ಸಾಮಾಜಿಕ – ಶೈಕ್ಷಣಿಕ ಸಮೀಕ್ಷೆ | 1.09 ಕೋಟಿ ಮನೆಗಳ ಸಮೀಕ್ಷೆ ಪೂರ್ಣ: ಕೊಪ್ಪಳ ಪ್ರಥಮ

Date:

Advertisements

ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ರಾಜ್ಯದ 1.09 ಕೋಟಿ ಮನೆಗಳ ಸಮೀಕ್ಷೆ (ಶೇ 75.96) ಪೂರ್ಣಗೊಂಡಿದ್ದು, 34.55 ಲಕ್ಷ ಮನೆಗಳ ಸಮೀಕ್ಷೆ ಬಾಕಿಯಿದೆ.

ಸಮೀಕ್ಷೆಗೆ ನಿಗದಿತ ಗುರಿ ಸಾಧನೆಯಲ್ಲಿ ಕೊಪ್ಪಳ ಜಿಲ್ಲೆ (ಶೇ 96.42) ಪ್ರಥಮ ಸ್ಥಾನದಲ್ಲಿದ್ದು, ಹಾವೇರಿ ಜಿಲ್ಲೆ (ಶೇ 95.88) 2ನೇ ಹಾಗೂ ರಾಯಚೂರು ಜಿಲ್ಲೆ (92.71) 3ನೇ ಸ್ಥಾನದಲ್ಲಿದೆ. ರಾಜ್ಯದ ರಾಜಧಾನಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಶೇ 32.64ರಷ್ಟು ಮಾತ್ರ ಗುರಿ ಸಾಧನೆಯಾಗಿದ್ದು, ಕಡೇ ಸ್ಥಾನದಲ್ಲಿದೆ.

ಭಾನುವಾರ ಸಂಜೆ 6 ಗಂಟೆವರೆಗಿನ ಅಂಕಿ–ಅಂಶದ ಮಾಹಿತಿ ಪ್ರಕಾರ, ಕೊಪ್ಪಳ ಜಿಲ್ಲೆಯ 3.19 ಲಕ್ಷ ಮನೆಗಳ ಪೈಕಿ, 3.07 ಲಕ್ಷ ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಹಾವೇರಿ ಜಿಲ್ಲೆಯ ಜಿಲ್ಲೆಯ 4.12 ಲಕ್ಷಗಳ ಮನೆಗಳ ಪೈಕಿ 3.95 ಲಕ್ಷ ಮನೆಗಳ ಸಮೀಕ್ಷೆ ಮುಕ್ತಾಯಗೊಂಡಿದೆ.

ಸೆ. 22ರಿಂದ ಅಕ್ಟೋಬರ್ 4ರವರೆಗೂ ಸಮೀಕ್ಷೆ ಗುರಿ ಸಾಧನೆಯಲ್ಲಿ ಹಾವೇರಿ ಮೊದಲ ಸ್ಥಾನದಲ್ಲಿತ್ತು. ಭಾನುವಾರ ಅತ್ಯಧಿಕ ಮನೆಗಳ ಸಮೀಕ್ಷೆ ಮಾಡುವ ಮೂಲಕ ಕೊಪ್ಪಳ ಜಿಲ್ಲೆ ಮೊದಲ ಸ್ಥಾನಕ್ಕೆ ಜಿಗಿದಿದೆ. ಅ.7ರವರೆಗೂ ಸಮೀಕ್ಷೆ ನಡೆಸಲು ಅವಕಾಶವಿದ್ದು, ಎರಡೂ ಜಿಲ್ಲೆಗಳಲ್ಲಿ ಸೋಮವಾರವೇ ಸಮೀಕ್ಷೆ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಗ್ಯಾರಂಟಿ ವಿಚಾರದಲ್ಲಿ ಕರ್ನಾಟಕದಿಂದ ಬಿಹಾರಕ್ಕೆ ಬಿಜೆಪಿಯ ಬದಲಾದ ನಿಲುವು

ಸಮೀಕ್ಷೆ ಮುಗಿಸಿದ ಸಾವಿರ ಶಿಕ್ಷಕರು

ಹಾವೇರಿ ಜಿಲ್ಲೆಯಲ್ಲಿ ನಿಯೋಜಿಸಿದ್ದ ಪ್ರಾಥಮಿಕ ಶಾಲೆಗಳ 3,777 ಶಿಕ್ಷಕರ ಪೈಕಿ, ಸಾವಿರ ಶಿಕ್ಷಕರು ತಮಗೆ ನಿಗದಿಪಡಿಸಿದ್ದ ಸಮೀಕ್ಷೆ ಪೂರ್ಣಗೊಳಿಸಿದ್ದಾರೆ.

‘ಶಿಕ್ಷಕ್ಷರಿಗೆ ತಲಾ 100ರಿಂದ 150 ಮನೆಗಳ ಮಾಹಿತಿ ಸಂಗ್ರಹಿಸುವ ಜವಾಬ್ದಾರಿ ವಹಿಸಲಾಗಿತ್ತು. ಸೆ. 22ರಿಂದ ಅ. 5ರ ಸಂಜೆ ವೇಳೆಗೆ ಶೇ 95.88ರಷ್ಟು ಸಮೀಕ್ಷೆ ಪೂರ್ಣಗೊಳಿಸಿದ್ದಾರೆ‘ ಎಂದು ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

‘ವಿದ್ಯುತ್ ಮೀಟರ್‌ಗಳಿಗೆ ಅಂಟಿಸಿದ್ದ ಸ್ಟಿಕ್ಕರ್‌ನ ಕ್ಯೂಆರ್‌ ಕೋಡ್ ಬಳಸಿ ಮನೆಗಳನ್ನು ಗುರುತಿಸಿದ್ದ ಶಿಕ್ಷಕರು, ನಿಗದಿತ 60 ಪ್ರಶ್ನೆಗಳಿಗೂ ಜನರಿಂದ ಉತ್ತರ ಪಡೆದು ಆ್ಯಪ್‌ನಲ್ಲಿ ನಿಖರವಾಗಿ ದಾಖಲಿಸಿದ್ದಾರೆ. ಆಗಾಗ ತಾಂತ್ರಿಕ ಸಮಸ್ಯೆ ಎದುರಾದರೂ, ತ್ವರಿತವಾಗಿ ಬಗೆಹರಿಸಲಾಗಿದೆ’ ಎಂದು ಹೇಳಿದರು.

‘ನಿತ್ಯ 33,275 ಮನೆಗಳ ಸಮೀಕ್ಷೆ ಮಾಡುವ ಗುರಿ ಇಟ್ಟುಕೊಳ್ಳಲಾಗಿತ್ತು. ಅಕ್ಟೋಬರ್ 5ರಂದು ಒಂದೇ ದಿನದಲ್ಲಿ 12,306 ಮನೆಗಳ ಸಮೀಕ್ಷೆ ಮಾಡಲಾಗಿದೆ’ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ರಾಜ್ಯ ಸರ್ಕಾರ ನಕ್ಸಲ್‌ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ 7 ಕೋಟಿ 12ಲಕ್ಷ ಬಿಡುಗಡೆ

ಕರ್ನಾಟಕ ರಾಜ್ಯದಲ್ಲಿ ನಕ್ಸಲರು ಶರಣಾದಾಗ ನಕ್ಸಲ್ ಮುಕ್ತ ರಾಜ್ಯ ಎಂದು ಬಿರುದು...

ಸಮಸಮಾಜವನ್ನು ಬಯಸದವರು ಸಮೀಕ್ಷೆ ವಿರೋಧಿಸುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ...

ವೀರಶೈವ-ಲಿಂಗಾಯತರು ಕೆಟ್ಟರೆ ರಾಜ್ಯವೇ ಕೆಡುತ್ತದೆ: ಸಚಿವ ಈಶ್ವರ ಖಂಡ್ರೆ

ವೀರಶೈವ -ಲಿಂಗಾಯತರನ್ನು ಬೇರೆ ಮಾಡಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ. ಇಬ್ಬರೂ ಒಂದೇ...

ಕಾಫ್‌ ಸಿರಪ್ ದುರಂತ | ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ: ದಿನೇಶ್‌ ಗುಂಡೂರಾವ್‌

ದೇಶದ ಬೇರೆ ರಾಜ್ಯಗಳಲ್ಲಿ ಕಾಫ್‌ ಸಿರಪ್ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ...

Download Eedina App Android / iOS

X