರ ಪಟ್ಟಿ ಪ್ರಕಟ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಪ್ರಜಾಪ್ರಭುತ್ವದ ಕರಾಳ ದಿನ: ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಯ ಸಂಕಲ್ಪದೊಂದಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ ಗ್ರಾಮಸ್ಥರು

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು...

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು ಸಾಧ್ಯವಲ್ಲವೇ?

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ...