ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮನೆ ಮನೆ ಸರ್ವೇ ಅಂತ್ಯ, ನ.10ರವರೆಗೆ ಆನ್‌ಲೈನ್‌ನಲ್ಲಿ ಅವಕಾಶ

Date:

ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮನೆ ಮನೆ ಸರ್ವೇ ಪ್ರಕ್ರಿಯೆ ಅಂತ್ಯವಾಗಿದೆ. ಆದರೆ ಸಮೀಕ್ಷೆಯಲ್ಲಿ ಭಾಗಿಯಾಗದವರು ಆನ್‌ಲೈನ್ ಮೂಲಕ ಸಮೀಕ್ಷೆಯಲ್ಲಿ ಭಾಗಿಯಾಗಲು ನವೆಂಬರ್ 10ರವರೆಗೆ ಅವಕಾಶ ನೀಡಲಾಗಿದೆ.

- Advertisement -

ರಾಜ್ಯದಲ್ಲಿರುವ ಎಲ್ಲಾ ಜನರ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಆಗಸ್ಟ್ 22ರಂದು ಆರಂಭಿಸಲಾಗಿದ್ದು, ಅಕ್ಟೋಬರ್ 31ರ ವೇಳೆ ಸಮೀಕ್ಷೆ ಮುಕ್ತಾಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಕುದಿ ಕಡಲು | ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮತ್ತು ನೈತಿಕ ನಿಷ್ಠೆ

ರಾಜ್ಯದಲ್ಲಿರುವ 6,85,38,000 ಕೋಟಿ ಜನರ ಪೈಕಿ ಇಂದಿನವರೆಗೆ(ಅ.31) 6,13,83,908 ಮಂದಿಯ ಸಮೀಕ್ಷೆಯನ್ನು ನಡೆಸಲಾಗಿದೆ. ಈವರೆಗೆ 4,22,258 ಕುಟುಂಬಗಳು ಸಮೀಕ್ಷೆಯಲ್ಲಿ ಭಾಗಿಯಾಗಲು ನಿರಾಕರಿಸಿದೆ. ಸಮೀಕ್ಷೆ ನಡೆಸುವ ತಂಡ ಭೇಟಿ ನೀಡಿದಾಗ 34,49,681 ಮನೆಗಳಲ್ಲಿ ಬೀಗ ಹಾಕಲಾಗಿತ್ತು ಅಥವಾ ಆ ಮನೆಯಲ್ಲಿದ್ದವರು ಬೇರೆಡೆ ಸ್ಥಳಾಂತರಗೊಂಡಿದ್ದರು.

survey

ಈ ರೀತಿ ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೆ ಇರುವವರಿಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಆನ್‌ಲೈನ್ ಮೂಲಕ ಸಮೀಕ್ಷೆಯಲ್ಲಿ ಭಾಗಿಯಾಗಲು ಅವಕಾಶ ನೀಡಿದೆ. https://kscbcselfdeclaration.karnataka.gov.in ಲಿಂಕ್‌ ಮೂಲಕ ಸ್ವಯಂ ಆಗಿ ನ.10ರವರೆಗೆ ಸಮೀಕ್ಷೆಯಲ್ಲಿ ಭಾಗಿಯಾಗಬಹುದು.

ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ನಿರಾಕರಿಸಿದವರು, ಸಮೀಕ್ಷಾದಾರರು ಮನೆಗೆ ಭೇಟಿ ನೀಡಿದಾಗ ಮನೆಯಲ್ಲಿ ಇಲ್ಲದವರು ಈ ಅವಕಾಶವನ್ನು ಬಳಸಿಕೊಂಡು ಮಾಹಿತಿಯನ್ನು ದಾಖಲಿಸಬಹುದು. ಈ ಸಮೀಕ್ಷೆಯು ಸರ್ಕಾರದ ನೀತಿಗಳನ್ನು ಹಾಗೂ ಯೋಜನೆಗಳನ್ನು ರೂಪಿಸಲು ಸಹಾಯವಾಗುವುದರಿಂದ ಸ್ವಯಂ ದೃಢೀಕರಣದ ಮೂಲಕ ಎಲ್ಲಾ ನಾಗರಿಕರು ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸರ್ಕಾರ ಮನವಿ ಮಾಡಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770004 ಅನ್ನು ಸಂಪರ್ಕಿಸಬಹುದಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...