ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ; ಬಿಟ್ಟು ಹೋದ ಜಾತಿ ಕುರಿತು ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ

Date:

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಆದೇಶಾನುಸಾರ ಕೈಗೊಂಡಿರುವ ಕರ್ನಾಟಕ ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳು, ಇತರೆ ಜಾತಿಗಳು, ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಬಿಟ್ಟು ಹೋದ ಜಾತಿಗಳ ಕುರಿತು ಮಾಹಿತಿ ನೀಡಲು ಸೆಪ್ಟೆಂಬರ್‌ 1ರವರೆಗೆ ಅವಧಿ ವಿಸ್ತರಿಸಲಾಗಿದೆ.

- Advertisement -

ಈ ಹಿನ್ನೆಲೆಯಲ್ಲಿ, ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿ/ಉಪಜಾತಿಗಳ ಬಗ್ಗೆ ಸಾರ್ವಜನಿಕರ ಮಾಹಿತಿಗಾಗಿ ಆಗಸ್ಟ್‌ 22 ರಂದು ಪತ್ರಿಕೆಗಳಲ್ಲಿ ಪ್ರಕಟಣೆ ನೀಡಿ ಯಾವುದೇ ಜಾತಿ/ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ, ಅಂತಹ ಅಂಶಗಳ ಬಗ್ಗೆ ಸಲಹೆ, ಸೂಚನೆಗಳು ಇದ್ದಲ್ಲಿ, 7 ದಿನಗಳ ಒಳಗೆ ನೀಡಲು ಕೋರಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳು ಈ ಅವಧಿಯನ್ನು ವಿಸ್ತರಿಸಲು ಕೋರಿರುವ ಕಾರಣ, ಈ ಬಗ್ಗೆ ಸಲಹೆ/ಸೂಚನೆ ಮನವಿಗಳನ್ನು ನೀಡುವ ಅವಧಿಯನ್ನು ಸೆ.1ರ ಸಂಜೆ 5 ಗಂಟೆವರೆಗೆ ವಿಸ್ತರಿಸಲಾಗಿದೆ. ಸಂಗ್ರಹಿಸಲಾದ ಜಾತಿ/ಉಪಜಾತಿಗಳ ಪಟ್ಟಿಯನ್ನು ಸೆಪ್ಟೆಂಬ‌ರ್ ತಿಂಗಳಲ್ಲಿ ಪ್ರಾರಂಭವಾಗಲಿರುವ ಸಮೀಕ್ಷೆಗಾಗಿ ಮಾತ್ರ ಉಪಯೋಗಿಸಲಾಗುವುದು.

ಇದನ್ನೂ ಓದಿ: ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ಸಾರ್ವಜನಿಕರು ತಮ್ಮ ಸಲಹೆ/ಸೂಚನೆ/ ಮನವಿಗಳನ್ನು ಸದಸ್ಯ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ನಂ.16, ಡಿ.ದೇವರಾಜ ಅರಸು ಭವನ, ಮಿಲ್ಲರ್ಸ್ ಟ್ಯಾಂಕ್ ಬಂಡ್ ಪ್ರದೇಶ, ವಸಂತ ನಗರ,ಬೆಂಗಳೂರು ಅಥವಾ [email protected] ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದಾಗಿದೆ. ಹೆಚ್ಚಿನ‌ ವಿವರಗಳಿಗೆ ದೂ.ಸಂಖ್ಯೆ 080-29506668 ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...