​ಸೋನಿಯಾ ಗಾಂಧಿ ಕೇವಲ ಕಾಂಗ್ರೆಸ್ ನಾಯಕಿಯಲ್ಲ; ಪ್ರಜಾಪ್ರಭುತ್ವ, ಬಡವರ ಹಿತಕ್ಕಾಗಿ ಬದುಕನ್ನೇ ಮುಡಿಪಾಗಿಟ್ಟ ತ್ಯಾಗಮೂರ್ತಿ: ಬಿ ಕೆ ಹರಿಪ್ರಸಾದ್

Date:

“ಸೋನಿಯಾ ಗಾಂಧಿ ಅವರು ಕೇವಲ ಕಾಂಗ್ರೆಸ್ ಪಕ್ಷದ ನಾಯಕಿಯಲ್ಲ, ಈ ದೇಶದ ಏಕತೆ, ಸಮಗ್ರತೆ, ಪ್ರಜಾಪ್ರಭುತ್ವ, ಬಡವರು ಹಾಗೂ ಸಮಾಜದ ದುರ್ಬಲ ವರ್ಗಗಳ ಹಕ್ಕುಗಳ ರಕ್ಷಣೆಗಾಗಿ ತಮ್ಮ ಸಾರ್ವಜನಿಕ ಜೀವನವನ್ನೇ ಮುಡಿಪಾಗಿಟ್ಟ ತ್ಯಾಗಮೂರ್ತಿ. ಅಧಿಕಾರಕ್ಕಿಂತ ದೇಶದ ಹಿತವೇ ಮುಖ್ಯ ಎಂಬುದನ್ನು ತಮ್ಮ ನಡೆನುಡಿಗಳ ಮೂಲಕ ಸಾಬೀತುಪಡಿಸಿದ ಮಹಾನ್ ನಾಯಕಿ” ಎಂದು ಕೆಪಿಸಿಸಿ ಅಧ್ಯಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಬಣ್ಣಿಸಿದರು.

- Advertisement -

​ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆತ್ಮಕಥನ ‘Belonging: A Journey of Love’ (ಬಿಲಾಂಗಿಂಗ್: ಎ ಜರ್ನಿ ಆಫ್ ಲವ್) ಕೃತಿ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. ಸೋನಿಯಾ ಗಾಂಧಿ ಅವರೊಂದಿಗೆ ಸುಮಾರು ಎರಡು ದಶಕಗಳ ಕಾಲ ನಿಕಟವಾಗಿ ಕೆಲಸ ಮಾಡಿದ ಸಂದರ್ಭಗಳು, ಪಕ್ಷ ಸಂಘಟನೆಯಲ್ಲಿ ಅವರ ಪಾತ್ರ, ಮಾನವೀಯ ಕಾಳಜಿ ಹಾಗೂ ರಾಜಕೀಯ ತ್ಯಾಗದ ಅಪರೂಪದ ಘಟನೆಗಳನ್ನು ಅವರು ಭಾವುಕವಾಗಿ ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನ್ಯಾಯಾಂಗದ ಘನತೆ, ನ್ಯಾಯಾಧೀಶರ ನಿಷ್ಪಕ್ಷಪಾತತೆ ಹಾಗೂ ಜನಸಾಮಾನ್ಯರಿಗೆ ನ್ಯಾಯಾಂಗದ ಮೇಲಿರುವ ವಿಶ್ವಾಸದ ಕುರಿತು ಮಹತ್ವದ ಚರ್ಚೆಗೆ...

“1996, 1998 ಹಾಗೂ 1999ರ ಲೋಕಸಭಾ ಚುನಾವಣೆಗಳ ಕಾಲಘಟ್ಟದಲ್ಲಿ ಕಾಂಗ್ರೆಸ್ ಪಕ್ಷ ತೀವ್ರ ಸಂಕಷ್ಟದಲ್ಲಿದ್ದಾಗ ಪಕ್ಷದ ಹಿರಿಯರ ಮನವಿಗೆ ಸ್ಪಂದಿಸಿ 1998ರ ಮಾರ್ಚ್‌ನಲ್ಲಿ ಅವರು ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡರು. 1999ರ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸಿದಾಗ ಅವರ ವಿರುದ್ಧ ವಿದೇಶಿ ಮೂಲದ ಅಪಪ್ರಚಾರ ನಡೆಯಿತು. ಆದರೆ, ಬಳ್ಳಾರಿಯ ಜನತೆ ಅದಕ್ಕೆ ಮಣಿಯದೆ ಅವರನ್ನು ಅತ್ಯಂತ ಗೌರವದಿಂದ ಗೆಲ್ಲಿಸಿದರು. ಅದೇ ಚುನಾವಣೆಯಲ್ಲಿ ಆಸ್ಕರ್ ಫೆರ್ನಾಂಡಿಸ್ ಅವರ ಸಲಹೆಯಂತೆ, ಬಳ್ಳಾರಿಯಲ್ಲಿ ಸೋನಿಯಾ ವಿರುದ್ಧ ವಿಪಕ್ಷಗಳ ಶಕ್ತಿ ಕೇಂದ್ರೀಕೃತವಾಗುವುದನ್ನು ತಡೆಯುವ ರಣತಂತ್ರದ ಭಾಗವಾಗಿ ನಾನು ಬೆಂಗಳೂರು ದಕ್ಷಿಣದಿಂದ ಸ್ಪರ್ಧಿಸಿದ್ದೆ. ಪಕ್ಷವನ್ನು ಉಳಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿತ್ತು” ಎಂದು ನೆನಪಿಸಿಕೊಂಡರು.

“ಸುಮಾರು 20 ವರ್ಷಗಳ ಕಾಲ ಅವರೊಂದಿಗೆ ದೇಶಾದ್ಯಂತ ಪ್ರವಾಸ ಮಾಡಿದ್ದೇನೆ. ರೈತರ ಆತ್ಮಹತ್ಯೆಗಳು ಸಂಭವಿಸಿದಾಗ ಖುದ್ದಾಗಿ ಭೇಟಿ ನೀಡಿ ಸಾಂತ್ವನ ಹೇಳುತ್ತಿದ್ದರು. ರಾಜಸ್ಥಾನದ ಕಡುಬಿಸಿಲಿನಲ್ಲಿಯೂ ಮರುಭೂಮಿಯ ರೈತರ ಮನೆಗೆ ತೆರಳಿ ಕಷ್ಟ ಆಲಿಸುತ್ತಿದ್ದರು. ದೆಹಲಿಯಲ್ಲಿ ಕುಳಿತು ಭಾಷಣ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕಿ ಬಾತ್’ ರಾಜಕಾರಣಕ್ಕೂ, ಜನರ ಕಣ್ಣೀರು ಒರೆಸುವ ಸೋನಿಯಾ ಅವರ ಜನಪರ ರಾಜಕಾರಣಕ್ಕೂ ಇದೇ ಮೂಲಭೂತ ವ್ಯತ್ಯಾಸ” ಎಂದು ಅವರು ತಿರುಗೇಟು ನೀಡಿದರು.

ದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ಸೇವಾದಳದ ಕಾರ್ಯಕ್ರಮಕ್ಕೆ ಡಾ. ಮನಮೋಹನ್ ಸಿಂಗ್ ಅವರನ್ನು ಆಹ್ವಾನಿಸಿದ್ದಾಗ, ಸಂಸದರಾಗಿ ದೊರೆಯುವ ಸರ್ಕಾರಿ ವಿಮಾನ ಪ್ರಯಾಣ ಸೌಲಭ್ಯವನ್ನು ಪಕ್ಷದ ಕಾರ್ಯಕ್ರಮಕ್ಕೆ ಬಳಸಲು ಅವರು ನಿರಾಕರಿಸಿದ್ದರು. ಈ ವಿಚಾರವನ್ನು ಸೋನಿಯಾ ಗಾಂಧಿ ಅವರ ಗಮನಕ್ಕೆ ತಂದಾಗ, “ಡಾ. ಸಿಂಗ್ ಅವರಂತಹ ಕಳಂಕರಹಿತರ ಪ್ರಾಮಾಣಿಕತೆಯನ್ನು ಗೌರವಿಸಿ ಪಕ್ಷದಿಂದಲೇ ವಿಮಾನದ ಟಿಕೆಟ್ ವ್ಯವಸ್ಥೆ ಮಾಡಿ” ಎಂದು ಸೂಚಿಸಿದ್ದರು ಎಂಬ ಅಪರೂಪದ ಘಟನೆಯನ್ನು ಹರಿಪ್ರಸಾದ್ ಹಂಚಿಕೊಂಡರು.

ಯುಪಿಎ ಸರ್ಕಾರದ ಅವಧಿಯಲ್ಲಿ ಪಕ್ಷದ ಒಳಗಿನ ವಿರೋಧದ ನಡುವೆಯೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ವರ್ಷಕ್ಕೆ 100 ದಿನಗಳ ಉದ್ಯೋಗ), ಮಾಹಿತಿ ಹಕ್ಕು, ಅರಣ್ಯ ಹಕ್ಕು, ಶಿಕ್ಷಣ ಹಕ್ಕು ಹಾಗೂ ಆಹಾರ ಭದ್ರತಾ ಕಾಯ್ದೆಗಳನ್ನು ಜಾರಿಗೆ ತರುವಲ್ಲಿ ಸೋನಿಯಾ ಗಾಂಧಿ ಅವರ ಬದ್ಧತೆ ಕಾರಣ. ಮಹಿಳೆಯರಿಗೆ ಶೇ. 33ರಷ್ಟು ರಾಜಕೀಯ ಮೀಸಲಾತಿ ಕಲ್ಪಿಸುವ ಮಸೂದೆಯನ್ನು 2010ರಲ್ಲಿ ರಾಜ್ಯಸಭೆಯಲ್ಲಿ ಅಂಗೀಕರಿಸುವಲ್ಲಿಯೂ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂದರು.

ಗುಜರಾತ್‌ನಲ್ಲಿ ರಾಜಸ್ಥಾನದ ಸಂಸದರೊಬ್ಬರು ಅಪಘಾತಕ್ಕೀಡಾದಾಗ ಮಧ್ಯರಾತ್ರಿಯೇ ಏರ್ ಆಂಬುಲೆನ್ಸ್ ವ್ಯವಸ್ಥೆ ಮಾಡಿಸಿದ್ದರು. ಆಸ್ಪತ್ರೆ ಸೇರಲು ಹಣವಿಲ್ಲದ ಮಾಜಿ ಸಂಸದರೊಬ್ಬರ ಪತಿಗೆ ಮೋತಿಲಾಲ್ ವೋರಾ ಮೂಲಕ ಆರ್ಥಿಕ ನೆರವು ಕಲ್ಪಿಸಿದ್ದರು. 2013ರಲ್ಲಿ ಛತ್ತೀಸ್‌ಗಢದಲ್ಲಿ ನಕ್ಸಲ್ ದಾಳಿಯಲ್ಲಿ 28 ಮಂದಿ ಕಾಂಗ್ರೆಸ್ಸಿಗರು ಮೃತಪಟ್ಟಾಗ ತೀವ್ರವಾಗಿ ನೊಂದು ರಾತ್ರಿಯೇ ಘಟನಾ ಸ್ಥಳಕ್ಕೆ ತೆರಳಲು ಮುಂದಾಗಿದ್ದರು ಎಂದು ಸೋನಿಯಾ ಅವರ ಮಾನವೀಯತೆಯನ್ನು ಬಿಚ್ಚಿಟ್ಟರು.

​ಸಂಜಯ್, ಇಂದಿರಾ ಹಾಗೂ ರಾಜೀವ್ ಗಾಂಧಿ ಅವರ ಭೀಕರ ಸಾವುಗಳಂತಹ ವೈಯಕ್ತಿಕ ದುರಂತಗಳ ನಡುವೆಯೂ ಅವರು ದೇಶ ತೊರೆಯಲಿಲ್ಲ. 2004ರಲ್ಲಿ ಮೈತ್ರಿಕೂಟ ಅಧಿಕಾರಕ್ಕೆ ಬಂದಾಗ ಪ್ರಧಾನಿ ಹುದ್ದೆಯನ್ನೇ ವಿನಮ್ರವಾಗಿ ನಿರಾಕರಿಸಿ, ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರನ್ನು ಪ್ರಧಾನಿಯನ್ನಾಗಿ ಮಾಡಿದ ಅವರ ನಿರ್ಧಾರ ಭಾರತೀಯ ರಾಜಕೀಯ ಇತಿಹಾಸದಲ್ಲಿಯೇ ಅಪರೂಪದ್ದು. ಅಧಿಕಾರಕ್ಕಿಂತ ದೇಶದ ಹಿತವೇ ಮುಖ್ಯ ಎಂಬುದನ್ನು ಅವರು ಸಾಬೀತುಪಡಿಸಿದರು ಎಂದು ಬಣ್ಣಿಸಿದರು.

ನೆಹರು ಅವರ ‘ದಿ ಡಿಸ್ಕವರಿ ಆಫ್ ಇಂಡಿಯಾ’ ಮತ್ತು ‘ಗ್ಲಿಂಪ್ಸಸ್ ಆಫ್ ವರ್ಲ್ಡ್ ಹಿಸ್ಟರಿ’ ಕೃತಿಯಂತೆಯೇ ಸೋನಿಯಾ ಅವರ ಈ ಆತ್ಮಕಥನವೂ ಸಾರ್ವಜನಿಕ ಜೀವನದ ಮೌಲ್ಯಗಳನ್ನು ಅರ್ಥಮಾಡಿಕೊಳ್ಳಲು ಬಹುಮುಖ್ಯ ಕೃತಿಯಾಗಿದೆ. ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಈ ಪುಸ್ತಕವನ್ನು ಓದಿ, ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ತಮ್ಮನ್ನು ಟೀಕಿಸುವವರ ಬಗ್ಗೆಯೂ ದ್ವೇಷ ಇಟ್ಟುಕೊಳ್ಳಬಾರದು ಎಂಬುದು ಸೋನಿಯಾ ಗಾಂಧಿ ಅವರಿಂದ ಕಲಿತ ಮರೆಯಲಾಗದ ಪಾಠ ಎಂದು ಹರಿಪ್ರಸಾದ್ ಸ್ಮರಿಸಿದರು.

​ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ, ಸಚಿವರಾದ ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪಿ.ವಿ. ಮೋಹನ್, ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋನಿಯಾ ನೆನಪಿನಂಗಳದಲ್ಲಿ ರಾಜಕೀಯದ ಹೊಸ ಹೆಜ್ಜೆಗುರುತು; ಪಂಜಾಬ್ ರಾಜಕಾರಣದ ಹೊಸ ಮಂಥನ,‘ಇಂಡಿಯಾ’ ಒಗ್ಗಟ್ಟಿನ ಪ್ರದರ್ಶನ

ಸೋನಿಯಾ ಗಾಂಧಿಯವರ ‘ಬಿಲಾಂಗಿಂಗ್’ ಆತ್ಮಕಥೆ ಬಿಡುಗಡೆ ಸಮಾರಂಭ ಕೇವಲ ಭಾವನಾತ್ಮಕ ಕಥನವಾಗದೆ,...

ಹಳಿಯಾಳ | ನಿಂತಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಯುವಕ ಸಾವು

ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ...

ಷೇರುದಾರರ ಇಂದಿನ ಜಾಗತಿಕ ಮಂತ್ರ- ‘ಅಮೆರಿಕವನ್ನು ನಂಬಿ ಹಣ ಹೂಡಿ’

ಅಮೆರಿಕನ್ನರು ಮಾತ್ರವಲ್ಲ, ವಿದೇಶಗಳ ಸಾಮಾನ್ಯ ಜನರೂ ಮುಗಿಬಿದ್ದು ಅಮೆರಿಕದ ಷೇರುಗಳನ್ನು ಕೊಳ್ಳುತ್ತಿದ್ದಾರೆ....