SIR | ಜೂ.30ರಂದು ಬಹಿರಂಗ ಚರ್ಚೆಗಾಗಿ BJPಗೆ ‘ಜಾಗೃತ ಕರ್ನಾಟಕ’ ಪಂಥಾಹ್ವಾನ

Date:

ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (ಎಸ್‌ಐಆರ್‌) ದೇಶದ ಬಡವರು, ದಲಿತರು, ಮಹಿಳೆಯರು ಹಾಗೂ ಅಲ್ಪಸಂಖ್ಯಾತರ ಮತದಾನದ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂಬ ಗಂಭೀರ ಆರೋಪಗಳಿವೆ. ಅದಕ್ಕೆ ಪೂರಕವಾಗಿ, ಈವರೆಗೆ ಎಸ್‌ಐಆರ್‌ ನಡೆದಿರುವ ರಾಜ್ಯಗಳಲ್ಲಿ ಬರೋಬ್ಬರಿ 6.5 ಕೋಟಿ ಮತದಾರರನ್ನು ಮತಪಟ್ಟಿಯಿಂದ ಚುನಾವಣಾ ಆಯೋಗ ಹೊರಹಾಕಿದೆ. ಆದರೂ, ಎಸ್‌ಐಆರ್‌ಅನ್ನು ಬಿಜೆಪಿ ಸಮರ್ಥಿಸಿಕೊಳ್ಳುತ್ತಿದೆ. ಆದ್ದರಿಂದ, ಎಸ್‌ಐಆರ್‌ ಕುರಿತ ಬಿಜೆಪಿ ಮತ್ತು ಚುನಾವಣಾ ಆಯೋಗದ ನಿಲುವುಗಳನ್ನು ಬಹಿರಂಗವಾಗಿ ಚರ್ಚಿಸಲು ‘ಜಾಗೃತ ಕರ್ನಾಟಕ’ವು ಮುಂದಾಗಿದೆ. ಬಿಜೆಪಿ ಮತ್ತು ಆಯೋಗಕ್ಕೆ ಪಂಥಾಹ್ವಾನ ನೀಡಿದೆ.

- Advertisement -

ಜಾಗೃತ ಕರ್ನಾಟಕ ಸಂಘಟನೆಯು ಬೆಂಗಳೂರಿನ ಗಾಂಧಿ ಭವನದಲ್ಲಿ ಜೂನ್ 30ರ ಸಂಜೆ 4 ಗಂಟೆ ‘ಎಸ್‌ಐಆರ್‌’ ಕುರಿತು ಸಂವಾದ ಕಾರ್ಯಕ್ರಮ ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ‘ಎಸ್‌ಐಆರ್‌’ ವಿಚಾರದಲ್ಲಿನ ಪ್ರಶ್ನೆಗಳಿಗೆ ಉತ್ತರಿಸುವಂತೆ ಮತ್ತು ತಮ್ಮ ನಿಲುವುಗಳನ್ನು ಸ್ಪಷ್ಟಪಡಿಸಲು ಬಿಜೆಪಿ ಮತ್ತು ಚುನಾವಣಾ ಆಯೋಗವನ್ನು ಆಹ್ವಾನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಸಾಮಾಜಿಕ ಜಾಲತಾಣಗಳಲ್ಲಿ ಆರೋಪ-ಪ್ರತ್ಯಾರೋಪಗಳ ಸರಮಾಲೆ ಮುಂದುವರಿಯುವ ಬದಲು, ಜನರ ಎದುರೇ ವಾದ-ಪ್ರತಿವಾದ ನಡೆಯಲಿ. ಅದಕ್ಕಾಗಿ, ಬಿಜೆಪಿ ಮತ್ತು ಚುನಾವಣಾ ಆಯೋಗವನ್ನು ಚರ್ಚೆಗೆ ಆಹ್ವಾನಿಸಿದ್ದೇವೆ. ಖುದ್ದು ಬಿಜೆಪಿ ರಾಜ್ಯ ಕಚೇರಿಗೆ ತೆರಳಿ ಅಧಿಕೃತ ಆಹ್ವಾನ ಪತ್ರವನ್ನು ಸಲ್ಲಿಸಲಾಗಿದೆ” ಎಂದು ಸಂಘಟನೆಯ ಮುಖಂಡರು ತಿಳಿಸಿದ್ದಾರೆ.

“ಸತ್ಯ ಮತ್ತು ಸುಳ್ಳುಗಳ ನಡುವಿನ ಹೋರಾಟಕ್ಕೆ ಸಾರ್ವಜನಿಕ ವೇದಿಕೆಯೇ ಸೂಕ್ತ. ಹೀಗಾಗಿ, ಬಿಜೆಪಿ ನಾಯಕರು ಹಿಂಜರಿಯದೆ ಚರ್ಚೆಗೆ ಆಗಮಿಸುವರೆಂಬ ನಿರೀಕ್ಷೆ ಇದೆ” ಎಂದು ಜಾಗೃತ ಕರ್ನಾಟಕ ತಿಳಿಸಿದೆ.

ಜಾಗೃತ ಕರ್ನಾಟಕದ ಸವಾಲನ್ನು ಬಿಜೆಪಿ ನಾಯಕರು ಸ್ವೀಕರಿಸುವರೇ? ಬಿಜೆಪಿಯ ರಾಜ್ಯ ಕಚೇರಿಯಿಂದ ಕೂಗಳತೆಯ ದೂರದಲ್ಲಿ ನಡೆಯಲಿರುವ ಈ ಮುಖಾಮುಖಿ ಚರ್ಚೆಯಲ್ಲಿ ಭಾಗವಹಿಸುವರೇ ಎಂಬ ಪ್ರಶ್ನೆ ಮುನ್ನೆಲೆಯಲ್ಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ, ಚೀನಾಗೆ ಹೆದರಿದಿರೇ?

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ...