ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

Date:

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ ಮಾರಾಟ ಜಾಲದ ಪ್ರಮುಖ ಆರೋಪಿ (ಕಿಂಗ್‌ಪಿನ್) ಪ್ರಶಾಂತ್ ದೊರೆಸ್ವಾಮಿಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಸೋಮವಾರ (ಸೆ. 28) ಮುಂಜಾನೆ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.

- Advertisement -

​ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ಪ್ರಶಾಂತ್ ದೇಶ ಬಿಟ್ಟು ಪರಾರಿಯಾಗಿದ್ದ. ತನಿಖೆ ಚುರುಕುಗೊಳಿಸಿದ ಪೊಲೀಸರಿಗೆ ಆತ ಅಜರ್‌ಬೈಜಾನ್‌ ದೇಶದಲ್ಲಿ ತಲೆಮರೆಸಿಕೊಂಡಿರುವ ಮಾಹಿತಿ ಲಭ್ಯವಾಗಿತ್ತು. ತಕ್ಷಣವೇ ಎಚ್ಚೆತ್ತ ತನಿಖಾಧಿಕಾರಿಗಳು ಆತನ ವಿರುದ್ಧ ‘ಲುಕ್ ಔಟ್ ನೋಟಿಸ್’ ಜಾರಿ ಮಾಡಿದ್ದರು. ಎಸ್‌ಐಟಿ ಅಧಿಕಾರಿಗಳ ನಿರಂತರ ಜಾಗತಿಕ ಕಾರ್ಯಾಚರಣೆ ಹಾಗೂ ತೀವ್ರ ಒತ್ತಡದ ಪರಿಣಾಮವಾಗಿ ಆತ ಅನಿವಾರ್ಯವಾಗಿ ಭಾರತಕ್ಕೆ ಮರಳಬೇಕಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

​ಸೋಮವಾರ ಮುಂಜಾನೆ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಕಾರ್ಯಾಚರಣೆ ನಡೆಸಿದ ಎಸ್‌ಐಟಿ ಅಧಿಕಾರಿಗಳು, ಆತನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಬಂಧಿತ ಆರೋಪಿಯನ್ನು ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿರುವ ಅಧಿಕಾರಿಗಳು, ಜಾಲದ ಇನ್ನಷ್ಟು ಮಾಹಿತಿ ಕಲೆಹಾಕಲು ಆತನನ್ನು ಹೆಚ್ಚಿನ ಪೊಲೀಸ್ ಕಸ್ಟಡಿಗೆ ಪಡೆಯಲು ಸಕಲ ಸಿದ್ಧತೆ ನಡೆಸಿದ್ದಾರೆ.

ಬೆಂಗಳೂರು ಹಾಗೂ ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಇತ್ತೀಚೆಗೆ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧಗಳ ಬೃಹತ್ ಜಾಲ ಪತ್ತೆಯಾಗಿತ್ತು. ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವಂತಹ ಈ ಪ್ರಕರಣವನ್ನು ರಾಜ್ಯ ಸರ್ಕಾರವು ತೀವ್ರವಾಗಿ ಪರಿಗಣಿಸಿತ್ತು. ದಂಧೆಯ ಆಳವಾದ ತನಿಖೆಗಾಗಿ ಆರು ಅಧಿಕಾರಿಗಳನ್ನೊಳಗೊಂಡ ‘ವಿಶೇಷ ತನಿಖಾ ತಂಡ’ವನ್ನು (ಎಸ್‌ಐಟಿ) ರಚಿಸಿ ಆದೇಶ ಹೊರಡಿಸಿತ್ತು.

Advertisements

​ಈಗಾಗಲೇ ರಾಜ್ಯದ ವಿವಿಧೆಡೆ ಮಿಂಚಿನ ಕಾರ್ಯಾಚರಣೆ ಹಾಗೂ ದಾಳಿಗಳನ್ನು ನಡೆಸಿರುವ ಎಸ್‌ಐಟಿ, ಅಪಾರ ಪ್ರಮಾಣದ ನಕಲಿ ಔಷಧಗಳನ್ನು ಜಪ್ತಿ ಮಾಡಿದೆ. ಇದೀಗ ದಂಧೆಯ ರೂವಾರಿ ಪ್ರಶಾಂತ್ ಸೆರೆಸಿಕ್ಕಿರುವುದರಿಂದ, ನಕಲಿ ಔಷಧ ಜಾಲದ ಹಿಂದಿರುವ ಇನ್ನಷ್ಟು ಕರಾಳ ಮುಖಗಳು ಹಾಗೂ ಪ್ರಭಾವಿಗಳ ಹೆಸರುಗಳು ಹೊರಬರುವ ನಿರೀಕ್ಷೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...

ದೆಹಲಿ | ರಸ್ತೆ ಕಳಪೆ ಕಾಮಗಾರಿ ಪ್ರಶ್ನಿಸಿದಕ್ಕೆ ಹಲ್ಲೆ; ಯುವಕನ ಕಪಾಳಕ್ಕೆ ಹೊಡೆದ ದುರಹಂಕಾರಿ ಸಚಿವ

ದೆಹಲಿಯಲ್ಲಿ ಸಚಿವ ಪರ್ವೇಶ್ ವರ್ಮಾ ಅವರು ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾದ...

ಪಂಜಾಬ್: ಎಲ್‌ಪಿಯು ‘ವಿವಿ’ಯಲ್ಲಿ ಅತ್ಯಾಚಾರ ಆರೋಪ; ಭುಗಿಲೆದ್ದ ಪ್ರತಿಭಟನೆ, ತರಗತಿಗಳು ರದ್ದು

ಪಂಜಾಬ್‌ನ ಫಗ್ವಾರಾದಲ್ಲಿರುವ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಲ್ಲಿ (ಎಲ್‌ಪಿಯು) ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ...

3 ದಿನಗಳ ಬ್ಯಾಂಕ್ ಮುಷ್ಕರ ವಾಪಸ್: ವಾರಕ್ಕೆ 5 ದಿನ ಕೆಲಸದ ಪರಿಶೀಲನೆಗೆ ಸಮಿತಿ

ಸಾರ್ವಜನಿಕ ವಲಯದ ಬ್ಯಾಂಕ್‌ ನೌಕರರ ಒಕ್ಕೂಟವು (ಯುಎಫ್‌ಬಿಯು) ಸೋಮವಾರದಿಂದ ಹಮ್ಮಿಕೊಂಡಿದ್ದ ಮೂರು...