ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ | ಮರು ಗಣತಿ ಪಕ್ಷದ ವರಿಷ್ಠರ ತೀರ್ಮಾನ: ಸಿಎಂ ಸಿದ್ದರಾಮಯ್ಯ

Date:

Advertisements

ಜಾತಿ ಗಣತಿ ಬಗ್ಗೆ ಕೆಲವು ದೂರುಗಳು ಬಂದಿವೆ. ಸಮೀಕ್ಷೆ ನಡೆದು 10 ವರ್ಷಗಳಾಗಿದ್ದು, ಹಳೆಯದಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ಕಡಿಮೆ ಅವಧಿಯಲ್ಲಿ ಮರುಗಣತಿ ಕೈಗೊಳ್ಳಲು ಸೂಚಿಸಿದ್ದಾರೆ. ವರದಿಯನ್ನು ನಾವು ತಿರಸ್ಕರಿಸುವುದಿಲ್ಲ. ತಾತ್ವಿಕವಾಗಿ ವರದಿಯನ್ನು ಒಪ್ಪಿಕೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಗೌರಿಬಿದನೂರಿನ ಬೊಮ್ಮಸಂದ್ರ ಗ್ರಾಮ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರು, ‘ಕಾಂತರಾಜ ಆಯೋಗ ವರದಿ ಬಗ್ಗೆ ಪಕ್ಷದ ವರಿಷ್ಠರ ನಿರ್ಧಾರ ಮುಖ್ಯಮಂತ್ರಿಗಳಿಗೆ ನಿರಾಸೆ ತಂದಿದೆ’ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಮರು ಜಾತಿ ಗಣತಿ ಪಕ್ಷದ ವರಿಷ್ಠರು ಮಾಡಿದ ನಿರ್ಧಾರ. ಆ ಪ್ರಕಾರ ನಾವು ಕ್ರಮ ಕೈಗೊಳ್ಳುತ್ತೇವೆ” ಎಂದರು.

ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಮತ್ತು ರಾಜಕೀಯವಾಗಿ ರಾಜೀನಾಮೆ ಕೇಳುವುದು ಅಭ್ಯಾಸವಾಗಿದೆ. ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡೇ ಮಾಡುತ್ತದೆ. ಕುಂಭ ಮೇಳದಲ್ಲಿ 40-50 ಜನ ಕಾಲ್ತುಳಿತದಲ್ಲಿ ಸತ್ತರು. ಆಗ ಅಲ್ಲಿನ ಮುಖ್ಯಮಂತ್ರಿಗಳ ರಾಜೀನಾಮೆ ಕೇಳಿದರೇ? ಸೇತುವೆಯೊಂದು ಉದ್ಘಾಟನೆಯಾದ ದಿನವೇ ಬಿದ್ದು 140 ಜನ ಸತ್ತರು ಆಗ ಪ್ರಧಾನಿಗಳ ರಾಜಿನಾಮೆ ಕೇಳಿದರೇ? ಗೋಧ್ರಾ ಹತ್ಯಾಕಾಂಡದಲ್ಲಿ ಎಷ್ಟು ಜನ ಸತ್ತರು. ಆಗ ಗುಜರಾತ್ ಮುಖ್ಯಮಂತ್ರಿಗಳು ಯಾರಾಗಿದ್ದರು? ಅವರ ರಾಜೀನಾಮೆ ಕೇಳಿದರೇ? ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಸರಬರಾಜು ಮಾಡದೇ 23 ಜನ ಸತ್ತಾಗ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಿದರೆ” ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

Advertisements

30 ದಿನಗಳಲ್ಲಿ ವರದಿ

ಕಾಲ್ತುಳಿತ ಪ್ರಕರಣದಲ್ಲಿ ಅನೇಕ ಆಯೋಗ ರಚನೆಯಾಗಿದ್ದು ಇವು ತಾರ್ಕಿಕ ಅಂತ್ಯ ಕಾಣುವುದೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, “ತನಿಖೆ ಕೈಗೊಳ್ಳಲು ಏಕ ವ್ಯಕ್ತಿ ಆಯೋಗ ರಚನೆ ಮಾಡಿದ್ದು ಅದು 30 ದಿನಗಳಲ್ಲಿ ವರದಿ ಸಲ್ಲಿಸಲಿದೆ. ಈ ಬಗ್ಗೆ ಮಾತನಾಡಲು ಇಚ್ಛಿಸುವುದಿಲ್ಲ” ಎಂದರು.

