ಬೆಂಗಳೂರು | SIR ವಿರುದ್ಧ ಮೊಳಗಿದ ಘೋಷ; ಪ್ರಜಾತಂತ್ರದ ಉಳಿವಿಗಾಗಿ ‘ಜನತಾ ಮೆರವಣಿಗೆ’

Date:

ದೇಶದ ಮತದಾರರ ಮೇಲೆ ಗ್ಯಾನೇಶ್ ಕುಮಾರ್ (ಚುನಾವಣಾ ಆಯೋಗ) ಹೇರಿರುವ ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು, ಮತಪಟ್ಟಿ ಪರಿಷ್ಕರಣೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬೆಂಗಳೂರಿನಲ್ಲಿ ವಿವಿಧ ಜನಪರ ಸಂಘಟನೆಗಳು ಜಂಟಿಯಾಗಿ ಬೃಹತ್ ಪ್ರತಿಭಟನೆ ನಡೆಸಿವೆ.

- Advertisement -

ದೆಹಲಿಯ ಜಂತರ್ ಮಂತರ್‌ನಲ್ಲಿ ಧರಣಿ ಮತ್ತು ಹೋರಾಟಗಳಿಗೆ ನಿಷೇಧ ಹೇರಿರುವುದನ್ನು ತೀವ್ರವಾಗಿ ಖಂಡಿಸಿರುವ ಪ್ರತಿಭಟನಾಕಾರರು, ‘ಎಲ್ಲೆಲ್ಲೂ ಜಂತರ್ ಮಂತರ್’ ಘೋಷಣೆಯ ಅಡಿಯಲ್ಲಿ ಬೆಂಗಳೂರಿನ ಟೌನ್‌ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ‘ಜನತಾ ಮೆರವಣಿಗೆ ನಡೆಸಿದ್ದಾರೆ.  ಈ ಐಕ್ಯ ಹೋರಾಟದಲ್ಲಿ ದಲಿತ, ರೈತ, ಕಾರ್ಮಿಕ, ವಿದ್ಯಾರ್ಥಿ, ಮಹಿಳಾ, ಅಲ್ಪಸಂಖ್ಯಾತ ಹಾಗೂ ಪ್ರಗತಿಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಕೈಯಲ್ಲಿ ರಾಷ್ಟ್ರಧ್ವಜಗಳನ್ನು ಹಿಡಿದು ಹೆಜ್ಜೆ ಹಾಕಿದ್ದಾರೆ. ‘ಎಸ್‌ಐಆರ್ ಪ್ರಕ್ರಿಯೆಯು ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಕಂಟಕವಾಗಿದೆ’ ಎಂದು  ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

“ಚುನಾವಣಾ ಆಯೋಗದಲ್ಲಿ ನಡೆದಿರುವ ಅಕ್ರಮಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಮತ್ತು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವ ಹೊಸ ಚುನಾವಣಾ ಆಯೋಗವನ್ನು ಮರುರಚನೆ ಮಾಡಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

1002095174

“ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಹಲವು ದಶಕಗಳಿಂದಲೂ ಜನರ ಭಿನ್ನಮತ ಮತ್ತು ನ್ಯಾಯಸಮ್ಮತ ಹೋರಾಟಗಳಿಗೆ ಪ್ರಮುಖ ವೇದಿಕೆಯಾಗಿತ್ತು. ಆದರೆ, ಅಲ್ಲಿ ಪ್ರತಿಭಟನೆಗಳನ್ನು ನಿರ್ಬಂಧಿಸಿರುವುದನ್ನು ವಿರೋಧಿಸಿ, ಅಂತಹದೇ ಮಾದರಿಯ ಜನತಾ ಪ್ರತಿಭಟನೆಗಳನ್ನು ದೇಶಾದ್ಯಂತ ಸಂಘಟಿಸುವ ಪ್ರಯತ್ನಗಳು ಚುರುಕುಗೊಂಡಿವೆ. ಪ್ರಸ್ತುತ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯಲ್ಲಿ ನೈಜ ಮತ್ತು ಅರ್ಹ ಮತದಾರರ ಹೆಸರುಗಳನ್ನು ಯೋಜಿತವಾಗಿ ಕೈಬಿಡಲಾಗುತ್ತಿದೆ” ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

“ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು, ಯಾವುದೇ ಕಾರಣಕ್ಕೂ ಅರ್ಹರ ಮತದಾನದ ಹಕ್ಕನ್ನು ಕಸಿದುಕೊಳ್ಳಬಾರದು ಹಾಗೂ ಚುನಾವಣಾ ಆಯೋಗವು ಯಾವುದೇ ಒತ್ತಡಕ್ಕೆ ಒಳಗಾಗದೆ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಪ್ರಸ್ತುತ ದೆಹಲಿ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಎಸ್‌ಐಆರ್ ವಿರುದ್ಧ ಸೃಷ್ಟಿಯಾಗಿರುವ ಹೋರಾಟದ ಅಲೆಗೆ ಕರ್ನಾಟಕದ ಜನಪರ ಸಂಘಟನೆಗಳೂ ಕೈಜೋಡಿಸಿವೆ. ಚುನಾವಣಾ ಆಯೋಗದ ಪ್ರಸ್ತುತ ಕಾರ್ಯವೈಖರಿಯ ಬಗ್ಗೆ ಸಾರ್ವಜನಿಕವಾಗಿ ಎದ್ದಿರುವ ಗಂಭೀರ ಆರೋಪಗಳಿಗೆ ಸೂಕ್ತ ಸಮಜಾಯಿಷಿ ನೀಡಬೇಕು, ಗ್ಯಾನೇಶ್ ಕುಮಾರ್ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಹಾಗೂ ಪ್ರಜೆಗಳ ಸಂವಿಧಾನಾತ್ಮಕ ಹಕ್ಕುಗಳನ್ನು ರಕ್ಷಿಸಬೇಕು” ಎಂದಿದ್ದಾರೆ‌.

ಇದೇ ಸಂದರ್ಭದಲ್ಲಿ ‘ನನ್ನ ಮತ ನನ್ನ ಹಕ್ಕು’ ವೇದಿಕೆಯ ಕಾರ್ಯಕರ್ತರು ನಗರದ ಪ್ರಮುಖ ವಾಣಿಜ್ಯ ಪ್ರದೇಶಗಳಾದ ಇನ್‌ಫ್ಯಾಂಟ್ರಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿರುವ ಯುದ್ಧ ಸ್ಮಾರಕದ ಬಳಿ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ಪ್ರಜೆಯ ಮತದಾನದ ಹಕ್ಕನ್ನು ರಕ್ಷಿಸುವುದು ಅತ್ಯಂತ ಅಗತ್ಯವಾಗಿದ್ದು, ಸಂವಿಧಾನ ನೀಡಿರುವ ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ಹತ್ತಿಕ್ಕುವುದು ಒಪ್ಪಿಕೊಳ್ಳಲಾಗದ ನಡವಳಿಕೆಯಾಗಿದೆ ಎಂದು ಹೋರಾಟಗಾರರು ಪ್ರತಿಪಾದಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಟಿಂಗ್ ಪ್ರಕರಣ: ಸ್ವಪಕ್ಷೀಯರು ಭಾಗಿ – ಸಚಿವ ಯತೀಂದ್ರ; ಪಾರದರ್ಶಕ ತನಿಖೆಗೆ ಸಿದ್ದರಾಮಯ್ಯ ಆಗ್ರಹ

ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ...

ಕತ್ತಲಲ್ಲಿ ಗುರುಗ್ರಾಮ್: ವಿದ್ಯುತ್‌ ಬಿಕ್ಕಟ್ಟಿನಿಂದ 1,800 ಕೈಗಾರಿಕೆಗಳ ಕೆಲಸ ಸ್ಥಗಿತ, ನೀರಿಗಾಗಿ ಜನರ ಪರದಾಟ

ಹರಿಯಾಣ ವಿದ್ಯುತ್ ಇಲಾಖೆಯ ನೌಕರರು ನಡೆಸುತ್ತಿರುವ ಮೂರು ದಿನಗಳ ಮುಷ್ಕರದಿಂದ ‌ಗುರುಗ್ರಾಮ್...

ದೆಹಲಿಯಲ್ಲಿ ಭುಗಿಲೆದ್ದ ಆಕ್ರೋಶ: ಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರು

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಉದ್ದೇಶಪೂರ್ವಕವಾಗಿ...

ಚೀನಾ ವಿಚಾರದಲ್ಲಿ ಮೋದಿ ಮೌನ; ಕೇಂದ್ರದ ವಿರುದ್ಧ ಜೈರಾಮ್ ರಮೇಶ್ ತೀವ್ರ ವಾಗ್ದಾಳಿ

ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾ ಸೇನೆಯೊಂದಿಗೆ ಮುಖಾಮುಖಿ ಸಂಘರ್ಷ ಮುಂದುವರಿದಿದೆ ಎಂದು...