ಸೋನಂ ವಾಂಗ್ಚುಕ್, ವಿದ್ಯಾರ್ಥಿಗಳ ಪ್ರಾಣ ಉಳಿಸಿ: ಕೇಂದ್ರಕ್ಕೆ ‘ಕರ್ನಾಟಕ ನಾಗರಿಕ ಸಮಾಜ’ದ ತುರ್ತು ಆಗ್ರಹ

Date:

ಕಳೆದ 15 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಹಾಗೂ ಹತ್ತಾರು ವಿದ್ಯಾರ್ಥಿಗಳ ನ್ಯಾಯಯುತ ಹಕ್ಕೊತ್ತಾಯಗಳನ್ನು ಕೂಡಲೇ ಈಡೇರಿಸಿ, ಅವರ ಪ್ರಾಣ ರಕ್ಷಿಸುವಂತೆ ಕೇಂದ್ರ ಸರ್ಕಾರವನ್ನು ‘ಕರ್ನಾಟಕದ ನಾಗರಿಕ ಸಮಾಜ’ ಒತ್ತಾಯಿಸಿದೆ.

- Advertisement -

ಕಳೆದ ಹದಿನೈದು ದಿನಗಳಿಂದ ನಿರಂತರವಾಗಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹದಿಂದಾಗಿ ವಾಂಗ್ಚುಕ್ ಹಾಗೂ ವಿದ್ಯಾರ್ಥಿಗಳ ಆರೋಗ್ಯ ತೀವ್ರವಾಗಿ ಹದಗೆಟ್ಟಿದೆ. ಅವರ ಪ್ರಾಣಕ್ಕೆ ಅಪಾಯ ಎದುರಾಗುವಂತಹ ಗಂಭೀರ ಸ್ಥಿತಿ ನಿರ್ಮಾಣವಾಗಿದ್ದು, ತಕ್ಷಣವೇ ಅವರ ಜೀವ ರಕ್ಷಣೆ ಮಾಡಬೇಕಾದುದು ಸರ್ಕಾರ ಹಾಗೂ ನಾಗರಿಕ ಸಮಾಜದ ಆದ್ಯ ಕರ್ತವ್ಯವಾಗಿದೆ ಎಂದು ನಾಗರಿಕ ಸಮಾಜದ ಸದಸ್ಯರು ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಉಪವಾಸ ನಿರತ ಸತ್ಯಾಗ್ರಹಿಗಳು ಹಾಗೂ ದೇಶದಾದ್ಯಂತ ಹೋರಾಡುತ್ತಿರುವ ವಿದ್ಯಾರ್ಥಿಗಳು ಮುಂದಿಟ್ಟಿರುವ ಹಕ್ಕೊತ್ತಾಯಗಳು ಅತ್ಯಂತ ನ್ಯಾಯಯುತವಾಗಿವೆ. ದೇಶದ ವಿದ್ಯಾರ್ಥಿಗಳು ಹಾಗೂ ಯುವಜನರ ಭವಿಷ್ಯದ ಹಿತದೃಷ್ಟಿಯಿಂದ ಈ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಅತ್ಯಗತ್ಯವಾಗಿ ಪರಿಗಣಿಸಲೇಬೇಕಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಜನಪರ ಹಾಗೂ ದೇಶಪರ ಹಕ್ಕೊತ್ತಾಯಗಳ ಈಡೇರಿಕೆಗಾಗಿ ನಡೆಯುತ್ತಿರುವ ಇಂತಹ ಪ್ರತಿಭಟನೆ ಮತ್ತು ಸತ್ಯಾಗ್ರಹಗಳ ಬಗ್ಗೆ ಆಳುವ ಸರ್ಕಾರಗಳು ತೋರುತ್ತಿರುವ ಅಸಡ್ಡೆ ಮತ್ತು ನಿರ್ಲಕ್ಷ್ಯ ಖಂಡನೀಯ. ಇಂತಹ ಶಾಂತಿಯುತ ಹೋರಾಟಗಳನ್ನು ದಮನಿಸಲು ಪ್ರಯತ್ನಿಸುತ್ತಿರುವುದು ಕೇವಲ ಪ್ರಜಾಪ್ರಭುತ್ವಕ್ಕೆ ಮಾರಕವಾಗುವುದಲ್ಲದೆ, ದೇಶದ ಏಕತೆ ಹಾಗೂ ಸಮಗ್ರತೆಗೂ ಧಕ್ಕೆ ತರುವಂತಹ ಅಪಾಯಕಾರಿ ಪರಿಣಾಮಗಳನ್ನು ಬೀರಲಿದೆ ಎಂದು ನಾಗರಿಕ ಸಮಾಜದ ಸದಸ್ಯರು ಕಳವಳ ವ್ಯಕ್ತಪಡಿಸಿದ್ದಾರೆ.

ದೇಶದಾದ್ಯಂತ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿ ಹಾಗೂ ಯುವಜನ ಸಮೂಹದ ನ್ಯಾಯಯುತ ಬೇಡಿಕೆಗಳಿಗೆ ಕರ್ನಾಟಕದ ನಾಗರಿಕ ಸಮಾಜ ತನ್ನ ಸಂಪೂರ್ಣ ಬೆಂಬಲ ಸೂಚಿಸಿದೆ. ಒಕ್ಕೂಟ ಸರ್ಕಾರವು ತಕ್ಷಣವೇ ಮಧ್ಯಪ್ರವೇಶಿಸಿ, ಹಠಮಾರಿ ಧೋರಣೆ ಬಿಟ್ಟು ಸತ್ಯಾಗ್ರಹಿಗಳ ಬೇಡಿಕೆಗಳನ್ನು ಮಾನ್ಯ ಮಾಡುವ ಮೂಲಕ ಅವರ ಜೀವ ರಕ್ಷಿಸಬೇಕು ಎಂದು ಆಗ್ರಹಿಸಲಾಗಿದೆ.

ಈ ಬಗ್ಗೆ ಸಾರ್ವಜನಿಕರ ಬೆಂಬಲಕ್ಕಾಗಿ ‘ಕರ್ನಾಟಕದ ನಾಗರಿಕ ಸಮಾಜ’ ಆನ್‌ಲೈನ್‌ ಅಭಿಯಾನ ಕೈಗೊಂಡಿದ್ದು, ಅಭಿಯಾನವನ್ನು ಬೆಂಬಲಿಸುವವರು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ:

https://docs.google.com/forms/d/e/1FAIpQLScPiJffWfRj2ZgazBYDtZCbgaW7q_X3rHDnGDSH_7WJwTTWNA/viewform

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...