“ಇ.ಡಿ ಯವರು ದಾಳಿ ಮಾಡಿದ್ದು ಯಾವುದೇ ಕಾನೂನಿನ ಉಲ್ಲಂಘನೆಯಾಗಿದ್ದರೆ ಅದಕ್ಕೆ ನಾವು ಬೆಂಬಲಿಸುವುದಿಲ್ಲ. ಕಾನೂನು ಪ್ರಕಾರವಾಗಿ ಕ್ರಮ ಕೈಗೊಳ್ಳಲಿ. ಕಾನೂನಿನ ಅನುಷ್ಠಾನಕ್ಕೆ ಅಡ್ಡಿಪಡಿಸುವುದಿಲ್ಲ” ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಪಾಯಕಾರಿ ಪ್ಲಾಸ್ಟಿಕ್: ಮನ್ಸೂರ್ ಮಾತುಗಳನ್ನು ಸರ್ಕಾರ-ಜನ ಆಲಿಸುವರೇ?

ಗ್ರೇಟರ್ ಬೆಂಗಳೂರಿಗೆ ತುಮಕೂರು: ಸಚಿವ ಸಂಪುಟದಲ್ಲಿ ಚರ್ಚೆ

ತುಮಕೂರು ಜಿಲ್ಲೆಯನ್ನು ಬೆಂಗಳೂರು ಉತ್ತರ ಎಂದು ನಾಮಕರಣ ಮಾಡಲು ಗೃಹ ಸಚಿವ ಜಿ.ಪರಮೇಶ್ವರ್ ಅವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸಚಿವ ಸಂಪುಟದ ಮುಂದೆ ಬಂದಾಗ ಪರಿಶೀಲಿಸಲಾಗುವುದು ಎಂದರು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣಕ್ಕೆ ಸರ್ಕಾರ ಒತ್ತು ನೀಡಿದೆ

ರಾಜ್ಯದ ವಿಶ್ವ ವಿದ್ಯಾನಿಲಯಗಳಲ್ಲಿಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮಾತನಾಡಿ, “ಖಾಲಿ ಇರುವಡೆಗಳಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲಾಗಿದೆ. ಇನ್ನು ಹೆಚ್ಚಿನ ಉಪನ್ಯಾಸಕರನ್ನು ನೇಮಕ ಮಾಡಲಾಗುವುದು, ಅವರ ವೇತನವನ್ನು ಹೆಚ್ಚಿಸಿ, ಸೌಲಭ್ಯಗಳನ್ನು ನೀಡಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣಕ್ಕೆ ನಮ್ಮ ಸರ್ಕಾರ ಒತ್ತು ನೀಡಿದೆ” ಎಂದರು.

ಮೋದಿಯಿಂದ ದೇಶದ ಬಡತನ ಕಡಿಮೆಯಾಗಿಲ್ಲ

“ಮೋದಿ ಆಡಳಿತದಲ್ಲಿ ದೇಶದಲ್ಲಿ ಬಡತನ ಕಡಿಮೆಯಾಗಿದೆ ಎಂಬ ವರದಿಯ ಬಗ್ಗೆ ಪ್ರತಿಕ್ರಿಯೆ ನೀಡಿ ಬಡತನ ಅವರಿಂದ ಕಡಿಮೆಯಾಗಿಲ್ಲ. ಬಡತನ ಹೋಗಲಾಡಿಸಲು ಅವರೇನು ಮಾಡಿದ್ದಾರೆ? ಗರೀಬಿ ಹಟಾವೋ ಸೇರಿದಂತೆ ಹಲವಾರು ಕಾರ್ಯಕ್ರಮಗಳಿಂದ ಬಡತನ ಕಡಿಮೆಯಾಗಿದೆ” ಎಂದು ಹೇಳಿದರು.

ಎರಡು ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆ ಪೂರ್ಣ

ಎತ್ತಿನಹೊಳೆ ಯೋಜನೆ ಎರಡು ವರ್ಷಗಳಲ್ಲಿ ಮುಕ್ತಾಯವಾಗಲಿದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು, ಈ ಭಾಗದ ಸಚಿವರು, ಶಾಸಕರು, ಹಾಗೂ ಅಧಿಕಾರಿಗಳ ಸಭೆಯನ್ನು ಕರೆಯಲಾಗಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X