SIR | ಒಂದೇ ಮತಗಟ್ಟೆಯಲ್ಲಿ ಶೇ. 62ರಷ್ಟು ಮತದಾರರ ಹೆಸರು ಡಿಲೀಟ್: ಚುನಾವಣಾ ಆಯೋಗಕ್ಕೆ ರಮೇಶ್ ಬಾಬು ದೂರು

Date:

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಸ್ವರೂಪದ ನ್ಯೂನ್ಯತೆಗಳು ಹಾಗೂ ಆಡಳಿತಾತ್ಮಕ ಲೋಪಗಳು ಕಂಡುಬಂದಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕನ ಮತದಾನದ ಹಕ್ಕನ್ನು ರಕ್ಷಿಸಲು ತಕ್ಷಣವೇ ರಾಜ್ಯಾದ್ಯಂತ ಸಮಗ್ರ ಪರಿಶೀಲನೆ ನಡೆಸಬೇಕು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

- Advertisement -

ಈ ಸಂಬಂಧ ರಮೇಶ್ ಬಾಬು ಅವರು ಚುನಾವಣಾ ಆಯೋಗಕ್ಕೆ ಅಧಿಕೃತ ದೂರು ಸಲ್ಲಿಸಿದ್ದಾರೆ. ಅನೇಕ ಮತಗಟ್ಟೆಗಳಲ್ಲಿ ಅರ್ಹ ಮತದಾರರ ಹೆಸರುಗಳನ್ನು ಏಕಾಏಕಿ ಪಟ್ಟಿಯಿಂದ ಹೊರಗಿಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯಾದ್ಯಂತ ನಡೆಯುತ್ತಿರುವ ಅಕ್ರಮ ಮತ್ತು ನಿರ್ಲಕ್ಷ್ಯಕ್ಕೆ ಉದಾಹರಣೆಯಾಗಿ ವಿಧಾನಸಭಾ ಕ್ಷೇತ್ರ ಸಂಖ್ಯೆ 153ರ ಭಾಗ ಸಂಖ್ಯೆ 512ರ ವಿವರಗಳನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಈ ನಿರ್ದಿಷ್ಟ ಮತಗಟ್ಟೆಯಲ್ಲಿ ಒಟ್ಟು 1,016 ಮತದಾರರಿದ್ದು, ಪರಿಶೀಲನೆಯ ಬಳಿಕ ಕೇವಲ 389 (ಶೇ. 38) ಮತದಾರರನ್ನು ಮಾತ್ರ ಮಾನ್ಯ ಮಾಡಲಾಗಿದೆ. ಅಂದರೆ ಒಂದೇ ಭಾಗದಲ್ಲಿ ಸುಮಾರು ಶೇ. 62ರಷ್ಟು ಮತದಾರರು ಪಟ್ಟಿಯಿಂದ ಹೊರಗುಳಿದಿದ್ದಾರೆ ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಇದನ್ನೂ ಓದಿ: ಬೀದರ್‌ | ಮತದಾನದ ಹಕ್ಕು ಕಸಿದುಕೊಳ್ಳುವ ಎಸ್‌ಐಆರ್ : ಜ್ಞಾನಪ್ರಕಾಶ ಸ್ವಾಮೀಜಿ

ಸಮರ್ಪಕ ಪರಿಶೀಲನೆ ನಡೆಸದೇ, ಮ್ಯಾಪಿಂಗ್ ಆಗಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ 265 ಮತದಾರರಿಗೆ ನೋಟಿಸ್ ನೀಡಿರುವುದು ಚುನಾವಣಾ ಸಿಬ್ಬಂದಿಯ ಸಂಪೂರ್ಣ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಕೆಪಿಸಿಸಿ ಆಕ್ಷೇಪಿಸಿದೆ. ಬಿಎಲ್‌ಒ ಹಾಗೂ ಚುನಾವಣಾ ಅಧಿಕಾರಿಗಳಿಂದ ಗಣತಿ ನಮೂನೆಗಳು ತಲುಪದಿರುವುದು ಮತ್ತು ಸರಿಯಾದ ಲೆಕ್ಕಪತ್ರ ನಿರ್ವಹಣೆ ಆಗದಿರುವುದು. ಅರ್ಹ ಮತದಾರರನ್ನು ಯಾವುದೇ ಖಾತರಿ ಇಲ್ಲದೆ ‘ಶಾಶ್ವತವಾಗಿ ಸ್ಥಳಾಂತರಗೊಂಡವರು’ ಅಥವಾ ‘ಮೃತಪಟ್ಟವರು’ ಎಂದು ತಪ್ಪು ವರ್ಗೀಕರಣ ಮಾಡುತ್ತಿರುವುದು. ಸಾರ್ವಜನಿಕರ ದೂರುಗಳಿಗೆ ಬಿಎಲ್‌ಒ, ಎಇಆರ್‌ಒ ಹಾಗೂ ಇಆರ್‌ಒ ಮಟ್ಟದಲ್ಲಿ ಸೂಕ್ತ ಸ್ಪಂದನೆ ಸಿಗದಿರುವುದರ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ರಾಜ್ಯಾದ್ಯಂತ ಮತಗಟ್ಟೆ ಭಾಗವಾರು ಅಂಕಿಅಂಶಗಳ ತುರ್ತು ಪರಿಶೀಲನೆ ನಡೆಸಿ ವರದಿ ಪಡೆಯಬೇಕು. ತಾಂತ್ರಿಕ ಮ್ಯಾಪಿಂಗ್ ದೋಷಗಳಿಂದಾಗಿ ಯಾವುದೇ ಅರ್ಹ ಮತದಾರನ ಹೆಸರು ಪಟ್ಟಿಯಿಂದ ಕೈಬಿಡಬಾರದು. ಸಾರ್ವಜನಿಕರು ಮತ್ತು ರಾಜಕೀಯ ಪ್ರತಿನಿಧಿಗಳಿಗೆ ಸುಲಭವಾಗಿ ಮಾಹಿತಿ ಸಿಗುವ ಪಾರದರ್ಶಕ ದೂರು ಪರಿಹಾರ ವ್ಯವಸ್ಥೆ ರೂಪಿಸಬೇಕು. ದೋಷಗಳನ್ನು ಸರಿಪಡಿಸಿಕೊಳ್ಳಲು ಸಾರ್ವಜನಿಕರಿಗೆ ಸೂಕ್ತ ಕಾಲಾವಕಾಶ ನೀಡಬೇಕು ಹಾಗೂ ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಜನತಾ ಪ್ರಾತಿನಿಧ್ಯ ಕಾಯ್ದೆ 1950 ಮತ್ತು ಮತದಾರರ ನೋಂದಣಿ ನಿಯಮಗಳು 1960ರ ಅಡಿಯಲ್ಲಿ ಪ್ರತಿಯೊಬ್ಬ ನಾಗರಿಕನಿಗೆ ನ್ಯಾಯಸಮ್ಮತ ಅವಕಾಶ ನೀಡಬೇಕು. ಗಣತಿಯ ಲೋಪಗಳಿಂದಾಗಿ ಯಾವುದೇ ನೈಜ ಮತದಾರ ತನ್ನ ಪ್ರಜಾಸತ್ತಾತ್ಮಕ ಹಕ್ಕಿನಿಂದ ವಂಚಿತನಾಗದಂತೆ ಆಯೋಗ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ರಮೇಶ್ ಬಾಬು ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ ರೈತರ ಒತ್ತಾಯ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು...

‘ಕಠಿಣ ಆದೇಶಕ್ಕೆ ಆಹ್ವಾನ ನೀಡದಿರಿ’: ಮಣಿಪುರ ಮುಖ್ಯ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದಾಗಿ ಮನೆ ಕಳೆದುಕೊಂಡು ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿರುವವರ...

ಪಡಿತರ ಚೀಟಿ ಇ-ಕೆವೈಸಿ ಗಡುವು ವಿಸ್ತರಣೆ: ಸರ್ಕಾರ ಆದೇಶ

ಕರ್ನಾಟಕದಲ್ಲಿ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿದಾರರು ರೇಷನ್ ಕಾರ್ಡ್ ಇ-ಕೆವೈಸಿ...

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್...