ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಗೆ ಹಾಜರಾಗುವಂತೆ ಆರೋಪಿಗಳಾದ ಎಚ್ ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಗೆ ಎಸ್ಐಟಿ ಅಧಿಕಾರಿಗಳು ಮಂಗಳವಾರ ನೋಟಿಸ್ ಜಾರಿಮಾಡಿದ್ದಾರೆ.
‘ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಸಂಬಂಧ ಮಾಹಿತಿ ಕಲೆ ಹಾಕಲಾಗಿತ್ತು. ಪ್ರಕರಣದಲ್ಲಿ ಆರೋಪಿಗಳ ಹೇಳಿಕೆ ಅಗತ್ಯವಿದೆ. ಹೀಗಾಗಿ, ಸಿಆರ್‌ಪಿಸಿ 41 (ಎ) ಅಡಿ ರೇವಣ್ಣ ಹಾಗೂ ಪ್ರಜ್ವಲ್‌ಗೆ ನೋಟಿಸ್ ನೀಡಲಾಗಿದೆ’ ಎಂದು ಎಸ್ಐಟಿ ಮೂಲಗಳು ಹೇಳಿವೆ.
‘ನೋಟಿಸ್ ತಲುಪಿದ 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಲಾಗಿದೆ. ವಿಚಾರಣೆಗೆ ಹಾಜರಾಗದಿದ್ದರೆ ಮುಂದಿನ ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವೇಗೌಡರ ಧೃತರಾಷ್ಟ್ರ ಸಿಂಡ್ರೋಮ್ ಮತ್ತು ಮೋದಿ ವಾಷಿಂಗ್ ಮಷೀನ್
