SIR | ಸರ್ಕಾರಿ  ಸವಲತ್ತು ಬೇಕಂದ್ರೆ ಮತದಾರರ ಪಟ್ಟಿಯಲ್ಲಿ ಹೆಸರು ಕಡ್ಡಾಯ: ಸಿಎಂ ಡಿ ಕೆ ಶಿವಕುಮಾರ್

Date:

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ  ಜೊತೆಗೆ ಇತರೆ ಸರ್ಕಾರಿ ಸವಲತ್ತು ಪಡೆಯುವ ಫಲಾನುಭವಿಗಳು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು, ಇಲ್ಲವಾದರೆ ಸರ್ಕಾರಿ ಯೋಜನೆಗಳ ಸೌಲಭ್ಯ ಪಡೆಯುವಲ್ಲಿ ತೊಂದರೆ ಎದುರಾಗಬಹುದು ಎಂದು ಎಚ್ಚರಿಸಿದ್ದಾರೆ.

- Advertisement -

ಫಲಾನುಭವಿಗಳು ಮತದಾರರ ಪಟ್ಟಿ ಪರಿಷ್ಕರಣೆ (SIR)ಗೆ ಚಾಲನೆ ನೀಡಿ ಮಾತನಾಡಿದ ಸಿಎಂ, “ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವ ಉದ್ದೇಶ ಸರ್ಕಾರಕ್ಕಿಲ್ಲ. ಆದರೆ, ಯೋಜನೆಗಳ ಲಾಭ ನಿಜವಾದ ಮತ್ತು ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪಬೇಕು ಎಂಬುದು ನಮ್ಮ ಸ್ಪಷ್ಟ ನಿಲುವು. ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ, ಸರ್ಕಾರದ ಸೌಲಭ್ಯಗಳನ್ನು ಪಡೆಯುವಲ್ಲಿ ತೊಂದರೆಗಳಾಗಬಹುದು. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಮತದಾರರ ನೋಂದಣಿ ಸ್ಥಿತಿಯನ್ನು ತಕ್ಷಣವೇ ಪರಿಶೀಲಿಸಿಕೊಳ್ಳಿ” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಯಾವುದೇ ಅರ್ಹ ಫಲಾನುಭವಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ. ಅನರ್ಹರು ಯೋಜನೆಗಳ ಲಾಭ ಪಡೆಯುತ್ತಿದ್ದರೆ ಅಥವಾ ಸೌಲಭ್ಯಗಳ ದುರುಪಯೋಗವಾಗುತ್ತಿದ್ದರೆ ಅದನ್ನು ತಡೆಯುವುದೇ ನಮ್ಮ ಮುಖ್ಯ ಗುರಿ. ಅರ್ಹರಿಗೆ ತೊಂದರೆಯಾಗದಂತೆ ಅನರ್ಹರನ್ನು ಗುರುತಿಸಿ ಪಟ್ಟಿ ಶುದ್ಧೀಕರಿಸಿ” ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: SIR | ಚುನಾವಣಾ ಆಯೋಗದ ನಿರುತ್ತರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ; ಕಾನೂನು ಹೋರಾಟದ ಎಚ್ಚರಿಕೆ!

ರಾಜ್ಯದಲ್ಲಿ ಇತ್ತೀಚೆಗೆ ‘ಗೃಹ ಜ್ಯೋತಿ’, ‘ಗೃಹ ಲಕ್ಷ್ಮಿ’, ‘ಅನ್ನಭಾಗ್ಯ’, ‘ಶಕ್ತಿ’ ಮತ್ತು ‘ಯುವ ನಿಧಿ’ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಲಾಗುತ್ತಿದೆ. ಮೃತಪಟ್ಟವರ ಹೆಸರುಗಳು, ನಕಲಿ ಫಲಾನುಭವಿಗಳು ಮತ್ತು ರಾಜ್ಯದ ಹೊರಗಿನವರ ಖಾತೆಗಳಿಗೆ ಸೌಲಭ್ಯ ತಲುಪುತ್ತಿರುವ ಬಗ್ಗೆ ಅಧಿಕಾರಿಗಳು ವರದಿ ಮಾಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಮೂಲಕ ಯೋಜನೆಗಳಲ್ಲಿ ಆಗುತ್ತಿರುವ ಸೋರಿಕೆಗಳನ್ನು ತಡೆಗಟ್ಟಿ, ಸೌಲಭ್ಯಗಳನ್ನು ನಿಜವಾದ ಫಲಾನುಭವಿಗಳಿಗೆ ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜನವರಿಯಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ಬೀದರ್‌ ನಗರದಲ್ಲಿ 2027ರ ಜನವರಿ ತಿಂಗಳಲ್ಲಿ 15 ದಿನಗಳ ಕಾಲ ಅಗ್ನಿವೀರ...

ದೇವಿಯಿಂದ ಕತ್ತಿ ಪಡೆದ ರಾಜರ ಕಥೆಗಳು ಶಾಲಾ ಪಠ್ಯದಲ್ಲಿ; NCERTಯಿಂದ ಮತ್ತೊಂದು ವಿವಾದ?

"ಭಾರತದಲ್ಲಿ ದೇವಿಯರ ಆರಾಧನೆಗೂ, ಯುದ್ಧಕ್ಕೂ ಅನಾದಿ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ. ಪ್ರಾಚೀನ...

‘INDIA’ ಮೈತ್ರಿಕೂಟದ ಸಭೆಗಾಗಿ ದೆಹಲಿಗೆ ಮಮತಾ ಪ್ರಯಾಣ: ‘ದಿಮಾಗಿ ನಕ್ಸಲರ’ ಜತೆ ಸಮಾಲೋಚನೆ ಎಂದ ಸುವೇಂದು ಅಧಿಕಾರಿ

ಬುಧವಾರ ನಡೆಯಲಿರುವ 'INDIA' ಮೈತ್ರಿಕೂಟದ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮ ಬಂಗಾಳದ...

ಮೋದಿ ಪ್ರಮಾಣಪತ್ರ ವಿವಾದ: ಕೇಜ್ರಿವಾಲ್ ಮೇಲ್ಮನವಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿ ಪ್ರಮಾಣಪತ್ರವನ್ನು ಬಹಿರಂಗಪಡಿಸುವಂತೆ ಗುಜರಾತ್...