ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆ: ಹವಾಮಾನ ಇಲಾಖೆ

Date:

ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನು, ದಕ್ಷಿಣ ಒಳನಾಡು ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಕೂಡ ಸಾಧಾರಣ ಮಳೆಯಗಲಿದೆ.

- Advertisement -

ದಕ್ಷಿಣ ಒಳನಾಡು ಜಿಲ್ಲೆಗಳಿಗೆ ನವೆಂಬರ್ 3 ರವರೆಗೆ ಸಾಧಾರಣ ಮಳೆ, ನಂತರ ತುಂತುರು ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ 28 ರಿಂದ ನವೆಂಬರ್ 05 ರವರೆಗೆ ಕೃಷ್ಣ ಜಲಾನಯನ ಪ್ರದೇಶದಲ್ಲಿ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ಸಂಭವವಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಅಕ್ಟೋಬರ್ 31 ರಿಂದ ನವೆಂಬರ್ 3 ರವರೆಗೆ ಸಾಧಾರಣ ಮಳೆ, ಉಳಿದ ದಿನಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾಹೀರಾತುಗಳಲ್ಲಿ ಸೆಲೆಬ್ರಿಟಿಗಳು; ರಾಜ್‌ರಿಂದ ಕಲಿಯುವುದು ಬಹಳಷ್ಟಿದೆ

ಅಕ್ಟೋಬರ್ 27ರ ಬೆಳಗ್ಗೆ 8.30 ರಿಂದ ಅಕ್ಟೋಬರ್ 28ರ ಬೆಳಗ್ಗೆ 8.30 ರವರೆಗೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಕುಚ್ಚೂರು ಎಂಬಲ್ಲಿ ಅತ್ಯಧಿಕ 35ಮಿಮೀ ಮಳೆಯಾಗಿದೆ. ಹಿಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಬೆಂಗಳೂರಿನಲ್ಲಿ ಚಳಿಯ ವಾತವರಣ ಹೆಚ್ಚಾಗಿದೆ. ಕಳೆದ ಎರಡು ದಿನಗಳಿಂದ ಕನಿಷ್ಟ ತಾಪಮಾನ ಇಳಿಯಾಗಿದ್ದು, ಬೆಳಗ್ಗೆ 10 ಗಂಟೆಯವರೆಗೂ ಚಳಿಯ ವಾತಾವರಣವಿದೆ.‌ ಬೆಳಗ್ಗೆ 5 ಗಂಟೆಯಿಂದ ಚಳಿ ಶುರುವಾಗುತ್ತಿದ್ದು, ಈ ವರ್ಷ ಚಳಿಯ ಪ್ರಮಾಣ ದಾಖಲೆ ಬರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisements

ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 34.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದರೆ, ವಿಜಯಪುರದಲ್ಲಿ ಕನಿಷ್ಠ ತಾಪಮಾನ 16.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಂಗಳೂರಿನಲ್ಲಿ ತಾಪಮಾನ ಇಳಿಕೆಯಾಗಿದೆ. ಚಳಿಗಾಲ ಆರಂಭಕ್ಕೆ ಇನ್ನು ಒಂದು ತಿಂಗಳು ಬಾಕಿ ಇದೆ. ಆದರೆ ಚಂಡ ಮಾರುತ ಪರಿಣಾಮದಿಂದ ಚಳಿಯ ಅನುಭವವಾಗುತ್ತಿದೆ.

ಹವಮಾನ ವೈಪರಿತ್ಯದಿಂದ ಆರೋಗ್ಯದ ಮೇಲೆ ಭಾರಿ ಪರಿಣಾಮ ಬೀರಲಿದ್ದು, ಮಕ್ಕಳಲ್ಲಿ ಜ್ವರ, ಕೆಮ್ಮು, ಉಸಿರಾಟದ ಸಮಸ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ. ಹವಾಮಾನದ ದಿಢೀರ್ ಬದಲಾವಣೆಯಿಂದಾಗಿ ಅಸ್ತಮ, ಹೃದಯ ಸಮಸ್ಯೆ ಇದ್ದವರು ಎಚ್ಚರಿಕೆಯಿಂದ ಇರಬೇಕು ಎಂದು ವೈದ್ಯರು ಸೂಚನೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...