ಕರ್ನಾಟಕದಲ್ಲಿ ಯುವ ಆಯೋಗ ಸ್ಥಾಪಿಸಿ: ಸರ್ಕಾರಕ್ಕೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಆಗ್ರಹ

Date:

ರಾಜ್ಯದಲ್ಲಿ ಯುವ ಆಯೋಗವನ್ನು ತಕ್ಷಣ ಸ್ಥಾಪಿಸಬೇಕು ಎಂದು ಕರ್ನಾಟಕ ಸರ್ಕಾರವನ್ನು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ರಾಜ್ಯಾಧ್ಯಕ್ಷರಾದ ಡಾ. ನಸೀಮ್ ಅಹ್ಮದ್ ಬಲವಾಗಿ ಆಗ್ರಹಿಸಿದ್ದಾರೆ.

- Advertisement -

ಯುವಕರಿಗೆ ಎದುರಾಗುತ್ತಿರುವ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ಮಾನಸಿಕ ಆರೋಗ್ಯ ಮತ್ತು ಉದ್ಯೋಗ ಸಂಬಂಧಿತ ಸಮಸ್ಯೆಗಳಿಗೆ ಪರಿಣಾಮಕಾರಿ ಹಾಗೂ ಸಂಸ್ಥಾತ್ಮಕ ಪರಿಹಾರ ಕಂಡುಕೊಳ್ಳಲು ಆಯೋಗದಿಂದ ಸಾಧ್ಯವಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಡಾ. ನಸೀಮ್ ಅಹ್ಮದ್ ಅವರು, ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೇ ಯುವ ಆಯೋಗಗಳು ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದು ತಿಳಿಸಿದ್ದಾರೆ.

ಕೇರಳ, ಅಸ್ಸಾಂ, ಮಿಜೋರಾಂ ಮತ್ತು ಬಿಹಾರ ರಾಜ್ಯಗಳ ಅನುಭವಗಳು, ಯುವ ಆಯೋಗಗಳು ಯುವಕರ ಹಕ್ಕುಗಳ ರಕ್ಷಣೆ, ನೀತಿ ರೂಪಣೆ, ಕೌಶಲ್ಯ ಅಭಿವೃದ್ಧಿ, ಉದ್ಯೋಗ, ಮಾದಕ ವ್ಯಸನ ವಿರೋಧಿ ಕ್ರಮಗಳು ಮತ್ತು ಮಾನಸಿಕ ಆರೋಗ್ಯದಂತಹ ಪ್ರಮುಖ ಕ್ಷೇತ್ರಗಳಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂಬುದನ್ನು ಸ್ಪಷ್ಟಪಡಿಸುತ್ತೇವೆ. ಇಂತಹ ಪರಿಸ್ಥಿತಿಯಲ್ಲಿ ಕರ್ನಾಟಕದಲ್ಲಿ ಇನ್ನೂ ಯುವ ಆಯೋಗ ಸ್ಥಾಪನೆಯಾಗದೆ ಇರುವುದು ಅತ್ಯಂತ ವಿಷಾದಕರ ಹಾಗೂ ಯುವಕರ ಮೇಲಿನ ಅನ್ಯಾಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪ್ರಸ್ತುತ ಸರ್ಕಾರವು 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯದಲ್ಲಿ ಯುವ ಆಯೋಗ ಸ್ಥಾಪಿಸುವುದಾಗಿ ಘೋಷಣೆ ಮಾಡಿತ್ತು ಎಂಬುದನ್ನು ಅವರು ನೆನಪಿಸಿದರು.

ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಸಂಘಟನೆಯ ಬೇಡಿಕೆಯೇನೆಂದರೆ, ಸರ್ಕಾರವು ತನ್ನ ಚುನಾವಣಾ ಭರವಸೆಯನ್ನು ಕಾರ್ಯರೂಪಕ್ಕೆ ತಂದು ತಕ್ಷಣ ಯುವ ಆಯೋಗ ಸ್ಥಾಪನೆಯ ಅಧಿಸೂಚನೆಯನ್ನು ಹೊರಡಿಸಬೇಕು. ಕರ್ನಾಟಕದಲ್ಲಿ ಎರಡು ಕೋಟಿಗೂ ಅಧಿಕ ಯುವ ಜನಸಂಖ್ಯೆ ಇದೆ. ಇಂದು ಯುವಕರು ನಿರುದ್ಯೋಗ, ಶಿಕ್ಷಣದಲ್ಲಿನ ಅಸಮಾನತೆ, ಮಾದಕ ವಸ್ತುಗಳ ಹೆಚ್ಚುತ್ತಿರುವ ಬಳಕೆ, ಮಾನಸಿಕ ಒತ್ತಡ, ಆತ್ಮಹತ್ಯೆಗಳ ಆತಂಕಕಾರಿ ಪ್ರಕರಣಗಳು ಮತ್ತು ರಾಜಕೀಯ ಹಾಗೂ ಸಾಮಾಜಿಕ ಪ್ರತಿನಿಧಿತ್ವದ ಕೊರತೆ ಮುಂತಾದ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಯುವಜನಸಂಖ್ಯೆಯ ಪ್ರಮಾಣ ಮತ್ತು ಹೆಚ್ಚುತ್ತಿರುವ ಮಾನಸಿಕ ಆರೋಗ್ಯ ಸಂಕಷ್ಟವನ್ನು ಗಮನಿಸಿದರೆ, ಇನ್ನಷ್ಟು ವಿಳಂಬ ಅಸ್ವೀಕಾರಾರ್ಹ ಎಂದು ಅವರು ಹೇಳಿದರು.

ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕಾಗಿ ಸಬಲ, ಸ್ವಾಯತ್ತ ಹಾಗೂ ಜವಾಬ್ದಾರಿಯುತ ಯುವ ಆಯೋಗ ಅನಿವಾರ್ಯವಾಗಿದೆ. ಇದು ರಾಜ್ಯದ ಯುವ ನೀತಿಯ ಉದ್ದೇಶಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು.
ಅವರು ಸ್ಪಷ್ಟಪಡಿಸಿದಂತೆ, ಪ್ರಸ್ತಾವಿತ ಯುವ ಆಯೋಗಕ್ಕೆ ಕೆಳಗಿನ ಅಧಿಕಾರಗಳು ಮತ್ತು ಜವಾಬ್ದಾರಿಗಳನ್ನು ನೀಡಬೇಕು:
ಯುವಕರ ಹಕ್ಕುಗಳ ರಕ್ಷಣೆ ಹಾಗೂ ಉಲ್ಲಂಘನೆಗಳ ತನಿಖೆ
ಶಿಕ್ಷಣ, ಉದ್ಯೋಗ, ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಕುರಿತು ಶಿಫಾರಸುಗಳು
ಮಾನಸಿಕ ಆರೋಗ್ಯ, ವ್ಯಸನ ವಿರೋಧಿ ಕ್ರಮಗಳು ಮತ್ತು ಸಾಮಾಜಿಕ ಅನಿಷ್ಟಗಳ ವಿರುದ್ಧ ಪರಿಣಾಮಕಾರಿ ಕಾರ್ಯತಂತ್ರ
ಯುವಕರ ದೂರುಗಳ ಪರಿಹಾರಕ್ಕೆ ವ್ಯವಸ್ಥಿತ ಮತ್ತು ಪಾರದರ್ಶಕ ವ್ಯವಸ್ಥೆ
ಯುವಕರ ರಾಜಕೀಯ ಮತ್ತು ಸಾಮಾಜಿಕ ನಾಯಕತ್ವವನ್ನು ಉತ್ತೇಜಿಸುವ ಕ್ರಮಗಳು
ರಾಜ್ಯಮಟ್ಟದ ಆಯ್ಕೆಯಾದ ಸಂಸ್ಥೆಗಳು (ವಿಧಾನಸಭೆ/ವಿಧಾನಪರಿಷತ್) ಹಾಗೂ ವಿವಿಧ ನಾಮನಿರ್ದೇಶಿತ ಸಂಸ್ಥೆಗಳಲ್ಲಿ ಯುವಕರ ಪ್ರತಿನಿಧಿತ್ವವನ್ನು ಖಚಿತಪಡಿಸುವುದು; ಜೊತೆಗೆ ಕಾರ್ಪೋರೇಷನ್‌ಗಳು, ಬೋರ್ಡ್‌ಗಳು, ಸಮಿತಿಗಳು ಮತ್ತು ಇತರೆ ಸರ್ಕಾರಿ ಸಂಸ್ಥೆಗಳಲ್ಲಿ ಸಮರ್ಪಕ ಯುವ ಪ್ರತಿನಿಧಿತ್ವಕ್ಕಾಗಿ ಸ್ಪಷ್ಟ ಶಿಫಾರಸುಗಳು ಮತ್ತು ಕಾರ್ಯವಿಧಾನ ರೂಪಿಸುವುದು
ಯುವ ಆಯೋಗವು ಯುವಕರ ಸಮಸ್ಯೆಗಳ ಕುರಿತು ಸರ್ಕಾರದ ಜವಾಬ್ದಾರಿತ್ವವನ್ನೂ ಖಚಿತಪಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಡಾ. ನಸೀಮ್ ಅಹ್ಮದ್ ಅವರು, ಈ ಬೇಡಿಕೆಯನ್ನು ಬಲವಾಗಿ ಮುಂದುವರಿಸಲು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಘೋಷಿಸಿದರು. ಈ ನಿಟ್ಟಿನಲ್ಲಿ ಸಂಘಟನೆಯು ರಾಜ್ಯಾದ್ಯಂತ ಸಮಾನ ಮನಸ್ಕ ಯುವ ಸಂಘಟನೆಗಳೊಂದಿಗೆ ಸಭೆಗಳು ನಡೆಸಲಿದೆ. ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಅವರಿಗೆ ಉದ್ದೇಶಿಸಿ ಮನವಿ ಪತ್ರಗಳನ್ನು ಕರ್ನಾಟಕದಾದ್ಯಂತ ಸಲ್ಲಿಸಲಿದೆ. ಸಂಘಟನೆಯ ರಾಜ್ಯ ತಂಡವು ಯುವ ರಾಜಕಾರಣಿಗಳು, ಪಂಡಿತರು ಮತ್ತು ಗಣ್ಯ ವ್ಯಕ್ತಿಗಳೊಂದಿಗೆ ಭೇಟಿ ನಡೆಸಿ, ಯುವ ಆಯೋಗದ ಲಾಭಗಳು ಮತ್ತು ಅಗತ್ಯತೆಯ ಕುರಿತು ವಿವರವಾದ ಚರ್ಚೆ ನಡೆಸಲಿದೆ
ಸಾರ್ವಜನಿಕ ಹಾಗೂ ಪ್ರಜಾಸತ್ತಾತ್ಮಕ ಚೌಕಟ್ಟಿನೊಳಗೆ ಈ ಬೇಡಿಕೆಯನ್ನು ರಾಜ್ಯಮಟ್ಟದ ಬಲಿಷ್ಠ ಚಳವಳಿಯಾಗಿ ರೂಪಿಸಲಿದೆ. ಮುಖ್ಯಮಂತ್ರಿ, ಸಚಿವ ಸಂಪುಟದ ಸದಸ್ಯರು ಮತ್ತು ಶಾಸಕರು ಯುವಕರ ಭವಿಷ್ಯವನ್ನು ಸುರಕ್ಷಿತಗೊಳಿಸಿ ರಾಜ್ಯದ ಸಮಗ್ರ ಅಭಿವೃದ್ಧಿಯನ್ನು ಖಚಿತಪಡಿಸಲು ಯುವ ಆಯೋಗ ಸ್ಥಾಪನೆಯ ತುರ್ತು ಘೋಷಣೆ ಮಾಡಬೇಕು ಎಂದು ಮನವಿ ಮಾಡಿದರು.

ಯುವ ಆಯೋಗವು ಯುವಕರಿಗೆ ನೀಡುವ ಸೌಲಭ್ಯವಲ್ಲ, ಅವರ ಸಂವಿಧಾನಾತ್ಮಕ ಹಕ್ಕು ಎಂದು ಡಾ. ನಸೀಮ್ ಅಹ್ಮದ್ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...