ಸೋಲಿಡಾರಿಟಿ ಪ್ರಯತ್ನಕ್ಕೆ ಫಲ: ‘ಎಲಿವೇಟ್ ಮೈನಾರಿಟೀಸ್’ ಯೋಜನೆಗೆ ಸರ್ಕಾರದಿಂದ 5 ಕೋಟಿ ಹೆಚ್ಚುವರಿ ಅನುದಾನ

Date:

ಸೋಲಿಡಾರಿಟಿ ಯೂತ್‌ ಮೂವ್‌ಮೆಂಟ್‌ ಕರ್ನಾಟಕ ಘಟಕದ ನಿಯೋಗವು ರಾಜ್ಯ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ(ಕೆಎಂಡಿಸಿ) ಮೂಲಕ ನವೋದ್ಯಮಗಳನ್ನು ಉತ್ತೇಜಿಸಲು 2025-26ನೇ ಸಾಲಿನ ಬಜೆಟ್‌ ವೇಳೆಯಲ್ಲಿ ಮೀಸಲಿಡಲಾದ ‘ಎಲಿವೇಟ್ ಮೈನಾರಿಟೀಸ್-2025’ಯೋಜನೆಯ ಅನುದಾನವನ್ನು ಹೆಚ್ಚಿಸುವಂತೆ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿತ್ತು.

- Advertisement -

ಈ ಮನವಿಯನ್ನು ಪುರಸ್ಕರಿಸಿರುವ ರಾಜ್ಯ ಸರ್ಕಾರವು ಯೋಜನೆಗೆ 5 ಕೋಟಿ ಹೆಚ್ಚುವರಿ ಅನುದಾನ ಮಂಜೂರು ಮಾಡಿ, ಆದೇಶ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ಕೆಎಂಡಿಸಿ)ದ ವತಿಯಿಂದ ನವೋದ್ಯಮ ಕಂಪನಿಗಳಿಗೆ ಉತ್ತೇಜನ ನೀಡಲು 2025-26ನೇ ಸಾಲಿನ ಆಯವ್ಯಯದಲ್ಲಿ ‘ಎಲಿವೇಟ್ ಮೈನಾರಿಟೀಸ್-2025’ ಯೋಜನೆಯಡಿಯಲ್ಲಿ ಈ ಹಿಂದೆ 5 ಕೋಟಿ ಹಣವನ್ನು ಮೀಸಲಿಟ್ಟಿತ್ತು. ಆದರೆ, ಈ ಯೋಜನೆಯಡಿಯಲ್ಲಿ ಹೆಚ್ಚಿನ ಅರ್ಜಿಗಳು ಸ್ವೀಕೃತವಾಗಿದ್ದು, ಸರ್ಕಾರದಿಂದ ಹಂಚಿಕೆಯಾಗಿರುವ ಅನುದಾನ ಕಡಿಮೆಯಾಗಿದೆ. ಹಾಗಾಗಿ, ಹೆಚ್ಚುವರಿಯಾಗಿ ರೂ.5 ಕೋಟಿಗಳ ಅನುದಾನವನ್ನು ಹೆಚ್ಚಿಸುವಂತೆ ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕವು ಮನವಿ ಮಾಡಿತ್ತು.

ಈ ಆಗ್ರಹದ ಭಾಗವಾಗಿ ಸಚಿವರಾದ ಜಮೀರ್ ಅಹ್ಮದ್ ಖಾನ್, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಿವಾಜಿ ನಗರ ಕ್ಷೇತ್ರದ ಶಾಸಕ ರಿಝ್ವಾನ್ ಅರ್ಶದ್, ಸಚಿವ ರಹೀಂ ಖಾನ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಮೆಹರೋಝ್ ಖಾನ್, ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಬಾನು, ಶಾಸಕರಾದ ಎನ್ ಎ ಹ್ಯಾರಿಸ್, ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ಸೇರಿದಂತೆ ಹಲವು ರಾಜಕೀಯ ಮುಖಂಡರನ್ನು ಸೋಲಿಡಾರಿಟಿ ಯೂತ್ ಮೂವೆಂಟ್ ನಿಯೋಗವು ಭೇಟಿ ಮಾಡಿ, ಈ ಬಗ್ಗೆ ಸರ್ಕಾರದ ಗಮನ ಸೆಳೆಯುವಂತೆ ಒತ್ತಾಯಿಸಿತ್ತು.

utk 3

ಈ ಮನವಿಯನ್ನು ಪುರಸ್ಕರಿಸಿರುವ ರಾಜ್ಯ ಸರ್ಕಾರವು ಯೋಜನೆಗೆ 5 ಕೋಟಿ ಹೆಚ್ಚುವರಿ ಅನುದಾನ ಮಂಜೂರು ಮಾಡಿ, ಆದೇಶ ಹೊರಡಿಸಿದೆ.

ಈ ಬಗ್ಗೆ ಮುಸ್ಲಿಂ ಸಮುದಾಯದ ಎಲ್ಲ ರಾಜಕೀಯ ಮುಖಂಡರಿಗೆ ಧನ್ಯವಾದ ಸಲ್ಲಿಸಿರುವ ಸೋಲಿಡಾರಿಟಿ ಯೂತ್‌ ಮೂವ್‌ಮೆಂಟ್‌ ಕರ್ನಾಟಕ ರಾಜ್ಯಾಧ್ಯಕ್ಷರಾದ ಡಾ. ನಸೀಮ್ ಅಹ್ಮದ್, “ಎಲಿವೇಟ್ ಮೈನಾರಿಟೀಸ್-2025’ ಯೋಜನೆಗಾಗಿ ಸರ್ಕಾರವು 5 ಕೋಟಿ ನೀಡಿತ್ತು. ಆದರೆ, ಹೆಚ್ಚು ಅರ್ಜಿಗಳು ಬಂದಿದ್ದವು. ಈ ಬಗ್ಗೆ ಸೋಲಿಡಾರಿಟಿಗೂ ಮಾಹಿತಿ ತಿಳಿದ ತಕ್ಷಣ ಸಚಿವರು ಸೇರಿದಂತೆ ಮುಸ್ಲಿಂ ಸಮುದಾಯದ ಎಲ್ಲ ರಾಜಕೀಯ ಮುಖಂಡರನ್ನು ಭೇಟಿ ಮಾಡಿ ಒತ್ತಾಯಿದ್ದೆವು. ಈ ಮನವಿಯನ್ನು ರಾಜ್ಯ ಸರ್ಕಾರವು ಪುರಸ್ಕರಿಸಿ, 5 ಕೋಟಿ ಹೆಚ್ಚುವರಿ ಅನುದಾನ ಒದಗಿಸಿದೆ. ಸಹಕಾರ ನೀಡಿದ ಎಲ್ಲ ಮುಖಂಡರಿಗೆ ಧನ್ಯವಾದ ಸಲ್ಲಿಸುತ್ತೇವೆ” ಎಂದು ತಿಳಿಸಿದ್ದಾರೆ.

mla

“ಹೆಚ್ಚುವರಿ ಅನುದಾನದಿಂದ ಅಲ್ಪಸಂಖ್ಯಾತ ಸಮುದಾಯದ ಹೊಸ ಉದ್ಯಮಗಳು ಬೆಳೆದು, ರಾಜ್ಯದಲ್ಲಿ ಉದ್ಯೋಗಾವಕಾಶಗಳು ಹೆಚ್ಚಾಗುವ ಸಾಧ್ಯತೆಯಿದೆ. ಇದರ ಫಲಶೃತಿಯಾಗಿ ರಾಜ್ಯದಲ್ಲೂ ಹೆಚ್ಚು ಅಭಿವೃದ್ಧಿಯಾಗುವ ನಿರೀಕ್ಷೆ ಇದೆ. ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಯ ಜೊತೆಗೆ ರಾಜ್ಯದ ಯುವಕ-ಯುವತಿಯರ ನವೋದ್ಯಮಗಳನ್ನು ಉತ್ತೇಜಿಸಲು ಇನ್ನಷ್ಟು ಪೂರಕವಾಗಲಿದೆ” ಎಂದು ಸೋಲಿಡಾರಿಟಿ ಯೂತ್ ಮೂವೆಂಟ್ ರಾಜ್ಯಾಧ್ಯಕ್ಷರಾದ ಡಾ. ನಸೀಮ್ ಅಹ್ಮದ್ ತಿಳಿಸಿದ್ದಾರೆ.

44 2
Capture 38
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | SIR ವಿರೋಧ: ಚುನಾವಣಾ ಆಯೋಗ ಅಕ್ರಮವಾಗಿ ಕಾರ್ಯನಿರ್ವಹಿಸಿದೆ; ನಟ ಪ್ರಕಾಶ್ ರಾಜ್ 

SIR ವಿರೋಧಿ ಒಕ್ಕೂಟ, ನಾಗರೀಕ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳಿಂದ ರಾಜ್ಯ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ...

Bhalki Ground Report | ಮುಸ್ಲಿಮರ ಮತ ಹಕ್ಕಿಗೆ ಕನ್ನ: ಬಗೆದಷ್ಟು ಬಯಲಾಗ್ತಿದೆ ‘ಫಾರ್ಮ್-7’ರ ಸಂಚು?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರತಿನಿಧಿಸುವ...