SIR | ಮತಪಟ್ಟಿಯಿಂದ ಎಷ್ಟು ಹೆಸರು ರದ್ದು? ಸ್ಪಷ್ಟ ವರದಿ ನೀಡುವಂತೆ ಚು. ಆಯೋಗಕ್ಕೆ ಜಾಗೃತ ಕರ್ನಾಟಕ ಆಗ್ರಹ

Date:

ರಾಜ್ಯದಲ್ಲಿ ಕರಡು ಮತದಾರರ ಪಟ್ಟಿ ಬಿಡುಗಡೆಯಾದ ಬಳಿಕ, ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮತ್ತು ವಿಚಾರಣೆಗಳು ನಡೆದ ನಂತರ, ಅಂತಿಮವಾಗಿ ಎಷ್ಟು ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗುತ್ತದೆ ಎಂಬುದನ್ನು ಸಾರ್ವಜನಿಕವಾಗಿ ಪ್ರಕಟಿಸುವಂತೆ ಚುನಾವಣಾ ಆಯೋಗವನ್ನು ‘ಜಾಗೃತ ಕರ್ನಾಟಕ’ ಆಗ್ರಹಿಸಿದೆ.

- Advertisement -

ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯು ಇತ್ತೀಚೆಗೆ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯ ಅಂಕಿಅಂಶಗಳನ್ನು ಉಲ್ಲೇಖಿಸಿ ಜಾಗೃತ ಕರ್ನಾಟಕ ಸಂಘಟನೆ ಪತ್ರಿಕಾ ಹೇಳಿಕೆ ನೀಡಿದೆ. ಎಸ್‌ಐಆರ್‌ನ ಎಲ್ಲ ಹಂತದ ಪ್ರಕ್ರಿಯೆಯ್ಲಿನ ಪಾರದರ್ಶಕತೆಯನ್ನು ಪ್ರಶ್ನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಆಯೋಗದ ಪ್ರಕಟಣೆಯ ಪ್ರಕಾರ, ರಾಜ್ಯಾದ್ಯಂತ ಒಟ್ಟು 43.81 ಲಕ್ಷಕ್ಕೂ ಅಧಿಕ ನೋಟಿಸ್‌ಗಳನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 34.96 ಲಕ್ಷಕ್ಕೂ ಹೆಚ್ಚು ನೋಟಿಸ್‌ಗಳನ್ನು ಸಾರ್ವಜನಿಕರಿಗೆ ವಿತರಿಸಲಾಗಿದ್ದು, ಇನ್ನೂ 8.85 ಲಕ್ಷಕ್ಕೂ ಅಧಿಕ ನೋಟಿಸ್‌ಗಳ ವಿತರಣೆ ಬಾಕಿ ಉಳಿದಿದೆ. ವಿತರಿಸಲಾದ ನೋಟಿಸ್‌ಗಳ ಪೈಕಿ 17.63 ಲಕ್ಷಕ್ಕೂ ಹೆಚ್ಚು ಪ್ರಕರಣಗಳಲ್ಲಿ (50.43%) ವಿಚಾರಣೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇನ್ನು 17.33 ಲಕ್ಷಕ್ಕೂ ಅಧಿಕ ಪ್ರಕರಣಗಳ ವಿಚಾರಣೆ ಬಾಕಿಯಿದೆ.

ಈ ಹಿನ್ನೆಲೆಯಲ್ಲಿ ಜಾಗೃತ ಕರ್ನಾಟಕವು ಚುನಾವಣಾ ಆಯೋಗದ ಮುಂದೆ ಪ್ರಮುಖ ಪ್ರಶ್ನೆಯನ್ನು ಮುಂದಿಟ್ಟಿದೆ. “ಕೇವಲ ನೋಟಿಸ್ ಜಾರಿ ಮಾಡಲಾಗಿದೆ ಅಥವಾ ವಿಚಾರಣೆ ನಡೆಸಲಾಗಿದೆ ಎಂಬ ಮಾಹಿತಿಯನ್ನು ಪ್ರಕಟಿಸುವುದರಿಂದ ಸಾರ್ವಜನಿಕರಿಗೆ ಪ್ರಕ್ರಿಯೆಯ ನೈಜ ಚಿತ್ರಣ ಸಿಗುವುದಿಲ್ಲ. ವಿಚಾರಣೆ ಪೂರ್ಣಗೊಂಡಿರುವ 17.63 ಲಕ್ಷಕ್ಕೂ ಹೆಚ್ಚು ಪ್ರಕರಣಗಳಲ್ಲಿ ಅಂತಿಮವಾಗಿ ಎಷ್ಟು ಮತದಾರರ ಹೆಸರುಗಳನ್ನು ಪಟ್ಟಿಯಿಂದ ಹೊರಹಾಕಲಾಗಿದೆ. ಎಷ್ಟು ಹೆಸರುಗಳನ್ನು ಮುಂದುವರೆಸಲಾಗುತ್ತದೆ ಹಾಗೂ ಸೂಕ್ತ ದಾಖಲೆಗಳನ್ನು ಸ್ವೀಕರಿಸಿ ಎಷ್ಟು ಜನರ ಮತದಾನದ ಹಕ್ಕನ್ನು ಉಳಿಸಲಾಗಿದೆ ಎಂಬ ಅಂತಿಮ ಫಲಿತಾಂಶದ ಮಾಹಿತಿ ಅತ್ಯಂತ ಅಗತ್ಯ” ಎಂದು ಹೇಳಿದೆ.

ಈ ಲೇಖನ ಓದಿದ್ದೀರಾ?: ಎಐ ಯುಗದಲ್ಲಿ ನಿಜವಾದ ಬರಹಕ್ಕೆ ಎಲ್ಲಿದೆ ಸ್ಥಾನ?

“ಚುನಾವಣಾ ಆಯೋಗವು ಕೇವಲ ಒಟ್ಟಾರೆ ಸಂಖ್ಯೆಯನ್ನು ನೀಡದೆ ಜಿಲ್ಲಾವಾರು ಮತ್ತು ವಿಧಾನಸಭಾ ಕ್ಷೇತ್ರವಾರು ವಿವರವಾದ ಅಂಕಿಅಂಶಗಳನ್ನು ಪ್ರಕಟಿಸಬೇಕು. ವಿಚಾರಣೆ ಪೂರ್ಣಗೊಂಡು ಹೆಸರು ಕೈಬಿಡುವ ನಿರ್ಧಾರ ಕೈಗೊಂಡಿದ್ದರೆ, ಅದಕ್ಕೆ ನೀಡಲಾದ ಕಾರಣಗಳ ವರ್ಗೀಕರಣ, ಪಟ್ಟಿಯಲ್ಲಿ ಮುಂದುವರಿಸಲಾದ ಮತದಾರರ ಸಂಖ್ಯೆ ಹಾಗೂ ಬಾಕಿ ಇರುವ ಪ್ರಕರಣಗಳ ಸ್ಪಷ್ಟ ಮಾಹಿತಿಯನ್ನು ಸಾರ್ವಜನಿಕರ ಮುಂದಿಡಬೇಕು” ಎಂದು ಸಂಘಟನೆ ಒತ್ತಾಯಿಸಿದೆ.

“ಆಯೋಗ ತಿಳಿಸಿರುವ ವೇಳಾಪಟ್ಟಿಯಂತೆ ಕೊನೆಯ ವಿಚಾರಣೆಯು ಅಕ್ಟೋಬರ್ 12 ರಂದು ನಡೆಯಲಿದ್ದು, ಹಕ್ಕು ಮತ್ತು ಆಕ್ಷೇಪಣೆಗಳು ಹಾಗೂ ನೋಟಿಸ್ ಹಂತದ ಪ್ರಕರಣಗಳ ವಿಲೇವಾರಿಗೆ ಅಕ್ಟೋಬರ್ 22 ಅಂತಿಮ ದಿನಾಂಕವಾಗಿದೆ. ಮತದಾರರ ಪಟ್ಟಿಯಲ್ಲಿನ ಪ್ರತಿಯೊಂದು ಹೆಸರೂ ಸಹ ದೇಶದ ಪ್ರಜೆಯ ಮೂಲಭೂತ ಮತದಾನದ ಹಕ್ಕಿಗೆ ಸಂಬಂಧಿಸಿದ್ದಾಗಿದೆ. ಆದ್ದರಿಂದ ಈ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಕಾಯದೆ, ಪ್ರತಿ ಹಂತದಲ್ಲೂ ಪಾರದರ್ಶಕವಾದ ವಿವರಗಳನ್ನು ಸಾರ್ವಜನಿಕರಿಗೆ ನಿಯಮಿತವಾಗಿ ನೀಡಬೇಕು” ಎಂದು ಜಾಗೃತ ಕರ್ನಾಟಕ ಆಗ್ರಹಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು ಬಲ್ಲಿರಾ?

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು,...

ಬಿಆರ್‌ಎಸ್ ಶಾಸಕ ಅನರ್ಹ; ಸ್ಪೀಕರ್ ಆದೇಶ ರದ್ದುಗೊಳಿಸಿದ ತೆಲಂಗಾಣ ಹೈಕೋರ್ಟ್

ಬಿಆರ್‌ಎಸ್ (BRS) ಟಿಕೆಟ್‌ನಡಿ 2023ರ ವಿಧಾನಸಭಾ ಚುನಾವಣೆಯಲ್ಲಿ ಖೈರತಾಬಾದ್ ಕ್ಷೇತ್ರದಿಂದ ಗೆದ್ದು,...

ತಿಂಗಳೊಳಗೆ ಜಾರಿಯಾಗಲಿದೆ ಭಾರತ–ನ್ಯೂಜಿಲೆಂಡ್ FTA: ಏನಿದು ‘ಫ್ರೀ ಟ್ರೇಡ್ ಅಗ್ರಿಮೆಂಟ್‌’?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ‘ಮುಕ್ತ ವ್ಯಾಪಾರ ಒಪ್ಪಂದ’ (Free Trade...

ಬಸವನ ಬಾಗೇವಾಡಿ | ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಪತ್ರ ಚಳವಳಿ

ಶಾಸನಬದ್ಧವಾಗಿ ನಿಗದಿಪಡಿಸಿರುವ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ...