ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ಸಾಂದ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ ತಾಂತ್ರಿಕ ವ್ಯತ್ಯಾಸಗಳು ಎದುರಾಗಿದ್ದು, ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ತಾಯಿ ಗೌರಮ್ಮ ಅವರ ಹೆಸರು ನೋಟಿಸ್ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ.
ಕನಕಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಅವರ ಹೆಸರಿನ ಕಾಗುಣಿತ/ಸ್ಪೆಲ್ಲಿಂಗ್ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಸ್ವಯಂಚಾಲಿತ ವ್ಯವಸ್ಥೆಯು ಈ ನೋಟಿಸ್ ಅನ್ನು ಸೃಷ್ಟಿಸಿದೆ.
ಇದು ಕೇವಲ ತಾಂತ್ರಿಕ ಹಾಗೂ ತಂತ್ರಾಂಶದ ಪರಿಶೀಲನಾ ಪ್ರಕ್ರಿಯೆಯಾಗಿದ್ದು, ಹಿರಿಯ ನಾಗರಿಕರಿಗೆ ಮತ್ತು ಪ್ರಮುಖ ವ್ಯಕ್ತಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಲಾಗುತ್ತಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
ಹಿರಿಯ ನಾಗರಿಕರು ಸ್ಥಳಕ್ಕೆ ಆಗಮಿಸುವ ಅಗತ್ಯವಿಲ್ಲದೆ, ಚುನಾವಣಾ ಸಿಬ್ಬಂದಿಯೇ ನೇರವಾಗಿ ಮನೆಗೆ ಭೇಟಿ ನೀಡಿ ಅಗತ್ಯ ತಿದ್ದುಪಡಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಿದ್ದಾರೆ.





