ಲಿಂಗಾಯತರು ಹಿಂದೂಗಳಲ್ಲ ಎಂಬ ಕೆಲವರ ಹೇಳಿಕೆ ರಾಜಕೀಯ ಪ್ರೇರಿತ: ಬಸನಗೌಡ ಪಾಟೀಲ ಯತ್ನಾಳ್‌

Date:

ಲಿಂಗಾಯತರು ಹಿಂದೂಗಳಲ್ಲ ಎಂಬ ಕೆಲವರ ಹೇಳಿಕೆ ರಾಜಕೀಯ ಪ್ರೇರಿತವಾಗಿದ್ದು, ಹಿಂದೆ ಪ್ರತ್ಯೇಕ ಧರ್ಮದ ರೂವಾರಿಯಾಗಿದ್ದ ಸಿದ್ದರಾಮಯ್ಯನವರ ಯೋಜನೆಯ ಮುಂದುವರೆದ ಭಾಗವಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಆರೋಪಿಸಿದ್ದಾರೆ.

- Advertisement -

ಜಾತಿ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದು ನಮೂದು ಮಾಡುವ ವಿಚಾರ ಅಖಿಲ ಭಾರತ ವೀರಶೈವ ಮಹಾಸಭಾದ 24 ನೇ ಮಹಾಧಿವೇಶನದಲ್ಲಾದ ನಿರ್ಣಯ, ಇದರೊಂದಿಗೆ ಲಿಂಗಾಯತರು ಹಿಂದೂಗಳಲ್ಲಾ ಎಂಬ ಕೆಲ ನಾಯಕರ ಹೇಳಿಕೆಗಳ ಬಗ್ಗೆ ಪರ – ವಿರೋಧ ಚರ್ಚೆಗಳು ನಡೆಯುತ್ತಿರುವ ಹೊತ್ತಿನಲ್ಲಿ ಈ ಬಗ್ಗೆ ಯತ್ನಾಳ್ ಅವರು ಎಕ್ಸ್‌ ನಲ್ಲಿ ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

“ಹಿಂದುತ್ವ ಈ ನೆಲದ ಆತ್ಮ, ಬಸವಣ್ಣನವರು ಆರಾಧಿಸಿದ ಲಿಂಗವೂ ಈಶ್ವರನ ಅಂಶವೇ, ಹಿಂದುತ್ವ ಬದುಕುವ ದಾರಿ. ಜಗತ್ತಿನ ಯಾವುದಾದರೂ ಧರ್ಮ ಇನ್ನೊಬ್ಬರ ಮೇಲೆ ದಾಳಿ ಮಾಡದೆ, ಎಲ್ಲರನ್ನು ಗೌರವಿಸಿರುವುದು ಹಿಂದುತ್ವ ಮಾತ್ರ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಂಪೇಗೌಡ ವಿಮಾನನಿಲ್ದಾಣ ಸೀಮೆ- ರೈತರ ಕೊರಳ ಬಿಗಿದಿರುವ ಭೂಮಾಫಿಯಾ, ಕುಣಿಕೆ ಕಳಚಲಿ ಕಾಂಗ್ರೆಸ್ ಸರ್ಕಾರ

“ಲಿಂಗಾಯತ, ವೀರಶೈವ ಹಿಂದುತ್ವದ ಭಾಗವೇ ಹೊರತು ಬೇರೆಯಲ್ಲ. 2018ರ ವಿಧಾನಸಭೆ ಚುನಾವಣೆಗಾಗಿ ಸಿದ್ದರಾಮಯ್ಯನವರು ಈ ಗೊಂದಲವನ್ನು ಸೃಷ್ಟಿ ಮಾಡಿದ್ದರು, ಈಗ ಲೋಕಸಭೆ ಚುನಾವಣೆಗೆ ಬೇರೆ ಯಾವುದೇ ಚರ್ಚಾ ವಿಷಯವಿಲ್ಲದೆ ಈ ಪ್ರತ್ಯೇಕ ಧರ್ಮದ ಚರ್ಚೆ ಆರಂಭಿಸಿದ್ದಾರೆ” ಎಂದು ಹೇಳಿದ್ದಾರೆ.

“ಪಂಚಪೀಠಗಳು, ಬಸವಣ್ಣನವರ ಅನುಯಾಯಿಗಳು ಹಾಗು ಶರಣರ ತತ್ವಗಳು ಎಲ್ಲವೂ ಹಿಂದೂ ಸಂಸ್ಕೃತಿಯ ಭಾಗವೇ, ಅಲ್ಲಿಯೂ ಶಿವ, ಇಲ್ಲಿಯೂ ಶಿವನೇ! ‘ವೀರಶೈವ ಲಿಂಗಾಯತ’ ಹಿಂದು ಸಂಸ್ಕೃತಿಯ ಭಾಗವಾಗಿದೆ. ಹರ ಹರ ಮಹದೇವ್!” ಎಂದು ಬರೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪದ್ಮಭೂಷಣ ಸಣ್ಣ ವಿಷಯ, ಅವರನ್ನೇ ಪಿಎಂ ಮಾಡಿ: ಗ್ಯಾನೇಶ್‌ರನ್ನು ಹೊಗಳಿಸಿ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಪಶ್ಚಿಮ...

‘ಮತದಾನದ ಹಕ್ಕು ಕಸಿಯಲು ಯಾರಿಗೂ ಅಧಿಕಾರವಿಲ್ಲ’: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

"ಈ ದೇಶದಲ್ಲಿ ಹುಟ್ಟಿರುವ ಯಾವುದೇ ನಾಗರಿಕನ ಮತದಾನದ ಹಕ್ಕನ್ನು ಕಸಿಯಲು ಯಾರಿಗೂ...

ಬಿಡದಿ ರೈತರ ಮೇಲೆ ಪೊಲೀಸ್ ದೌರ್ಜನ್ಯ: ಸಂಯುಕ್ತ ಹೋರಾಟ ಕರ್ನಾಟಕ ತೀವ್ರ ಖಂಡನೆ

ಕಳೆದ ಐದು ದಿನಗಳಿಂದ ಬೈರಮಂಗಲ ವೃತ್ತದಲ್ಲಿ ರಸ್ತೆ ತಡೆ ಹಾಗೂ ಸರಣಿ...