SIR | ‘ನಾವು ಕಳ್ಳರಲ್ಲ, ನಮ್ಮ ಹಕ್ಕಿಗಾಗಿ ಹೋರಾಡುತ್ತೇವೆ’; ಸಂತ್ರಸ್ತರೊಂದಿಗೆ ಪ್ರಕಾಶ್ ರಾಜ್ ಸಂವಾದ

Date:

‘ನಾವು ಕಳ್ಳರಲ್ಲ, ದೇಶದ ನಾಗರಿಕರು; ನಮ್ಮ ಹಕ್ಕಿಗಾಗಿ ಹೋರಾಡುತ್ತಿದ್ದೇವೆ’ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ. ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ನಾಗರಿಕರ‌ ಮತದಾನದ ಹಕ್ಕು ಕಸಿದುಕೊಳ್ಳುತ್ತಿರುವ ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆ ಮಂಗಳವಾರ ಆಯೋಜಿಸಿರುವ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆ ಅಂಗವಾಗಿ ಅವರು
ಬೆಂಗಳೂರಿನ ಬಾಪೂಜಿನಗರದಲ್ಲಿ ಎಸ್‌ಐಆರ್ ಸಂತ್ರಸ್ತರೊಂದಿಗೆ ಸಂವಾದ ನಡೆಸಿದರು. “ಆಧಾರ್ ಕಾರ್ಡ್ ಸೇರಿದಂತೆ ದಾಖಲೆಗಳನ್ನು ಹೊಂದಿದ್ದರೂ ಜನರನ್ನು ಅನುಮಾನದಿಂದ ನೋಡುವುದು ತಮ್ಮ ಸ್ವಾಭಿಮಾನ ಮತ್ತು ಗೌರವಕ್ಕೆ ಧಕ್ಕೆ ತರುತ್ತಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ನಾವೇನೋ ಕಳ್ಳರು, ಎಲ್ಲಿಂದಲೋ ಬಂದುಬಿಟ್ಟಿದ್ದೇವೆ, ಮೋಸ ಮಾಡಿಕೊಂಡು ವೋಟರ್ ಕಾರ್ಡ್ ತೆಗೆದುಕೊಂಡಿದ್ದೇವೆ ಎಂಬಂತೆ ನಮ್ಮನ್ನು ಅನುಮಾನದಿಂದ ನೋಡಲಾಗುತ್ತಿದೆ. ಇದು ನಮ್ಮ ಸ್ವಾಭಿಮಾನಕ್ಕೆ, ನಮ್ಮ ಗೌರವಕ್ಕೆ ಧಕ್ಕೆ” ಎಂದು ಅವರು ಹೇಳಿದ್ದಾರೆ.

“ಭಾರತ ನಮ್ಮ ಮನೆ, ನಮ್ಮ ದೇಶ, ನಾವು ಇಲ್ಲಿ ಹುಟ್ಟಿದವರು. ಆದರೂ, ಈಗ ನಾವು ಈ ದೇಶದವರು ಎಂದು ಸಾಬೀತುಪಡಿಸಿಕೊಳ್ಳಬೇಕಾಗಿದೆ. ಇಲ್ಲದಿದ್ದರೆ ನಮ್ಮನ್ನು ಎಲ್ಲಿ ಕಳಿಸುತ್ತೀರಿ” ಎಂದು ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗವನ್ನು ಪ್ರಶ್ನಿಸಿದ ಅವರು, ಇದು ದೊಡ್ಡ ಹೋರಾಟವಾಗಿ ರೂಪುಗೊಳ್ಳಲಿದೆ ಎಂದು ಎಚ್ಚರಿಕೆ‌ ನೀಡಿದ್ದಾರೆ.

“ರಾಜ್ಯದಲ್ಲಿ ಎಲೆಕ್ಷನ್‌ಗೆ ಇನ್ನು ಎರಡು ವರ್ಷ ಇದೆ. ಮುಂಚೆಯೇ ತಪ್ಪು ಮಾಡಿಬಿಟ್ಟಿದ್ದಾರೆ. ನಿಮ್ಮ (ಸಂತ್ರಸ್ತರು) ಜೊತೆ ನಾವೆಲ್ಲರೂ ಇದ್ದೇವೆ. ಇದು ದೊಡ್ಡ ಹೋರಾಟ ಆಗಿದೆ. ನಾವು ರಾಜಕಾರಣಿಗಳಲ್ಲ. ನಾವೇ ನಮಗಾಗಿ ಹೋರಾಟ ಮಾಡಬೇಕು. ನಮಗೆ ರಾಜಕೀಯ ಪಕ್ಷಗಳು ಇರಬೇಕಾಗಿಲ್ಲ. ನಮ್ಮ ಹಕ್ಕಿಗಾಗಿ ಹೋರಾಡೋಣ. ನಾವು ಗೆದ್ದೇ ಗೆಲ್ತೀವಿ” ಎಂದು ಸಂತ್ರಸ್ತರಿಹೆ ಧೈರ್ಯ ತುಂಬಿದ್ದಾರೆ.

ಎಸ್‌ಐಆರ್ ಪ್ರಕ್ರಿಯೆಯ ಅಗತ್ಯವನ್ನೇ ಪ್ರಶ್ನಿಸಿದ ಅವರು, “ಅಕ್ರಮವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿಕೊಂಡವರನ್ನು ತೆಗೆದುಹಾಕುವುದಕ್ಕೆ ತಮ್ಮ ವಿರೋಧವಿಲ್ಲ. ಆದರೆ, ಅರ್ಹ ನಾಗರಿಕರು ಮತ್ತು ಮತದಾರರಾದ ನಮ್ಮನ್ನು ಯಾಕೆ ತೆಗೆಯಬೇಕು”* ಎಂದು ಪ್ರಶ್ನಿಸಿದ್ದಾರೆ.

“ಈಗಾಗಲೇ ಮತದಾರರಾಗಿರುವವರನ್ನೇ ಮತ್ತೆ ಮತದಾರರನ್ನಾಗಿ ಸಾಬೀತುಪಡಿಸುವ ಪರಿಸ್ಥಿತಿ ಏಕೆ ಬಂದಿದೆ. ಎಸ್‌ಐಆರ್‌ನಿಂದ ಕರ್ನಾಟಕದಲ್ಲಿ ದೊಡ್ಡ ಸಂಖ್ಯೆಯ ಜನರು ಸಂತ್ರಸ್ತರಾಗಿದ್ದಾರೆ. ಒಂದೂವರೆ ಕೋಟಿ ಕನ್ನಡಿಗರು ಮತದಾನದ ಹಕ್ಕಿನಿಂದ ವಂಚಿತರಾಗಿದ್ದಾರೆ. ಅವರಲ್ಲಿ ನಾನು ಒಬ್ಬ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ಟೋಬರ್ 12ರ ಸುಪ್ರೀಂ ಕೋರ್ಟ್ ಮೆರವಣಿಗೆ: ರಾಹುಲ್, ಅಖಿಲೇಶ್ ಸೇರಿ ವಿಪಕ್ಷ ನಾಯಕರಿಗೆ ನೋಟಿಸ್

ಕಳೆದ ಅಕ್ಟೋಬರ್ 12ರಂದು ಸುಪ್ರೀಂ ಕೋರ್ಟ್ ಕಡೆಗೆ ನಡೆಸಲಾದ ಮೆರವಣಿಗೆಗೆ ಸಂಬಂಧಿಸಿದಂತೆ...

ರಾಮಲೀಲಾ ಮೈದಾನದಲ್ಲಿ ₹15.66 ಕೋಟಿಯ ಕಣ್ಗಾವಲು: 338 ಫೇಶಿಯಲ್ ರೆಕಗ್ನಿಷನ್ ಕ್ಯಾಮೆರಾ ಅಳವಡಿಕೆಗೆ ಸಿದ್ಧತೆ

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಸರಣಿ ಪ್ರತಿಭಟನೆಗಳು ಮತ್ತು ಸಾರ್ವಜನಿಕ ಸಭೆ-ಸಮಾರಂಭಗಳ ಪ್ರಮುಖ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಸಿಜೆಪಿ ಪ್ರತಿಭಟನೆ: ಗುಂಪು ಸೇರದಂತೆ ದೆಹಲಿ ಪೊಲೀಸರ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ 'ಕಾಕ್‌ರೋಚ್ ಜನತಾ...