SIR | ಬದುಕಿದ್ದವರನ್ನೂ ಸತ್ತರೆಂದು ನಕಲಿ ದಾಖಲೆ ಸಲ್ಲಿಸಿದ ಯತ್ನಾಳ್: ಎಫ್‌ಐಆರ್ ದಾಖಲು

Date:

ಜೀವಂತವಾಗಿರುವ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆಂದು ಸುಳ್ಳು ಮರಣ ಪ್ರಮಾಣಪತ್ರ ಲಗತ್ತಿಸಿ, ಎಸ್‌ಐಆರ್ ಪ್ರಕ್ರಿಯೆ ವೇಳೆ ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಯತ್ನಿಸಿದ ಆರೋಪದಡಿಯಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ರಾಮನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮತ ಕಳೆದುಕೊಂಡ ಮಹಿಳೆಯರೊಂದಿಗೆ ‘ಜಾಗೃತ ಕರ್ನಾಟಕ’ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬೆನ್ನಲ್ಲೇ ಈ ಎಫ್‌ಐಆರ್ ದಾಖಲಾಗಿದೆ.

- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಸಂದರ್ಭದಲ್ಲಿ ಯತ್ನಾಳ್ ಅವರು ತಮ್ಮ ಕ್ಷೇತ್ರ ವ್ಯಾಪ್ತಿಯ 1,054 ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರು. ಅದರಲ್ಲಿ ಹಲವರು ಮೃತಪಟ್ಟಿದ್ದಾರೆ ಎಂದು ನಕಲಿ ಮರಣ ಪ್ರಮಾಣಪತ್ರಗಳನ್ನು ಲಗತ್ತಿಸಲಾಗಿತ್ತು. ಈ ಪೈಕಿ ಬಹುತೇಕರು ಮುಸ್ಲಿಮರಾಗಿದ್ದು, ಅಲ್ಪಸಂಖ್ಯಾತರನ್ನೇ ಗುರಿಯಾಗಿಸಿ ಮತದಾನದ ಹಕ್ಕು ಕಿತ್ತುಕೊಳ್ಳಲು ಬಿಜೆಪಿ ನಾಯಕರು ಕುತಂತ್ರ ನಡೆಸುತ್ತಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಇದನ್ನೂ ಓದಿ: SIR ಫಾರ್ಮ್-7 ಹಗರಣ | ಬದುಕಿದ್ದವರನ್ನೇ ‘ಸತ್ತಿದ್ದಾರೆ’ ಎಂದು ನಕಲಿ‌ ದಾಖಲೆ‌ ಕೊಟ್ಟ ಯತ್ನಾಳ್; ಸಿಐಡಿ ತನಿಖೆಗೆ ಜಾಗೃತ ಕರ್ನಾಟಕ ಆಗ್ರಹ

ಈ ಸಂಬಂಧ‘ಜಾಗೃತ ಕರ್ನಾಟಕ’ ಸಂಘಟನೆಯ ಸಂಚಾಲಕರಾದ ಎಚ್.ವಿ. ವಾಸು ನೇತೃತ್ವದಲ್ಲಿ ವಿಜಯಪುರದ ಮುಸ್ಲಿಂ ಮಹಿಳೆಯರು (ಮಲನ್‌ಬಿ ಡಿ ಜಾಮದಾರ್, ಮಹಬೂಬಿ ಶೇಖ್ ಮತ್ತು ರಜಿಯಾ ಶೇಖ್) ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ತಮಗೆ ಆಗಿರುವ ಅನ್ಯಾಯವನ್ನು ಬಿಚ್ಚಿಟ್ಟಿದ್ದರು. “ನಾವು ಜೀವಂತವಾಗಿದ್ದರೂ ನಮ್ಮನ್ನು ಸತ್ತಿದ್ದಾರೆ ಎಂದು ತೋರಿಸಿ ನಕಲಿ ಪ್ರಮಾಣಪತ್ರ ಸೃಷ್ಟಿಸಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಸಿಐಡಿ ತನಿಖೆಗೆ ಜಾಗೃತ ಕರ್ನಾಟಕ ಆಗ್ರಹಿಸಿತ್ತು.

ಇದಾದ ಬೆನ್ನಲ್ಲೇ ವಿಜಯಪುರದ ಜಮಖಂಡಿ ರಸ್ತೆಯ ಬಾಗವಾನ ಕಾಲೋನಿ ನಿವಾಸಿ ಹಾಗೂ ತರಕಾರಿ ವ್ಯಾಪಾರಿ ನೀಡಿದ ದೂರಿನನ್ವಯ ಜಲನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ದೂರುದಾರರು ವಿಜಯಪುರ ನಗರ ಮತಕ್ಷೇತ್ರದ ಮತದಾರರಾಗಿದ್ದಾರೆ.

ತಾನು ಜೀವಂತವಾಗಿದ್ದರೂ ಸಹ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ಅಧಿಕೃತ ಲೆಟರ್ ಪ್ಯಾಡ್‌ನಲ್ಲಿ ಸುಳ್ಳು ಮರಣ ಪ್ರಮಾಣಪತ್ರವನ್ನು ಲಗತ್ತಿಸಿ, ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕುವಂತೆ ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರಿಗೆ ಅರ್ಜಿ ಸಲ್ಲಿಸಿ ಮೋಸ ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ಈ ಕೃತ್ಯವು ಸೆಪ್ಟೆಂಬರ್ 3ರಂದು ನಡೆದಿದ್ದು, ಈ ಕುರಿತು ಮಾಹಿತಿ ತಿಳಿದ ಬಳಿಕ ಅಕ್ಟೋಬರ್ 8ರಂದು ಜಲನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಕೆಯಾಗಿದೆ.

ದೂರಿನ ಆಧಾರದ ಮೇಲೆ ಜಲನಗರ ಠಾಣೆಯ ಪೊಲೀಸರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (A1) ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS), 2023ರ ಕಲಂ 318(4), 336(3) ಮತ್ತು 340(2) ರ ಅಡಿಯಲ್ಲಿ ಪ್ರಕರಣ (ಮೊಕದ್ದಮೆ ಸಂಖ್ಯೆ: 137/2026) ದಾಖಲಿಸಿದ್ದಾರೆ. ಈ ಕುರಿತು ಜಿಎಮ್‌ಎಫ್‌ಸಿ ನ್ಯಾಯಾಲಯಕ್ಕೂ ವರದಿ ಸಲ್ಲಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಲಾಪ್ರತಿಭೋತ್ಸವ: ವಿವಿಧ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನ

ಮಕ್ಕಳು ಹಾಗೂ ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಕನ್ನಡ...

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : 14 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ, 1 ನಾಮಪತ್ರ ತಿರಸ್ಕೃತ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ ಜೇಬಿಗೂ ಕತ್ತರಿ!

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ...

ಬೀದರ್‌ | ಮೊಬೈಲ್‌ಗಿಂತ ಕಲೆಯತ್ತ ಮಕ್ಕಳ ಆಸಕ್ತಿ ಹೆಚ್ಚಲಿ: ಸಿದ್ರಾಮ ಸಿಂಧೆ

ಇಂದಿನ ಮಕ್ಕಳು ಮೊಬೈಲ್ ಬಳಕೆಗೆ ಹೆಚ್ಚಿನ ಸಮಯ ಮೀಸಲಿಡುತ್ತಿರುವುದರಿಂದ ಅವರ ಸೃಜನಶೀಲ...