SIR | ಚುನಾವಣಾ ಆಯೋಗದ ನಿರುತ್ತರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ; ಕಾನೂನು ಹೋರಾಟದ ಎಚ್ಚರಿಕೆ!

Date:

ತಮಿಳುನಾಡು, ಕೇರಳ ಹಾಗೂ ಪಶ್ಚಿಮ ಬಂಗಾಳದ ಮಾದರಿಯಲ್ಲಿ ಕರ್ನಾಟಕದಲ್ಲೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ನೆಪದಲ್ಲಿ ಅರ್ಹ ಮತದಾರರನ್ನು ಮತದಾನದ ಹಕ್ಕಿನಿಂದ ವಂಚಿಸುವ ಆತಂಕ ಎದುರಾಗಿದೆ. ಈ ಕುರಿತು ರಾಜ್ಯ ಸರ್ಕಾರ ಕೇಳಿರುವ ಹಲವು ಪ್ರಮುಖ ಪ್ರಶ್ನೆಗಳಿಗೆ ಕೇಂದ್ರ ಚುನಾವಣಾ ಆಯೋಗದಿಂದ ಇದುವರೆಗೂ ಯಾವುದೇ ಉತ್ತರ ಬಂದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಯೋಗವು ಈ ವಿಷಯದಲ್ಲಿ ತಕ್ಷಣವೇ ಸ್ಪಷ್ಟನೆ ನೀಡದಿದ್ದರೆ, ಲಭ್ಯವಿರುವ ಎಲ್ಲ ಕಾನೂನು ಆಯ್ಕೆಗಳನ್ನು ಪರಿಶೀಲಿಸಿ ಮುಂದಿನ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

- Advertisement -

ಬೆಂಗಳುರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ ಕೆಲವು ಪ್ರಮುಖ ಆಕ್ಷೇಪಣೆಗಳನ್ನು ಕಳೆದ ವಾರವೇ ಕೇಂದ್ರ ಚುನಾವಣಾ ಆಯೋಗ ಮತ್ತು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಸಲ್ಲಿಸಲಾಗಿತ್ತು. ಆದರೆ, ಆಯೋಗವು ಈ ಆಕ್ಷೇಪಣೆಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಮೌನ ವಹಿಸಿದೆ. ನಾವು ಎಸ್‌ಐಆರ್ ಪ್ರಕ್ರಿಯೆಯನ್ನು ಮಾಡಬೇಡಿ ಎಂದು ಹೇಳುತ್ತಿಲ್ಲ. ಆದರೆ, ಇಡೀ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿರಬೇಕು. ಪ್ರಜಾಸತ್ತಾತ್ಮಕವಾದ ಮತದಾರರ ಪಟ್ಟಿಯನ್ನು ಸಿದ್ಧಪಡಿಸಿ ನಾಗರಿಕರಿಗೆ ನೀಡುವುದು ಆಯೋಗದ ಪ್ರಮುಖ ಜವಾಬ್ದಾರಿಯಾಗಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಎಸ್‌ಐಆರ್ ಹೆಸರಿನಲ್ಲಿ ಜಾರಿಗೆ ತರಲಾಗುತ್ತಿರುವ ತಾಂತ್ರಿಕ ನಿಯಮಗಳ ಬಗ್ಗೆ ತೀವ್ರ ಆಕ್ಷೇಪ ವ್ಯತ್ತಪಡಿಸಿದ ಸಚಿವರು, “ವರದಿಯಲ್ಲಿ ಉಲ್ಲೇಖಿಸಲಾಗಿರುವ ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಎಂದರೇನು? ಅದನ್ನು ಯಾವ ಆಧಾರದ ಮೇಲೆ ಮತ್ತು ಹೇಗೆ ಗುರುತಿಸಲಾಗುತ್ತದೆ? ಇದರ ಹೆಸರಿನಲ್ಲಿ ಜನರನ್ನು ಮತದಾರರ ಪಟ್ಟಿಯಿಂದ ಹೊರಗಿಡಲು ಇರುವ ತರ್ಕವಾದರೂ ಏನು? ಸಾರ್ವಜನಿಕರಿಂದ ಬರುವ ದೂರುಗಳನ್ನು ಹೇಗೆ ಪರಿಹರಿಸಲಾಗುತ್ತದೆ? ಮತ್ತು ಈ ಕುರಿತ ವಿವಾದಗಳನ್ನು ಯಾವ ನ್ಯಾಯಮಂಡಳಿ (Tribunal) ವಿಚಾರಣೆ ನಡೆಸಲಿದೆ? ಎಂಬಿತ್ಯಾದಿ ನೇರ ಪ್ರಶ್ನೆಗಳಿಗೆ ಉತ್ತರಿಸಲು ಅಧಿಕಾರಿಗಳು ಆಸಕ್ತಿ ತೋರಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಅಥವಾ ನಾಳೆ ಕಾನೂನು ತಜ್ಞರೊಂದಿಗೆ ಚರ್ಚಿಸಿ ಮುಂದಿನ ಕಾನೂನು ಮಾರ್ಗೋಪಾಯಗಳನ್ನು ಕಂಡುಕೊಳ್ಳಲಾಗುವುದು” ಎಂದಿದ್ದಾರೆ.

ಈ ಲೇಖನ ಓದಿದ್ದೀರಾ?: SIR | ಕರ್ನಾಟಕದ ನಾಗರಿಕರ ಹಕ್ಕು ರಕ್ಷಿಸಲು ರಾಜ್ಯ ಸರ್ಕಾರ ಕ್ರಮ; ಅರ್ಹರಿಗೆ ‘ಶಾಶ್ವತ ನಿವಾಸ ಪ್ರಮಾಣಪತ್ರ’ ನೀಡಲು ಆದೇಶ

ಇತರ ರಾಜ್ಯಗಳಲ್ಲಿ ಎಸ್‌ಐಆರ್‌ನಿಂದಾಗಿ ಲಕ್ಷಾಂತರ ಬಡವರು ಮತದಾನದ ಅವಕಾಶದಿಂದ ವಂಚಿತರಾಗಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ ಖರ್ಗೆ, “ಪಶ್ಚಿಮ ಬಂಗಾಳದಲ್ಲಿ ಬರೋಬ್ಬರಿ 98 ಲಕ್ಷ ಜನರನ್ನು ಏಕಾಏಕಿ ಪಟ್ಟಿಯಿಂದ ಕೈಬಿಡಲಾಗಿದೆ. ಅವರಿಗೆ ನ್ಯಾಯಮಂಡಳಿಯಲ್ಲೂ ಇದನ್ನು ಪ್ರಶ್ನಿಸಲು ಅವಕಾಶವಿಲ್ಲದಂತಾಗಿದೆ. ಇಂತಹ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಏಕಾಏಕಿ ಮಾಡಲು ಸಾಧ್ಯವಿಲ್ಲ, ಇದಕ್ಕೆ ಕನಿಷ್ಠ 4 ವರ್ಷಗಳ ಸಮಯ ಬೇಕು ಎಂದು ಹೇಳಿ ಅಲ್ಲಿನ ನ್ಯಾಯಮಂಡಳಿಯ ನ್ಯಾಯಾಧೀಶರೊಬ್ಬರು ರಾಜೀನಾಮೆ ನೀಡಿದ್ದಾರೆ. ಹೀಗಿರುವಾಗ, ಅಧಿಕಾರಿಗಳು ಮೊದಲು ನಮ್ಮ ಪ್ರಶ್ನೆಗಳಿಗೆ ಉತ್ತರಿಸಿ, ಆ ಬಳಿಕವಷ್ಟೇ ಎಸ್‌ಐಆರ್ ಪ್ರಕ್ರಿಯೆ ಆರಂಭಿಸಬೇಕಲ್ಲವೇ” ಎಂದು ಹೇಳಿದ್ದಾರೆ.

ಮತ್ತೊಂದೆಡೆ, ಸಚಿವರ ಈ ಎಲ್ಲ ಆರೋಪಗಳನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ (CEO) ಅನ್ಬುಕುಮಾರ್ ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. “ಎಸ್‌ಐಆರ್ ಪ್ರಕ್ರಿಯೆಯನ್ನು ರಾಜ್ಯದ ಎಲ್ಲ ರಾಜಕೀಯ ಪಕ್ಷಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿದ ಬಳಿಕವೇ ನಿಯಮಾನುಸಾರ ಜಾರಿಗೊಳಿಸಲಾಗುತ್ತಿದ್ದು, ಕಾಂಗ್ರೆಸ್ ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ” ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ಕರ್ನಾಟಕದಲ್ಲಿ ಇಂದಿನಿಂದ (ಜೂನ್ 30) ಎಸ್‌ಐಆರ್‌ ಪ್ರಕ್ರಿಯೆ ಆರಂಭವಾಗಿದೆ. ಆಗಸ್ಟ್‌ 5ರಂದು ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜ್‌ಘಾಟ್‌ನಲ್ಲಿ ‘ಇಂಡಿಯಾ’ ಒಕ್ಕೂಟದ ಮೌನ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರ ವಿರುದ್ಧ ಪ್ರತಿಪಕ್ಷಗಳು...

ಬಾಗಲಕೋಟೆ | ಪ್ರಜಾಪ್ರಭುತ್ವದ ಕರಾಳ ದಿನ: ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಯ ಸಂಕಲ್ಪದೊಂದಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ ಗ್ರಾಮಸ್ಥರು

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು...

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು...