ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಗಾಯಕ ಸೋನು ನಿಗಮ್ ಕೊನೆಗೂ ಕನ್ನಡಿಗರ ಬಳಿ ಕ್ಷಮೆಯಾಚಿಸಿದ್ದಾರೆ. ಕನ್ನಡ ಚಿತ್ರರಂಗದಿಂದ ಸೋನು ನಿಗಮ್ ಅವರನ್ನು ನಿಷೇಧಿಸಿದ ಬಳಿಕ “ಕ್ಷಮಿಸಿ ಕರ್ನಾಟಕ” ಎಂದು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.
“ಕ್ಷಮಿಸಿ ಕರ್ನಾಟಕ. ನಿಮ್ಮ ಮೇಲೆ ನನಗಿರುವ ಪ್ರೀತಿ ನನ್ನ ಅಹಂಗಿಂತ ದೊಡ್ಡದು. ಸದಾ ನಿಮ್ಮನ್ನು ಪ್ರೀತಿಸುತ್ತೇನೆ” ಎಂದು ಸೋನು ನಿಗಮ್ ತನ್ನ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದನ್ನು ಓದಿದ್ದೀರಾ? BREAKING NEWS | ವಿವಾದಾತ್ಮಕ ಹೇಳಿಕೆ; ಕನ್ನಡ ಚಿತ್ರರಂಗದಿಂದ ಗಾಯಕ ಸೋನು ನಿಗಮ್ ನಿಷೇಧ
ಏಪ್ರಿಲ್ 25ರಂದು ಬೆಂಗಳೂರಿನ ಅವಲಹಳ್ಳಿಯ ಖಾಸಗಿ ಕಾಲೇಜೊಂದರಲ್ಲಿ ನಡೆದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಕನ್ನಡದ ಹಾಡು ಹಾಡುವಂತೆ ಕೇಳಿದ ವಿದ್ಯಾರ್ಥಿಗಳ ಮೇಲೆ ಹರಿಹಾಯ್ದ ಸೋನು ನಿಗಮ್, ‘ಕನ್ನಡ ಕನ್ನಡ ಇದೇ ಕಾರಣಕ್ಕೆ ಪಹಲ್ಗಾಮ್ ದಾಳಿಯಾಗಿದ್ದು’ ಎಂದು ಹೇಳಿದ್ದರು.
ಸೋನು ನಿಗಮ್ ಈ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಕನ್ನಡ ಚಿತ್ರರಂಗದಿಂದ ಅವರನ್ನು ನಿಷೇಧಿಸಬೇಕೆಂಬ ಆಗ್ರಹಗಳೂ ಕೇಳಿಬಂದಿತ್ತು. ಈ ಒತ್ತಾಯದ ಬೆನ್ನಲ್ಲೇ ಫಿಲ್ಮ್ ಚೇಂಬರ್‌ನ ಪದಾಧಿಕಾರಿಗಳು, ಸಂಗೀತ ನಿರ್ದೇಶಕರು, ಗಾಯಕರು, ನಿರ್ಮಾಪಕರ ಸಭೆ ನಡೆಸಿ ಸೋನು ನಿಗಮ್ ಅವರನ್ನು ಕನ್ನಡ ಚಿತ್ರರಂಗದಿಂದ ತಾತ್ಕಾಲಿಕವಾಗಿ ನಿಷೇಧಿಸಿದ್ದಾರೆ.
ಕ್ಷಮೆ ಕೇಳುವವರೆಗೂ ಕನ್ನಡ ಚಿತ್ರರಂಗದಿಂದ ಸೋನು ನಿಗಮ್ ಅವರನ್ನು ನಿಷೇಧಿಸಲಾಗುವುದು ಎಂದು ಹೇಳಿದೆ. ಫಿಲ್ಮ್ ಚೇಂಬರ್ ಈ ನಿರ್ಧಾರ ಕೈಗೊಳ್ಳುವವರೆಗೂ ಸೋನು ನಿಗಮ್ ಕ್ಷಮೆ ಕೇಳಿರಲಿಲ್ಲ. ಆದರೆ ನಿನ್ನೆ ರಾತ್ರಿ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿ ಕ್ಷಮೆಯಾಚಿಸಿದ್ದಾರೆ.
